ಕಲ್ಪ ಮೀಡಿಯಾ ಹೌಸ್ | ಸೊರಬ |
ನದಿಯಲ್ಲಿ ಎತ್ತುಗಳ ಮೈ ತೊಳೆಯಲು ಹೋಗಿ ಕಾಲು ಜಾರಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ತಾಲೂಕಿನ ಮೂಡಿ ಗ್ರಾಮದಲ್ಲಿ ನಡೆದಿದೆ.
ಮೂಡಿ ಗ್ರಾಮದ ಶಶಿಧರ ಗೂಳೇರ್ (42) ಮೃತ ದುರ್ದೈವಿ. ಇಂದು ಬೆಳಗ್ಗೆ ಗ್ರಾಮದ ವರದಾ ನದಿಯಲ್ಲಿ ಎತ್ತುಗಳ ಮೈತೊಳೆಯಲು ಹೋದ ಸಂದರ್ಭದಲ್ಲಿ ಶಶಿಧರ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸತತ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಶವವನ್ನು ಪತ್ತೆಹಚ್ಚಿದ್ದಾರೆ.
ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಕೆ. ಮಹಾಭಲೇಶ್ವರ, ಸಿಬ್ಬಂದಿ ಡಿ.ವಿ. ಮಂಜುನಾಥ, ವಿ. ನಾಗರಾಜ, ಪರಶುರಾಮ, ಡಿ.ಕೆ. ನಾಗರಾಜ, ಡಿ.ಬಿ. ರಾಜೇಂದ್ರ ಪಾಲ್ಗೊಂಡಿದ್ದರು.
ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post