ಕಲ್ಪ ಮೀಡಿಯಾ ಹೌಸ್ | ಸೊರಬ |
ಆಕಸ್ಮಿಕವಾಗಿ ಕೆರೆಯಲ್ಲಿ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ತಾಲೂಕಿನ ಚಂದ್ರಗುತ್ತಿ ಸಮೀಪದ ಬೆನ್ನೂರು ಗ್ರಾಮದ ಕೆರೆಯಲ್ಲಿ ಗುರುವಾರ ನಡೆದಿದೆ.
ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಮಾಸೂರು ಗ್ರಾಮದ ಲಕ್ಷ್ಮಣ ಸಾವಜ್ಜಿ (50) ಮೃತ ದುರ್ಧೈವಿ.
ಬೆನ್ನೂರು ಗ್ರಾಮಕ್ಕೆ ಕೂಲಿ ಕೆಲಸಕ್ಕೆಂದು ಆಗಮಿಸಿದ್ದ ಲಕ್ಷ್ಮಣ ಸಾವಜ್ಜಿ ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಗುರುವಾರ ಮಧ್ಯಾಹ್ನ ಬೆನ್ನೂರು ಗ್ರಾಮದ ಕೆರೆಯಲ್ಲಿ ಶವ ಪತ್ತೆಯಾಗಿದೆ. ಆಕಸ್ಮಿಕವಾಗಿ ಕೆರೆಗೆ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗುತ್ತಿದ್ದು, ವಿಷಯ ತಿಳಿದು ಸ್ಥಳಕ್ಕೆ ಆಗ್ನಿ ಶಾಮಕ ಠಾಣೆಯ ಸಿಬ್ಬಂದಿ ಕೆರೆಯಿಂದ ಶವವನ್ನು ಮೇಲೆತ್ತಿದ್ದಾರೆ.
ಅಗ್ನಿ ಶಾಮಕ ಠಾಣೆಯ ಠಾಣಾಧಿಕಾರಿ ಮಹಾಬಲೇಶ್ವರ, ಸಿಬ್ಬಂದಿ ಡಿ.ವಿ. ಮಂಜುನಾಥ್, ಮಹೇಶ್ ಮಡಿವಾಳ, ಶ್ರೀಶೈಲ ಚಿಪ್ಪಲಕಟ್ಟಿ, ಎನ್.ಜಿ. ಪ್ರದೀಪ, ಎಚ್.ಎಂ. ಪ್ರಸನ್ನ ಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post