No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ವಿಶ್ವ ಪರಿಸರ ದಿನ | ಯುವಕರಲ್ಲಿ ಗಿಡ ನೆಡುವ ಮನೋಭಾವ ಬೆಳೆಸಬೇಕು | ಹರತಾಳು ಹಾಲಪ್ಪ

kalpa News by kalpa News
June 5, 2026
in ಸೊರಬ
1
ವಿಶ್ವ ಪರಿಸರ ದಿನ | ಯುವಕರಲ್ಲಿ ಗಿಡ ನೆಡುವ ಮನೋಭಾವ ಬೆಳೆಸಬೇಕು | ಹರತಾಳು ಹಾಲಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಪರಿಸರವು ಕೇವಲ ಮನುಷ್ಯನಿಗಷ್ಟೇ ಸೀಮಿತವಾಗಿಲ್ಲ; ಸಕಲ ಜೀವಜಗತ್ತಿನ ಅಸ್ತಿತ್ವಕ್ಕೂ ಅವಶ್ಯಕವಾಗಿದೆ. ಹೀಗಾಗಿ ಪರಿಸರದ ಬಗ್ಗೆ ಕಾಳಜಿ ಮತ್ತು ಜವಾಬ್ದಾರಿ ಪ್ರತಿಯೊಬ್ಬರಲ್ಲೂ ಮೂಡಬೇಕಿದ್ದು, ವಿಶೇಷವಾಗಿ ಯುವ ಸಮೂಹದಲ್ಲಿ ಗಿಡ ನೆಡುವ ಹಾಗೂ ಪರಿಸರ ಸಂರಕ್ಷಣೆಯ ಮನೋಭಾವ ಬೆಳೆಸಬೇಕು ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದರು.

ತಾಲ್ಲೂಕಿನ ಹರೀಶಿ ಗ್ರಾಮದ ವಿನಾಯಕ ಸ್ಮಾರಕ ಕ್ರೀಡಾಂಗಣದಲ್ಲಿ ರಾಘವಿ ಚಾರಿಟಬಲ್ ಟ್ರಸ್ಟ್ ಹಾಗೂ ಸೇವಾ ಫೌಂಡೇಷನ್ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಬೃಹತ್ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

“ಪರಿಸರವು ವಿಶಾಲವಾದ ಪ್ರಪಂಚದಂತೆ. ವಿಶ್ವದ ಪ್ರತಿಯೊಂದು ಜೀವಿಗೂ ಅದರ ಅಗತ್ಯವಿದೆ. ಮಲೆನಾಡು ಪ್ರದೇಶದ ಜನರು ಪರಿಸರವನ್ನು ಉಳಿಸಿ ಬೆಳೆಸುವ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು. ಗಿಡ ನೆಡುವುದು ಮಾತ್ರವಲ್ಲ, ಅವುಗಳ ಪಾಲನೆ-ಪೋಷಣೆಯೂ ಅಷ್ಟೇ ಮುಖ್ಯವಾಗಿದೆ” ಎಂದು ಹೇಳಿದರು.ಮಲೆನಾಡಿನಂತಹ ಹಸಿರು ಪರಿಸರವನ್ನು ಉಳಿಸಿಕೊಳ್ಳುವ ಅಗತ್ಯವಿದ್ದು, ಪ್ರಕೃತಿಯೊಂದಿಗೆ ಬದುಕುವ ಸಂಸ್ಕೃತಿ ಬೆಳೆಸಿಕೊಳ್ಳಬೇಕು. ಪರಿಸರದ ಮಹತ್ವವನ್ನು ಅನೇಕ ಕವಿಗಳು ತಮ್ಮ ಕೃತಿಗಳ ಮೂಲಕ ಸಾರಿದ್ದು, ಅದರ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದರು.

ಇಂದಿನ ಮಕ್ಕಳು ಮತ್ತು ಯುವಕರು ಮೊಬೈಲ್ ಬಳಕೆಗೆ ಹೆಚ್ಚು ಸಮಯ ಮೀಸಲಿಡುತ್ತಿರುವುದು ಕಳವಳಕಾರಿ. ಪರಿಸರ, ಪ್ರಕೃತಿ ಮತ್ತು ಜೀವಜಗತ್ತಿನ ಕುರಿತು ಅಧ್ಯಯನ ಮಾಡುವ ಮೂಲಕ ಜಾಗೃತಿ ಬೆಳೆಸಿಕೊಳ್ಳಬೇಕು. ಪರಿಸರ ಸಂರಕ್ಷಣೆಯ ಅರಿವು ಬಾಲ್ಯದಿಂದಲೇ ಮೂಡಿಸುವ ಅಗತ್ಯವಿದೆ ಎಂದು ಸಲಹೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಘವಿ ಚಾರಿಟಬಲ್ ಟ್ರಸ್ಟ್ ಹಾಗೂ ಸೇವಾ ಫೌಂಡೇಷನ್ ಅಧ್ಯಕ್ಷ ರಾಘವೇಂದ್ರ ನಾಯ್ಕ ಮಾತನಾಡಿ, ನಮ್ಮ ಸುತ್ತಮುತ್ತಲಿನ ವಾತಾವರಣವೇ ಪರಿಸರವಾಗಿದ್ದು, ನಿಸರ್ಗವು ಅದರ ಸಮತೋಲನವನ್ನು ಕಾಪಾಡುತ್ತದೆ. ಆದರೆ ಮನುಷ್ಯನ ಅನಪೇಕ್ಷಿತ ಹಸ್ತಕ್ಷೇಪ, ಸ್ವಾರ್ಥ ಹಾಗೂ ಯೋಜನಾರಹಿತ ಚಟುವಟಿಕೆಗಳಿಂದ ಪರಿಸರದ ಸಮತೋಲನ ಕುಸಿಯುತ್ತಿದೆ ಎಂದು ಹೇಳಿದರು.

ಮಾನವನ ಆರೋಗ್ಯವು ಪರಿಸರವನ್ನು ಅವಲಂಬಿಸಿದ್ದು, ಪರಿಸರದ ಆರೋಗ್ಯದ ಕಡೆಗೆ ಗಮನ ನೀಡುವುದು ಅತ್ಯಂತ ಅವಶ್ಯಕವಾಗಿದೆ. ಪರಿಸರ ನಾಶದಿಂದಾಗಿ ವಾತಾವರಣದಲ್ಲಿ ಉಷ್ಣತೆಯ ಪ್ರಮಾಣ ಹೆಚ್ಚುತ್ತಿದ್ದು, ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಚಿಂತನೆಯನ್ನು ಬದಲಾಯಿಸಿಕೊಂಡು ಪರಿಸರ ಸಂರಕ್ಷಣೆಗೆ ಮುಂದಾಗಬೇಕಿದೆ ಎಂದರು.ಮಕ್ಕಳಲ್ಲಿ ಪರಿಸರದ ಬಗ್ಗೆ, ಸುತ್ತಮುತ್ತಲಿನ ವಾತಾವರಣವನ್ನು ಶುಚಿಯಾಗಿ ಇಡುವ ಬಗ್ಗೆ ಹಾಗೂ ಪರಿಸರವನ್ನು ಬೆಳೆಸುವ ಕುರಿತು ಅರಿವು ಮೂಡಿಸುವ ಮೂಲಕ ಜಾಗೃತಿ ಬೆಳೆಸುವುದು ಅಗತ್ಯವಾಗಿದೆ. ಪರಿಸರ ದಿನಾಚರಣೆ ಕೇವಲ ಒಂದು ದಿನದ ಆಚರಣೆಯಾಗದೆ, ಪರಿಸರ ಸಂರಕ್ಷಣೆ ಜೀವನದ ಭಾಗವಾಗಬೇಕು. ಸಮಾಜದ ಪ್ರತಿಯೊಬ್ಬರೂ ಪರಿಸರ ಕಾಳಜಿ ವಹಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಶಾಲಾ ಪಠ್ಯಕ್ರಮದಲ್ಲಿ ಕೃಷಿ ಹಾಗೂ ಪರಿಸರ ಸಂಬಂಧಿತ ವಿಷಯಗಳಿಗೆ ಹೆಚ್ಚಿನ ಆದ್ಯತೆ ನೀಡಿ ಮಕ್ಕಳಲ್ಲಿ ಪ್ರಕೃತಿ ಮತ್ತು ಕೃಷಿಯ ಬಗ್ಗೆ ಕಾಳಜಿ ಬೆಳೆಸಬೇಕಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಶಿವಕುಮಾರ್ ಕಡಸೂರು, ರಾಜು ಕೆಂಜಿಕೊಪ್ಪ, ಹೊಳಿಯಮ್ಮ, ಈಶ್ವರ ಚನ್ನಪಟ್ಟಣ, ಸುರೇಶ್ ಉದ್ರಿ, ಜಿ.ಎಸ್. ಹೆಗಡೆ, ರಾಜು ಮಾವಿನಬಳ್ಳಿಕೊಪ್ಪ, ವಜ್ರಕುಮಾರ್, ಶ್ರೀನಿವಾಸ್ ಭಟ್, ಕೃಷ್ಣಪ್ಪ, ಮಹೇಶ್, ಗಣೇಶ್ ಆಚಾರ್, ಶ್ರೀಧರ್ ಡಿ.ಪಿ. ಸೇರಿದಂತೆ ಹಲವರು ಭಾಗವಹಿಸಿದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿಸಂಪರ್ಕಿಸಿ: Whatsapp: 9008761663, 9481252093 – info@kalpa.newsKalahamsa Infotech private limited

Tags: Haratalu HalappaLocal NewsMalnad NewsShimogaShivamoggaShivamogga NewsSorabaworld environment day
Share206Tweet129Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಶ್ವ ಪರಿಸರ ದಿನಾಚರಣೆ: ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಸಸ್ಯೋದ್ಯಾನ ಉದ್ಘಾಟನೆ

Next Post

ಶಿವಮೊಗ್ಗದಿಂದ ವಿಮಾನ ಹಾರಾಟ ಸ್ಥಗಿತ | ಸಂಸದ ರಾಘವೇಂದ್ರ ಫಸ್ಟ್ ರಿಯಾಕ್ಷನ್

kalpa News

kalpa News

Next Post
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಶಿವಮೊಗ್ಗದಿಂದ ವಿಮಾನ ಹಾರಾಟ ಸ್ಥಗಿತ | ಸಂಸದ ರಾಘವೇಂದ್ರ ಫಸ್ಟ್ ರಿಯಾಕ್ಷನ್

Comments 1

  1. Pingback: ಶಿವಮೊಗ್ಗದಿಂದ ವಿಮಾನ ಹಾರಾಟ ಸ್ಥಗಿತ | ಸಂಸದ ರಾಘವೇಂದ್ರ ಫಸ್ಟ್ ರಿಯಾಕ್ಷನ್ » kalpa.news

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL