ಕಲ್ಪ ಮೀಡಿಯಾ ಹೌಸ್ | ಸೊರಬ |
ಕುಡಿಯುವ ನೀರು ಪೂರೈಸಲು ಆಗ್ರಹಿಸಿ ತಾಲ್ಲೂಕಿನ ಶಕುನವಳ್ಳಿ ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಗ್ರಾಮದ ಮಹಿಳೆಯರು ಸೇರಿದಂತೆ ಅನೇಕರು ಸಮಸ್ಯೆ ಹೇಳಿಕೊಳ್ಳಲು ಪಂಚಾಯಿತಿ ಕಚೇರಿಗೆ ಹೋದರು. ಆದರೆ ಸಮಸ್ಯೆಗೆ ಸ್ಪಂದನೆ ಸಿಗದ ಕಾರಣ ಸ್ಥಳದಲ್ಲೇ ಕೆಲ ಹೊತ್ತು ಧರಣಿ ಕುಳಿತು ಸಂಬಂಧಿತ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದರು.

Also read: ಸೊರಬ | ಮುಸ್ಲಿಂ ಮೀಸಲಿಗೆ ಸಂವಿಧಾನ ಬದಲಾವಣೆ ಹೇಳಿಕೆ | ಡಿಸಿಎಂ ಡಿಕೆಶಿ ವಿರುದ್ಧ ಬಿಜೆಪಿ ಪ್ರತಿಭಟನೆ
ಗ್ರಾಮಸ್ಥರ ಅಹವಾಲು ಸ್ವೀಕರಿಸಿ ಪ್ರತಿಕ್ರಿಯಿಸಿದ ಗ್ರಾಪಂ ಪಿಡಿಓ ರಮೇಶಪ್ಪ ಮಾತನಾಡಿ, ಗ್ರಾಮದಲ್ಲಿ ನೀರಿನ ಸಮಸ್ಯೆಯ ಕುರಿತು ಈವರೆಗೂ ಮಾಹಿತಿ ಇರಲಿಲ್ಲ. ನೀರು ಗಂಟಿಗಳನ್ನು ಕರೆಸಿ, ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆಯಾಗದಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post