ಕಲ್ಪ ಮೀಡಿಯಾ ಹೌಸ್ | ಸೊರಬ |
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತದಲ್ಲಿ ಜೈನ ಮಂದಿರದ ಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಅತ್ಯಂತ ದುಃಖದ ಹಾಗೂ ಖಂಡನೀಯ ವಿಷಯ ಎಂದು ಲಕ್ಕವಳ್ಳಿಯ ಮೋಕ್ಷ ಮಂದಿರ ಜೈನ ಮಠದ ಶ್ರೀ ವೃಷಭಸೇನ ಭಟ್ಟಾರಕ ಸ್ವಾಮೀಜಿ ವಿಷಾಧ ವ್ಯಕ್ತಪಡಿಸಿದರು.
ತಾಲೂಕಿನ ಲಕ್ಕವಳ್ಳಿಯ ಶ್ರೀ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ಕುಮಾರನಂದಿ ಮಹಾರಾಜರನ್ನು ತೀವ್ರ ಹಿಂಸಾತ್ಮಕವಾಗಿ ಹತ್ಯೆ ಮಾಡಲಾಗಿದೆ. ಜಗತ್ತಿಗೆ ಶಾಂತಿ ಮತ್ತು ಅಹಿಂಸೆಯನ್ನು ಬೋಧಿಸಿದ ಜೈನ ಸಮಾಜದ ಮುನಿಗಳನ್ನು ಅಮಾನುಷವಾಗಿ ಕೊಲೆ ಮಾಡಿರುವುದು ಘೋರ ಅಪರಾಧವಾಗಿದ್ದು, ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
Also read: ಅಮರನಾಥ ಯಾತ್ರೆ ಮಾರ್ಗಮಧ್ಯೆ ಗುಡ್ಡ ಕುಸಿತ: ಸಂಕಷ್ಟದಲ್ಲಿ 83 ಮಂದಿ ಕನ್ನಡಿಗರು

ಈ ಸಂದರ್ಭದಲ್ಲಿ ಸುರೇಶ್ ವೀರಾಪುರ, ಸೋಮಪ್ಪ ಜೈನರ್ ತಲಗಡ್ಡೆ ಸೇರಿದಂತೆ ಇತರರಿದ್ದರು.
ವರದಿ: ಮಧುರಾಮ್, ಸೊರಬ











Discussion about this post