ಕಲ್ಪ ಮೀಡಿಯಾ ಹೌಸ್ | ಸೊರಬ |
ಪಟ್ಟಣದ ಶ್ರೀ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಸತತ ಐದನೆಯ ಬಾರಿಗೆ ಶೇ.100ರಷ್ಟು ಫಲಿತಾಂಶ ದೊರೆತಿದ್ದು, ತಾಲೂಕಿನಲ್ಲಿ ಕೀರ್ತಿ ಗಳಿಸಿದೆ.
ಶಾಲೆಯ ವಿದ್ಯಾರ್ಥಿನಿ ಎಸ್. ಸಮೀಕ್ಷಾ 625ಕ್ಕೆ 625 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುವುದೊರೊಂದಿಗೆ ತಾಲೂಕಿಗೆ ಹಾಗೂ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾಳೆ.
ಸಂಸ್ಥೆಯ 65 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 40 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಹಿಬಾ ಕೌಸರ್ 617 ಅಂಕಗಳೊಂದಿಗೆ ಶಾಲೆಗೆ ದ್ವಿತೀಯ ಸ್ಥಾನ, ಅಶ್ವಿನ್ ಎ. ಹಳ್ಳಕ್ಕನವರ್ ಮತ್ತು ಸಿ. ಭಾವನಾ 614 ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನ ಹಂಚಿಕೊಂಡಿದ್ದಾರೆ.
ಕನ್ನಡ ವಿಷಯದಲ್ಲಿ 12 ವಿದ್ಯಾರ್ಥಿಗಳು 125 ಅಂಕ, ಇಂಗ್ಲೀಷ್ ವಿಷಯದಲ್ಲಿ 3 ವಿದ್ಯಾರ್ಥಿಗಳು 100 ಅಂಕ, ಹಿಂದಿ ವಿಷಯದಲ್ಲಿ 14 ವಿದ್ಯಾರ್ಥಿಗಳು 100 ಅಂಕ, ಸಮಾಜ ವಿಷಯದಲ್ಲಿ 8 ವಿದ್ಯಾರ್ಥಿಗಳು 100 ಅಂಕ, ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ಓರ್ವ ವಿದ್ಯಾರ್ಥಿನಿ 100 ಅಂಕ ಪಡೆದಿದ್ದಾರೆ.
ಉತ್ತಮ ಅಂಕಗಳನ್ನು ಗಳಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕ ವೃಂದದವರಿಗೆ ಮತ್ತು ಪೋಷಕರಿಗೆ ಶ್ರೀ ಸ್ವಾಮಿ ವಿವೇಕಾನಂದ ಬೋಧನಾ ಸಂಸ್ಥೆಯ ಅಧ್ಯಕ್ಷರಾದ ದಿವಾಕರ ಭಾವೆಯವರು ಮತ್ತು ಎಲ್ಲಾ ಪದಾಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಶಾಲೆಯ ಸಮೀಕ್ಷಾ 625, ಹಿಬಾ ಕೌಸರ್ 617, ಅಶ್ವಿನ್ 614, ಭಾವನಾ 614, ಶ್ರೀವತ್ಸಾ 613, ಜ್ಞಾನವರ್ಧನ 609, ಸಮರ್ಥ 609, ಚಿರಂತ 608, ಶ್ರೀ ರಕ್ಷಾ 608, ಹವನಾ ಎನ್ 598, ಮಾನ್ಯ ವಿ 598, ಐಶ್ವರ್ಯ 595, ಮುಕ್ತ 595 ಅಂಕಗಳನ್ನು ಗಳಿಸಿದ್ದಾರೆ.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post