ಕಲ್ಪ ಮೀಡಿಯಾ ಹೌಸ್ | ಚಂದ್ರಗುತ್ತಿ |
ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನದಲ್ಲಿ ಕಳ್ಳತನಕ್ಕೆ ಪ್ರಯತ್ನಪಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೊರಬ ತಾಲೂಕು ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಸೊರಬ ತಾಲೂಕಿನ ಬೋವಿ ಕಾಲೋನಿ ನಿವಾಸಿಗಳಾದ ಪ್ರವೀಣ (33), ದೇವರಾಜು (50), ಭೀಮಪ್ಪ (35) ಬಂಧಿತ ಆರೋಪಿಗಳು.
ದೇವಸ್ಥಾನದ ಪ್ರಭಾರ ಕಾರ್ಯ ನಿರ್ವಣಾಧಿಕಾರಿ ಶಿವಪ್ರಸಾದ್ ನೀಡಿದ ದೂರಿನ ಮೇರೆಗೆ ಸೊರಬ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸದರಿ ತನಿಖಾ ತಂಡದ ಉತ್ತಮ ಕಾರ್ಯವನ್ನು ಶಿವಮೊಗ್ಗ ಜಿಲ್ಲೆ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿ ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post