ಕಲ್ಪ ಮೀಡಿಯಾ ಹೌಸ್ | ಸೊರಬ |
ಯೋಗ ವ್ಯಾಯಾಮ ಮಾತ್ರವಲ್ಲದೆ ನಮ್ಮೊಂದಿಗೆ, ವಿಶ್ವ ಹಾಗೂ ಪ್ರಕೃತಿಯ ಜೊತೆಗೆ ಏಕತೆಯ ಅರ್ಥವನ್ನು ಕಂಡುಹಿಡಿಯಲು ನೆರವಾಗುತ್ತದೆ ಎಂದು ಆಯುಷ್ ಇಲಾಖೆ ಹಿರಿಯ ವೈದ್ಯಾಧಿಕಾರಿ ಎಂ.ಕೆ. ಮಹೇಶ್ ಹೇಳಿದರು.
ಜಿಲ್ಲಾ ಪಂಚಾಯತ್ ಶಿವಮೊಗ್ಗ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಆಯುಷ್ ಇಲಾಖೆಯಿಂದ ಮುಂಬರುವ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ #Yoga day ಅಂಗವಾಗಿ ಪಟ್ಟಣದ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಯೋಗೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಮ್ಮ ಜೀವನಶೈಲಿ ಹಾಗೂ ಪ್ರಜ್ಞೆ ರಚಿಸುವ ಮೂಲಕ ಹಮಾಮಾನ ಬದಲಾವಣೆ ನಿಭಾಯಿಸಲು ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಯೋಗವು ಮನಸ್ಸು ಮತ್ತು ದೇಹ, ಚಿಂತನೆ ಮತ್ತು ಕ್ರಿಯೆ, ಸಂಯಮ ಮತ್ತು ಸಾರ್ಥಕತೆಯನ್ನು ಒಗ್ಗೂಡಿಸುತ್ತದೆ. ಹಾಗೆಯೇ ಪ್ರಕೃತಿ ಮತ್ತು ಮನುಷ್ಯ ನಡುವೆ ಸಾಮರಸ್ಯವನ್ನುಂಟು ಮಾಡುತ್ತದೆ. ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸುವ ವಿಶೇಷ ಕಲೆಯಾಗಿದೆ. ಹೀಗಾಗಿ ದೈನಂದಿನ ಚಟುವಟಿಕೆಗಳಲ್ಲಿ ಯೋಗಕ್ಕೆ ಸಮಯ ಮೀಸಲಿಡಬೇಕು ಎಂದರು.
ಸಾರ್ವಜನಿಕರ ಆಸ್ಪತ್ರೆ ಆಡಳಿತಾಧಿಕಾರಿ ಪ್ರಭು ಸಾಹುಕಾರ್ ಮಾತನಾಡಿ, ಭಾರತೀಯ ಇತಿಹಾಸದಲ್ಲಿ ಯೋಗಕ್ಕೆ ಆರು ಸಾವಿರ ವರ್ಷಗಳ ಇತಿಹಾಸ ಇದೆ. ಹಿಂದೆ ಋಷಿ ಮುನಿಗಳು ಹಾಗೂ ತಪಸ್ವಿಗಳು ಯಾವುದೇ ಕಾಯಿಲೆ ಇಲ್ಲದೇ ಯೋಗದ ಮುಖಾಂತರ ಮಾತ್ರ ಗುಣಮಾಡಿಕೊಂಡು ನೂರಾರು ವರ್ಷಗಳ ಕಾಲ ಬದುಕುತ್ತಿದ್ದರು ಎಂದು ಹೇಳಿದರು.
ಯೋಗ ತರಬೇತುದಾರ ರಾಜಶೇಖರ್ ವಿದ್ಯಾರ್ಥಿಗಳಿಗೆ ಯೋಗಾಸನ ತಿಳಿಸಿಕೊಟ್ಟರು. 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗಾಬ್ಯಾಸದಲ್ಲಿ ಪಾಲ್ಗೊಂಡರು. ದೈಹಿಕ ಶಿಕ್ಷಕ ಪರಮೇಶ್ವರಪ್ಪ, ನಿಲಯಪಾಲಕ ಶಿವಪ್ಪ ಕೆ, ದರ್ಶನ್, ಶಿವಪ್ಪ ಬಿ ಕೆ, ರಘು ಹೆಚ್, ರಾಮಪ್ಪ ಇತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post