ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಶ್ರೀ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ದುರದೃಷ್ಟಕರ ನಿಧನದೊಂದಿಗೆ, ನಮ್ಮ ಸಾಂಸ್ಕೃತಿಕ ಜಗತ್ತು ಸಾಕಷ್ಟು ಬಡವಾಗಿದೆ. ಭಾರತದಾದ್ಯಂತ ಮನೆಯ ಹೆಸರು, ಅವರ ಸುಮಧುರ ಧ್ವನಿ ಮತ್ತು ಸಂಗೀತವು ದಶಕಗಳಿಂದ ಪ್ರೇಕ್ಷಕರನ್ನು ಮೋಡಿ ಮಾಡಿತು. ದುಃಖದ ಈ ಗಂಟೆಯಲ್ಲಿ, ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ಇವೆ. ಓಂ ಶಾಂತಿ ಎಂದಿದ್ದಾರೆ.
With the unfortunate demise of Shri SP Balasubrahmanyam, our cultural world is a lot poorer. A household name across India, his melodious voice and music enthralled audiences for decades. In this hour of grief, my thoughts are with his family and admirers. Om Shanti.
— Narendra Modi (@narendramodi) September 25, 2020
ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಎಸ್’ಪಿಬಿ ಅವರ ಅಗಲಿಕೆ ದೇಶಕ್ಕೆ ಅತ್ಯಂತ ದೊಡ್ಡ ನಷ್ಟವಾಗಿದೆ. ಅವರ ಹಾಡುಗಳು ಅನೇಕ ಭಾಷೆಗಳಲ್ಲಿ ಲಕ್ಷಾಂತರ ಹೃದಯಗಳನ್ನು ಮುಟ್ಟಿದವು. ಅವರ ಧ್ವನಿ ಜೀವಂತವಾಗಿರುತ್ತದೆ ಎಂದಿದ್ದಾರೆ.
My heartfelt condolences to the bereaved family and friends of Mr S. P. Balasubrahmanyam. His songs touched millions of hearts in many languages. His voice will live on.#RIPSPB
— Rahul Gandhi (@RahulGandhi) September 25, 2020
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದು, ತಮ್ಮ ಅಸಾಧಾರಣ ಕಂಠಸಿರಿಯಿಂದ ವಿಶ್ವದಾದ್ಯಂತ ಸಂಗೀತಪ್ರಿಯರ ಮನೆಮನಗಳಲ್ಲಿ ಸ್ಥಾನಪಡೆದ ಗಾನಗಂಧರ್ವ, ಭಾರತದ ಹೆಮ್ಮೆ, ಪದ್ಮಭೂಷಣ ಡಾ ಎಸ್.ಪಿ.ಬಾಲಸುಬ್ರಹ್ಮಣ್ಯಂ ವಿಧಿವಶರಾಗಿರುವುದು ಇಡೀ ಭಾರತೀಯ ಕಲಾಲೋಕಕ್ಕೆ ಎಂದೂ ತುಂಬಲಾಗದ ನಷ್ಟ. ಅಕ್ಷರಗಳಲ್ಲಿ ಹಿಡಿದಿಡಲಾಗದಷ್ಟು ಸಾಧನೆ ಮಾಡಿದ್ದ ಎಸ್.ಪಿ.ಬಿ ತಮ್ಮ ಗೀತೆಗಳ ಮೂಲಕ ಅಮರರಾಗಿದ್ದಾರೆ ಎಂದಿದ್ದಾರೆ.
ತಮ್ಮ ಅಸಾಧಾರಣ ಕಂಠಸಿರಿಯಿಂದ ವಿಶ್ವದಾದ್ಯಂತ ಸಂಗೀತಪ್ರಿಯರ ಮನೆಮನಗಳಲ್ಲಿ ಸ್ಥಾನಪಡೆದ ಗಾನಗಂಧರ್ವ, ಭಾರತದ ಹೆಮ್ಮೆ, ಪದ್ಮಭೂಷಣ ಡಾ ಎಸ್.ಪಿ.ಬಾಲಸುಬ್ರಹ್ಮಣ್ಯಂ ವಿಧಿವಶರಾಗಿರುವುದು ಇಡೀ ಭಾರತೀಯ ಕಲಾಲೋಕಕ್ಕೆ ಎಂದೂ ತುಂಬಲಾಗದ ನಷ್ಟ. ಅಕ್ಷರಗಳಲ್ಲಿ ಹಿಡಿದಿಡಲಾಗದಷ್ಟು ಸಾಧನೆ ಮಾಡಿದ್ದ ಎಸ್.ಪಿ.ಬಿ ತಮ್ಮ ಗೀತೆಗಳ ಮೂಲಕ ಅಮರರಾಗಿದ್ದಾರೆ. (1/3) pic.twitter.com/DZmWjJU5AR
— B.S. Yediyurappa (@BSYBJP) September 25, 2020
ಮುಂದಿನ ಜನ್ಮ ಅನ್ನೋದು ಇದ್ದರೆ ಕನ್ನಡನಾಡಲ್ಲೇ ಕನ್ನಡಿಗನಾಗಿ ಹುಟ್ಟಿ ಋಣ ತೀರಿಸುವೆ’ ಎಂದು ಕನ್ನಡಿಗರ ಮೇಲಿನ ತಮ್ಮ ಪ್ರೀತಿ ಅಭಿಮಾನಗಳನ್ನು ವ್ಯಕ್ತಪಡಿಸುತ್ತಿದ್ದ ಎಸ್.ಪಿ.ಬಿ ನಿಧನಕ್ಕೆ ಇಡೀ ನಾಡು ಕಂಬನಿ ಮಿಡಿಯುತ್ತಿದೆ. ಸರಿಸಾಟಿಯಿಲ್ಲದ ಆ ಮಹಾನ್ ಗಾಯಕನ ಆತ್ಮಕ್ಕೆ ಚಿರಶಾಂತಿಯನ್ನು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರಿಗೆ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಅವರ ಅಭಿಮಾನಿಗಳಲ್ಲಿ ಒಬ್ಬನಾಗಿ ಪ್ರಾರ್ಥಿಸುತ್ತಾ, ಆ ಮಹಾನ್ ಸಾಧಕನಿಗೆ ನನ್ನ ನುಡಿನಮನಗಳನ್ನು ಸಲ್ಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಎಸ್.ಪಿ. ನಿಧನಕ್ಕೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಕಂಬನಿ ಮಿಡಿದಿದ್ದು, ಎಸ್ ಪಿಬಿ ಸಾವು ಆಘಾತ ತಂದಿದೆ. ಅವರ ಸಾವಿನಿಂದಾಗಿ ಸಂಗೀತ ಕ್ಷೇತ್ರಕ್ಕೆ ತುಂಬಲಾಗದ ನಷ್ಟವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ప్రముఖ నేపథ్య గాయకుడు, ఐదున్నర దశాబ్ధాలుగా తమ అమృత గానంతో ప్రజలను అలరింపజేసిన శ్రీ శ్రీపతి పండితారాధ్యుల బాలసుబ్రహ్మణ్యం గారు అనారోగ్య కారణాలతో పరమపదించడం దిగ్భ్రాంతి కలిగించింది.#SPBalasubrahmanyam pic.twitter.com/j6cHkIRESO
— Vice President of India (@VPSecretariat) September 25, 2020
ಶಿವರಾಜ್ ಸಿಂಗ್ ಚೌಹ್ವಾಣ್ ಅವರೂ ಕೂಡ ಟ್ವೀಟ್ ಮಾಡಿದ್ದು, ಬಾಲು ಕುಟುಂಬಸ್ಥರಿಗೆ ಆ ದೇವರು ದುಃಖ ತಡೆಯುವ ಶಕ್ತಿ ನೀಡಲಿ. ಬಾಲ ಸುಬ್ರಮಣ್ಯಂ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ’ಹಲವು ಭಾಷೆಗಳ ಚಿತ್ರಗಳಲ್ಲಿ ಹಾಡಿ, ದಶಕಗಳ ಕಾಲ ನಮ್ಮೆಲ್ಲರನ್ನು ರಂಜಿಸಿದ್ದ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆ ಸಾಂಸ್ಕೃತಿಕ ಲೋಕಕ್ಕೆ ತುಂಬಿಬಾರದ ನಷ್ಟ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಹಲವು ಭಾಷೆಗಳ ಚಿತ್ರಗಳಲ್ಲಿ ಹಾಡಿ, ದಶಕಗಳ ಕಾಲ ನಮ್ಮೆಲ್ಲರನ್ನು ರಂಜಿಸಿದ್ದ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆ ಸಾಂಸ್ಕೃತಿಕ ಲೋಕಕ್ಕೆ ತುಂಬಿಬಾರದ ನಷ್ಟ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/QDS8f4FUrv
— Siddaramaiah (@siddaramaiah) September 25, 2020
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post