No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಪ್ರೀತಿ ಮತ್ತು ಸೌಹಾರ್ದತೆ ಹೆಚ್ಚಿಸುವ ಮಕರ ಸಂಕ್ರಾಂತಿಯ ಮಹತ್ವವೇನು ಗೊತ್ತಾ?

kalpa News by kalpa News
January 14, 2023
in Special Articles
0
ಸಂಕ್ರಾಂತಿ ಪ್ರಯುಕ್ತ ಜ.14, 15ರಂದು ವಿಶೇಷ ಕಾರ್ಯಕ್ರಮ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ವಿಶೇಷ ಲೇಖನ |

ಮಕರ ಸಂಕ್ರಾಂತಿಯ ದಿನದಂದು ಪಂಚಾಂಗದ ನಿರಯನ ಪದ್ಧತಿಗನುಸಾರ ಸೂರ್ಯನ ಉತ್ತರಾಯಣ ಪ್ರಾರಂಭವಾಗುತ್ತದೆ. ‘ಮಕರ ಸಂಕ್ರಾಂತಿ’ ಹಬ್ಬವು ತಿಥಿವಾಚಕವಾಗಿರದೇ ಅಯನ-ವಾಚಕವಾಗಿದೆ. ಈ ದಿನ ಸೂರ್ಯನ ನಿರಯನ ಮಕರ ರಾಶಿಯಲ್ಲಿ ಸಂಕ್ರಮಣವಾಗುತ್ತದೆ. ಇದರೊಂದಿಗೆ ಸಂಕ್ರಾಂತಿಯನ್ನು ದೇವತೆ ಎಂದು ನಂಬಲಾಗಿದೆ. ಸಂಕ್ರಾಂತಿಯು ಸಂಕರಾಸುರನೆಂಬ ದೈತ್ಯನನ್ನು ವಧಿಸಿದ್ದಳು ಎಂಬ ಕಥೆಯೂ ಇದೆ. ಸೂರ್ಯನ ಭ್ರಮಣದಿಂದಾಗುವ ಕಾಲ ವ್ಯತ್ಯಾಸವನ್ನು ಸರಿಪಡಿಸಲು ಪ್ರತಿ 80 ವರ್ಷಕ್ಕೊಮ್ಮೆ ಸಂಕ್ರಾಂತಿಯನ್ನು ಒಂದು ದಿನ ಮುಂದೂಡಲಾಗುತ್ತದೆ. 2023ರಲ್ಲಿ ಮಕರ ಸಂಕ್ರಾಂತಿಯು 15 ಜನವರಿ 2023, ರವಿವಾರದಂದು ಆಚರಿಸಲಾಗುವುದು. ಸಂಕ್ರಾಂತಿಯಂದು ಒಬ್ಬರಿಗೊಬ್ಬರು ಎಳ್ಳು-ಬೆಲ ಹಂಚುತ್ತಾರೆ. ಇದು ಪ್ರೀತಿ ಮತ್ತು ಸೌಹಾರ್ದತೆ ಹೆಚ್ಚಿಸುವ ಹಬ್ಬವಾಗಿದೆ.

ಕರ್ಕಸಂಕ್ರಾಂತಿಯಿಂದ ಮಕರ ಸಂಕ್ರಾಂತಿಯ ವರೆಗಿನ ಕಾಲವನ್ನು ‘ದಕ್ಷಿಣಾಯನ’ ಎನ್ನುತ್ತಾರೆ. ದಕ್ಷಿಣಾಯನ ಕಾಲದಲ್ಲಿ ಮೃತನಾದ ವ್ಯಕ್ತಿಯು, ಉತ್ತರಾಯಣದಲ್ಲಿ ಮೃತನಾದ ವ್ಯಕ್ತಿಗಿಂತ ದಕ್ಷಿಣಲೋಕಕ್ಕೆ ಹೋಗುವ ಸಾಧ್ಯತೆ ಹೆಚ್ಚಿರುತ್ತದೆ. ಈ ದಿನ ಸೂರ್ಯೋದಯದಿಂದ ಸೂರ್ಯಾಸ್ತದ ವರೆಗಿನ ವಾತಾವರಣವು ಅಧಿಕ ಚೈತನ್ಯಮಯವಾಗಿರುವುದರಿಂದ ಸಾಧನೆಯನ್ನು ಮಾಡುವವರಿಗೆ ಈ ಸಮಯ ಚೈತನ್ಯದ ಲಾಭವಾಗುತ್ತದೆ.
ಎಳ್ಳು ಮತ್ತು ಸಂಕ್ರಾಂತಿಯ ಸಂಬಂಧ
ಸಂಕ್ರಾಂತಿಯಲ್ಲಿ ಎಳ್ಳನ್ನು ಆದಷ್ಟು ಹೆಚ್ಚು ಪ್ರಮಾಣದಲ್ಲಿ ಉಪಯೋಗಿಸುತ್ತಾರೆ. ಎಳ್ಳು ಸತ್ತ್ವಲಹರಿಗಳನ್ನು ಗ್ರಹಿಸಿ ಪ್ರಕ್ಷೇಪಿಸುತ್ತದೆ. ಎಳ್ಳು ಸೇವಿಸುವುದರಿಂದ ಆಂತರಿಕ ಶುದ್ಧಿಯಾಗುತ್ತದೆ. ಎಳ್ಳು-ಬೆಲ್ಲವನ್ನು ದೇವರಿಗೆ ನೈವೇದ್ಯವೆಂದು ಅರ್ಪಿಸಿ ಇತರರಿಗೆ ಹಂಚುವುದರಿಂದ ಅವರಲ್ಲಿಯೂ ಪ್ರೇಮಭಾವ ಮತ್ತು ಸಕಾರಾತ್ಮಕತೆ ಹೆಚ್ಚುತ್ತದೆ.

ಮಕರಸಂಕ್ರಾಂತಿಯಿಂದ ರಥ ಸಪ್ತಮಿಯವರೆಗಿನ ಕಾಲವು ಪರ್ವಕಾಲವಾಗಿರುತ್ತದೆ. ಈ ಪರ್ವಕಾಲದಲ್ಲಿ ಮಾಡಿದ ದಾನ ಮತ್ತು ಪುಣ್ಯಕರ್ಮಗಳು ವಿಶೇಷ ಫಲವನ್ನು ಕೊಡುತ್ತವೆ. ‘ಹೊಸಪಾತ್ರೆ, ವಸ್ತ್ರ, ಅನ್ನ, ಎಳ್ಳು, ಎಳ್ಳುಪಾತ್ರೆ, ಬೆಲ್ಲ, ಆಕಳು, ಕುದುರೆ, ಚಿನ್ನ ಅಥವಾ ಭೂಮಿಯನ್ನು ಯಥಾಶಕ್ತಿ ದಾನ ಮಾಡಬೇಕು. ಈ ದಿನ ಮುತ್ತೈದೆಯರು ದಾನ ಮಾಡುತ್ತಾರೆ. ಮುತ್ತೈದೆಯರು ಕೆಲವು ಪದಾರ್ಥಗಳನ್ನು ಕುಮಾರಿಯರಿಂದ ಅಪಹರಿಸುತ್ತಾರೆ ಮತ್ತು ಅವರಿಗೆ ಎಳ್ಳುಬೆಲ್ಲ ಕೊಡುತ್ತಾರೆ.’
ಮಕರ ಸಂಕ್ರಾಂತಿಯಂದು ಬಾಗಿನ ನೀಡುವುದು
‘ಬಾಗಿನ ನೀಡುವುದೆಂದರೆ’ ಇನ್ನೊಂದು ಜೀವದಲ್ಲಿರುವ ದೇವತ್ವಕ್ಕೆ ತನು, ಮನ ಮತ್ತು ಧನದಿಂದ ಶರಣಾಗುವುದು. ಸಂಕ್ರಾಂತಿಯ ಕಾಲವು ಸಾಧನೆಗೆ ಪೂರಕವಾಗಿರುವುದರಿಂದ ಈ ಕಾಲದಲ್ಲಿ ನೀಡಿದ ಬಾಗಿನದಿಂದ ದೇವತೆಯ ಕೃಪೆಯಾಗಿ ಜೀವಕ್ಕೆ ಇಚ್ಛಿತ ಫಲಪ್ರಾಪ್ತಿಯಾಗುತ್ತದೆ. ಇತ್ತೀಚೆಗೆ ಸಾಬೂನು ಇಡುವ ಡಬ್ಬಿ, ಸ್ಟೀಲ್ ಪಾತ್ರೆ, ಪ್ಲಾಸ್ಟಿಕ್‌ನ ವಸ್ತುಗಳಂತಹ ವಸ್ತುಗಳನ್ನು ಬಾಗಿನವೆಂದು ಕೊಡುವ ಅಯೋಗ್ಯ ಪದ್ಧತಿಯು ರೂಢಿಯಲ್ಲಿದೆ. ಈ ವಸ್ತುಗಳ ಬದಲಿಗೆ ಸೌಭಾಗ್ಯದ ವಸ್ತುಗಳು, ಊದುಬತ್ತಿ, ಉಟಣೆ, ಧಾರ್ಮಿಕಗ್ರಂಥ, ಪುರಾಣಗ್ರಂಥ, ದೇವತೆಗಳ ಚಿತ್ರ, ಅಧ್ಯಾತ್ಮದ ಬಗೆಗಿನ ಧ್ವನಿಚಿತ್ರಮುದ್ರಿಕೆ ಮುಂತಾದ ಸಾಧನೆಗೆ ಪೂರಕ ಹಾಗೂ ಮಾರ್ಗದರ್ಶಕವಾಗಿರುವ ವಸ್ತುಗಳನ್ನು ಕೊಡಬೇಕು.

ಸಂಕ್ರಾಂತಿಯ ಹಬ್ಬಕ್ಕೆ ಮುತ್ತೈದೆಯರು ಸಣ್ಣ ಮಣ್ಣಿನ ಮಡಕೆಗಳನ್ನು ಹಂಚುತ್ತಾರೆ. ಅವುಗಳಿಗೆ ಅರಿಶಿನ ಕುಂಕುಮವನ್ನು ಹಚ್ಚಿ ದಾರವನ್ನು ಸುತ್ತುತ್ತಾರೆ. ಮಡಕೆಗಳಲ್ಲಿ ಗಜ್ಜರಿ, ಬೋರೇಹಣ್ಣು, ಕಬ್ಬಿನ ತುಂಡು, ನೆಲಗಡಲೆ, ಹತ್ತಿ, ಕಡಲೆಕಾಳು, ಎಳ್ಳುಬೆಲ್ಲ, ಅರಿಶಿನ-ಕುಂಕುಮ ಮುಂತಾದವುಗಳನ್ನು ತುಂಬಿಸುತ್ತಾರೆ. ರಂಗೋಲಿಯನ್ನು ಬಿಡಿಸಿ ಮಣೆ ಹಾಕಿ ಅದರ ಮೇಲೆ ಐದು ಮಡಕೆಗಳನ್ನಿಟ್ಟು ಅವುಗಳ ಪೂಜೆಯನ್ನು ಮಾಡುತ್ತಾರೆ. ಮೂರು ಮಡಕೆಗಳನ್ನು ಸೌಭಾಗ್ಯವತಿಯರಿಗೆ ದಾನ ನೀಡುತ್ತಾರೆ, ಒಂದು ಮಡಕೆಯನ್ನು ತುಳಸಿಗೆ ಮತ್ತು ಇನ್ನೊಂದನ್ನು ತಮಗಾಗಿ ಇಟ್ಟುಕೊಳ್ಳುತ್ತಾರೆ.
ಪವಿತ್ರ ನದಿಗಳಲ್ಲಿ ತೀರ್ಥಸ್ನಾನ, ಗಂಗಾ ಸ್ನಾನ
ಮಕರಸಂಕ್ರಾಂತಿಯ ದಿನ ಸೂರ್ಯೋದಯದಿಂದ ಸೂರ್ಯಾಸ್ತದ ವರೆಗಿನ ಕಾಲವು ಪುಣ್ಯಕಾಲವಾಗಿರುತ್ತದೆ. ಈ ಕಾಲದಲ್ಲಿ ತೀರ್ಥಸ್ನಾನಕ್ಕೆ ವಿಶೇಷ ಮಹತ್ವವಿದೆ. ಗಂಗಾ, ಯಮುನಾ, ಗೋದಾವರಿ, ಕೃಷ್ಣಾ ಮತ್ತು ಕಾವೇರಿ ನದಿಗಳ ದಡದಲ್ಲಿರುವ ಕ್ಷೇತ್ರದಲ್ಲಿ ಸ್ನಾನ ಮಾಡಿದರೆ ಮಹಾಪುಣ್ಯವು ಲಭಿಸುತ್ತದೆ.

ಈ ದಿನ ಮಹಾದೇವನಿಗೆ ಎಳ್ಳು-ಅಕ್ಕಿಯನ್ನು ಅರ್ಪಣೆ ಮಾಡುವ ಅಥವಾ ಎಳ್ಳು-ಅಕ್ಕಿ ಮಿಶ್ರಿತ ಅರ್ಘ್ಯವನ್ನು ಅರ್ಪಣೆ ಮಾಡುತ್ತಾರೆ. ಪರ್ವದ ಈ ದಿನದಂದು ಎಳ್ಳಿಗೆ ವಿಶೇಷ ಮಹತ್ವವಿದೆ ಎಂದು ಪರಿಗಣಿಸಲಾಗಿದೆ. ಎಳ್ಳಿನ ಉಟಣೆ, ಎಳ್ಳುಮಿಶ್ರಿತ ನೀರಿನಿಂದ ಸ್ನಾನ, ಎಳ್ಳುಮಿಶ್ರಿತ ನೀರನ್ನು ಕುಡಿಯುವುದು, ಎಳ್ಳಿನಿಂದ ಹವನ ಮಾಡುವುದು, ಅಡುಗೆಯಲ್ಲಿ ಎಳ್ಳನ್ನು ಉಪಯೋಗಿಸುವುದು ಹಾಗೂ ಎಳ್ಳನ್ನು ದಾನ ಮಾಡುವುದು ಇವೆಲ್ಲ ಪಾಪನಾಶಕ ಕೃತಿಗಳಾಗಿವೆ.
ಆಧಾರ: ಸನಾತನ ನಿರ್ಮಿತ ಗ್ರಂಥ ‘ಹಬ್ಬಗಳನ್ನು ಆಚರಿಸುವ ಯೋಗ್ಯ ಪದ್ಧತಿ ಮತ್ತು ಶಾಸ್ತ್ರ !’
ಸಂಗ್ರಹ : ಶ್ರೀ. ವಿನೋದ್ ಕಾಮತ್, ರಾಜ್ಯ ವಕ್ತಾರರು, ಸನಾತನ ಸಂಸ್ಥೆ, (ಸಂಪರ್ಕ : 9342599299)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMakara SankrantiNewsinKannadaNewsKannadaSpecial Articleವಿಶೇಷ ಲೇಖನ
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

25 ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಸಿದ್ಧರಾಮಯ್ಯಗೆ ಸೋಲು ಖಚಿತ: ಮಾಜಿ ಸಚಿವ ಈಶ್ವರಪ್ಪ ಭವಿಷ್ಯ

Next Post

ಸನಾತನ ಸಂಸ್ಕೃತಿಯನ್ನು ಮುನ್ನಡೆಸುವುದು ಯುವಸಮೂಹದ ಜವಾಬ್ಧಾರಿ

kalpa News

kalpa News

Next Post
ಸನಾತನ ಸಂಸ್ಕೃತಿಯನ್ನು ಮುನ್ನಡೆಸುವುದು ಯುವಸಮೂಹದ ಜವಾಬ್ಧಾರಿ

ಸನಾತನ ಸಂಸ್ಕೃತಿಯನ್ನು ಮುನ್ನಡೆಸುವುದು ಯುವಸಮೂಹದ ಜವಾಬ್ಧಾರಿ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL