No Result
View All Result
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ
English Articles

South Western Railway | Praveen Takes Charge as Hubballi Divisional Public Relations Officer

by ಕಲ್ಪ ನ್ಯೂಸ್
March 28, 2026
0

Kalpa Media House  |  Hubballi | S.P. Praveen, an officer of the Indian Railway Service of Signal Engineers (IRSSE), 2015...

Read moreDetails
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
  • Advertise With Us
  • Grievances
  • About Us
  • Contact Us
Monday, March 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಬಡವರ ಬಗ್ಗೆ ಕಾಳಜಿ ಇಲ್ಲ: ಮಧುಬಂಗಾರಪ್ಪ ಆಕ್ರೋಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 11, 2021
in ಸೊರಬ
0
ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಬಡವರ ಬಗ್ಗೆ ಕಾಳಜಿ ಇಲ್ಲ: ಮಧುಬಂಗಾರಪ್ಪ ಆಕ್ರೋಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಸೊರಬ: ರಾಜ್ಯ ಮತ್ತು ಕೇಂದ್ರದಲ್ಲಿ ಬ್ಯುಸಿನೆಸ್ ಜನತಾ ಪಕ್ಷ ಆಡಳಿತದಲ್ಲಿದ್ದು, ಬಡವರ ಬಗ್ಗೆ ಕಾಳಜಿ ಇಲ್ಲದೇ ಕೇವಲ ಕಾರ್ಪೋರೇಟ್ ಸಂಸ್ಥೆಗಳಿಗೆ ಮಣೆಹಾಕುತ್ತಿರುವುದರಿಂದ ಭವಿಷ್ಯದಲ್ಲಿ ದೇಶ ಅಧೋಗತಿಗೆ ತೆರಳಲಿದೆ ಎಂದು ಕಾಂಗ್ರೆಸ್ ನಾಯಕ, ಮಾಜಿ ಶಾಸಕ ಎಸ್. ಮಧುಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಬಂಗಾರಧಾಮದಲ್ಲಿ ಮಂಗಳವಾರ ಆನವಟ್ಟಿ ಮತ್ತು ಸೊರಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ದೇಶದ ಸ್ವಾತಂತ್ರ್ಯದಿಂದ ಹಿಡಿದು ಏಳು ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಕೊಡುಗೆ ಸಾಕಷ್ಟಿದೆ. ಬಡವರ ಮತ್ತು ಶೋಷಿತರ ಪರವಾಗಿ ಅನೇಕ ಯೋಜನೆಗಳು ಹಾಗೂ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ಜನತೆಯ ಹಿತ ಕಾಯುವಲ್ಲಿ ಕಾಂಗ್ರೆಸ್ ಮುಂಚೂಣಿಯಾಗಿ ಕಾರ್ಯನಿರ್ವಹಿದ್ದು, ಪ್ರಸ್ತುತ ದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ವ್ಯಾಪಾರಿ ದೃಷ್ಟಿಯಿಂದಲೇ ನೋಡುತ್ತಿದೆ. ನಾಡಿನ ಸಂಪತ್ತನ್ನು ಹರಾಜು ಹಾಕಲು ಹೊರಟಿರುವ ಕ್ರಮ ಸಲ್ಲದು. ಕೇಂದ್ರ ಸರ್ಕಾರ ಮಂಡಿಸಲು ಉದ್ಧೇಶಿಸಿದ್ದ ವಿದ್ಯುತ್ ವಿದೇಯದ ತಿದ್ದುಪಡಿ ಕಾಯ್ದೆಯು ಮಂಡನೇಗೂ ಮುನ್ನವೇ ಜನತೆಯಿಂದಲೇ ವಿರೋಧ ವ್ಯಕ್ತವಾಗುತ್ತಿರುವುದನ್ನು ಮನಗಂಡು ಹಿಂದೆ ಸರಿದಿದ್ದಾರೆ. ಇಂತಹ ಜನ ವಿರೋಧಿ ಕಾಯ್ದೆ ಮಂಡಿಸುವ ಪೂರ್ವದಲ್ಲಿಯೇ ಬಿದ್ದಿರುವುದು ಜನ ಶಕ್ತಿಗೆ ಹೆದರಿರುವುದು ಸ್ಪಷ್ಟವಾಗಿ ಗೋಚರವಾಗುತ್ತದೆ ಎಂದರು.


ತಾವು ಕಳೆದ ಮೂರ್‍ನಾಲ್ಕು ತಿಂಗಳ ಹಿಂದೆಯೇ ಮಾನಸಿಕವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೆನು. ಆದರೆ, ಕೊರೋನಾ ಮತ್ತಿತರರ ಸಮಸ್ಯೆಗಳಿಂದ ಪಕ್ಷ ಸೇರ್ಪಡೆ ಕಾರ್ಯಕ್ರಮ ವಿಳಂಭವಾಯಿತು. ರಾಜ್ಯದಲ್ಲಿ ಮತ್ತು ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯ ದೃಷ್ಟಿಯಿಂದ ಸಾಕಷ್ಟು ಜವಾಬ್ದಾರಿಗಳಿದ್ದು, ಈ ನಿಟ್ಟಿನಲ್ಲಿ ಪಕ್ಷದ ವರಿಷ್ಠರ ಸೂಚನೆಯಂತೆ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಮತ್ತು ಬಿಜೆಪಿಯ ಜನವಿರೋಧಿ ಆಡಳಿತದಿಂದ ಜನತೆ ಬೇಸತ್ತಿದ್ದು ಮುಂದಿನ ದಿನಗಳಲ್ಲಿ ರಾಜ್ಯದಲ್ಲೂ ಸಹ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ ಎಂದರು.

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ದುಡಿದು ಬದುಕುವ ವರ್ಗಕ್ಕೆ ಭೂಮಿಯನ್ನು ಕೊಡಿಸುವ ಮಹತ್ವದ ಕಾರ್ಯ ಮಾಡಿದ್ದರು. ಅವರು ಊಟ ಮಾಡಿದ ಮನೆಯವರ ಬಗರ್‌ಹುಕುಂ ಭೂಮಿಯನ್ನೇ ವಜಾಗೊಳಿಸುತ್ತಿರುವ ಹಾಲಿ ಶಾಸಕರು ಬಂಗಾರಪ್ಪನವರ ಮಗನಾಗಿ ಇಂತಹ ಕೆಲಸಕ್ಕೆ ಕೈ ಹಾಕಿರುವುದು ತಂದೆಗೆ ಮಾಡಿದ ಅವಮಾನವೇ ಸರಿ ಎಂದು ಬೇಸರಿಸಿದ ಅವರು, ಪಟ್ಟಣದ ಸರ್ವೆ ನಂ. 113ರಲ್ಲಿ ಕಟ್ಟಿದ ಮನೆಗಳನ್ನು ತೆರವು ಮಾಡಲು ಬಿಡುವುದಿಲ್ಲ. ಜೊತೆಗೆ ಬಗರ್‌ಹುಕುಂ ಮತ್ತು ಅರಣ್ಯ ಹಕ್ಕು ಸಾಗುವಳಿದಾರರು ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ನಿಮ್ಮೊಂದಿಗೆ ನಾನಿದ್ದೇನೆ ಎಂದು ಭರವಸೆ ನೀಡಿದರು.

ಇದಕ್ಕೊ ಮೊದಲು ಯುವ ಕಾಂಗ್ರೆಸ್ ಕಾರ್ಯಕರ್ತರು ತಾಲೂಕಿನ ಗಡಿ ಭಾಗ ಛತ್ರದಹಳ್ಳಯಿಂದ ಬೈಕ್ ರ್‍ಯಾಲಿ ಮೂಲಕ ಮಧು ಬಂಗಾರಪ್ಪ ಅವರನ್ನು ಪಟ್ಟಣಕ್ಕೆ ಬರಮಾಡಿಕೊಂಡರು, ನಂತರ ಪಟ್ಟಣದ ಪ್ರಮುಖ ವೃತ್ತ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಸೊರಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಬಿ. ಅಣ್ಣಪ್ಪ ಹಾಲಘಟ್ಟ, ಆನವಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಸಿ. ಪಾಟೀಲ್ ಮಾತನಾಡಿದರು.

ಪಕ್ಷದ ಜಿಲ್ಲಾ ಉಪಾಧ್ಯಕ್ಷ ಶ್ರೀಧರ್ ಆರ್. ಹುಲ್ತಿಕೊಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ಎಂ. ಕರುಣಾಕರ, ತಾಪಂ ಉಪಾಧ್ಯಕ್ಷ ಸುರೇಶ್ ಹಾವಣ್ಣವರ್, ಮುಖಂಡರಾದ ಎಚ್. ಗಣಪತಿ, ಎಂ.ಡಿ. ಶೇಖರ್, ಕೆ.ವಿ. ಗೌಡ, ರಾಜಶೇಖರ ಕುಪ್ಪಗಡ್ಡೆ, ಕೆ. ಮಂಜುನಾಥ್, ಜೆ. ಪ್ರಕಾಶ್, ಜಯಶೀಲಗೌಡ, ಹಬೀಬುಲ್ಲಾ ಹವಾಲ್ದಾರ್, ನಾಗರಾಜ ಚಿಕ್ಕಸವಿ, ನಾಗರಾಜ ಚಂದ್ರಗುತ್ತಿ, ಮಾರ್‍ಯಾಪ್ಪ ಬೆನ್ನೂರು, ಪರಶುರಾಮ ಸಣ್ಣಬೈಲ್, ಕಲ್ಲಪ್ಪ ಚಿತ್ರಟ್ಟಹಳ್ಳಿ, ಪುರಸಭೆ ಸದಸ್ಯರಾದ ಶ್ರೀರಂಜನಿ, ಡಿ.ಎಸ್. ಪ್ರಸನ್ನಕುಮಾರ್, ಆಫ್ರೀನಾ, ಸುಲ್ತಾನ ಬೇಗಂ ಸೇರಿದಂತೆ ಮತ್ತಿತರರಿದ್ದರು.
ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsSorabaಮಧುಬಂಗಾರಪ್ಪಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share202Tweet123Send
Previous Post

ಬೈಂದೂರು, ಮೂಕಾಂಬಿಕಾ ಅಭಯಾರಣ್ಯದಲ್ಲಿ ಪ್ರಾಣಿ ರಕ್ಷಣಾ ಕೇಂದ್ರ ಸ್ಥಾಪನೆಗೆ ಸಂಸದರ ಪ್ರಯತ್ನ

Next Post

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಬೈಕ್ : ಓರ್ವ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಬೈಕ್ : ಓರ್ವ ಸಾವು

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಬೈಕ್ : ಓರ್ವ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
A Memorable Violin Concert By Nadavallabha Vid VV Ravi

A Memorable Violin Concert By Nadavallabha Vid VV Ravi

March 29, 2026
ನೈರುತ್ಯ ರೈಲ್ವೆ ದಿವ್ಯಾಂಗಜನ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಿರಣ್ ಬಿ. ಚಿನ್ನಾರಾಥೋಡ್ ಮರು ಆಯ್ಕೆ

ನೈರುತ್ಯ ರೈಲ್ವೆ ದಿವ್ಯಾಂಗಜನ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಿರಣ್ ಬಿ. ಚಿನ್ನಾರಾಥೋಡ್ ಮರು ಆಯ್ಕೆ

March 29, 2026
ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

March 29, 2026
ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

March 29, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಎಲ್ಲಾ ರೋಗಗಳಿಗೆ ಮಹಾ ಔಷಧ | ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL