No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Saturday, October 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಏಸೂರು ಕೊಟ್ಟರು ಈಸೂರು ಕೊಡೆವು | ಸ್ವಯಂ ಸ್ವಾತಂತ್ರ್ಯ ಘೋಷಿಸಿಕೊಂಡ ಗ್ರಾಮ

kalpa News by kalpa News
August 15, 2024
in Special Articles
0
ಏಸೂರು ಕೊಟ್ಟರು ಈಸೂರು ಕೊಡೆವು | ಸ್ವಯಂ ಸ್ವಾತಂತ್ರ್ಯ ಘೋಷಿಸಿಕೊಂಡ ಗ್ರಾಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಏಸೂರು ಕೊಟ್ಟರು ಈಸೂರು #Esooru ಕೊಡೆವು  ಎಂದು ಭಾರತದಲ್ಲಿ ಮೊಟ್ಟ ಮೊದಲು ಸ್ವಾತಂತ್ರ‍್ಯ ಘೋಷಿಸಿಕೊಂಡ ಹಳ್ಳಿ ಈಸೂರು.

1942 ರ ಆಗಸ್ಟ್ 8 ರಂದು ಮಹಾತ್ಮ ಗಾಂಧೀಜಿ #Mahathma Gandhiji ಅವರು ಬ್ರಿಟಿಷರೇ #British “ಭಾರತ ಬಿಟ್ಟು ತೊಲಗಿ”, “ಮಾಡು ಇಲ್ಲವೇ ಮಡಿ” ಎಂಬ ಘೋಷಣೆಯೊಂದಿಗೆ ಕ್ವಿಟ್ ಇಂಡಿಯಾ ಚಳವಳಿ ಆರಂಭಿಸಿದರು. ಈ ಚಳವಳಿಯಲ್ಲಿ ಈಸೂರು ಗ್ರಾಮ ಮೇಲುಗೈ ಸಾಧಿಸಿದೆ ಎಂದರೆ ತಪ್ಪಾಗಲಾರದು. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಈಸೂರು ಗ್ರಾಮದ ಜನರು ಬ್ರಿಟಿಷರಿಗೆ ಸೆಡ್ಡು ಹೊಡೆದು, ಅವರೊಂದಿಗೆ ಕಾದಾಡಿ ವೀರ ಮರಣ ಹೊಂದಿದರು.
ಈಸೂರಿನಲ್ಲಿ 1942 ರಲ್ಲಿ ಕ್ವಿಟ್ ಇಂಡಿಯಾ ಚಳವಳಿ #Quit India Chaluvali ಆರಂಭಿಸಲಾಯಿತು. ಪ್ರತಿ ದಿನ ಗ್ರಾಮದ ದೇವರು ವೀರಭದ್ರೇಶ್ವರ ದೇವಸ್ಥಾನದಲ್ಲಿ ಸಭೆ ಸೇರಿ ಊರ ಬೀದಿಗಳಲ್ಲಿ ವಂದೇ ಮಾತರಂ, ಭಾರತ ಮಾತಕೀ ಜೈ ಘೋಷಣೆಯೊಂದಿಗೆ ಮೆರವಣಿಗೆ ನಡೆಸುತ್ತಿದ್ದರು. ಬ್ರಿಟಿಷ್ ಕಂದಾಯ ಅಧಿಕಾರಿಗಳು ಕಂದಾಯ ಕಟ್ಟುವಂತೆ ಬಂದು ಊರಿನ ಗ್ರಾಮಸ್ಥರಿಗೆ ಕೇಳಿದಾಗ ಅವರ ಲೆಕ್ಕ ಪುಸ್ತಕವನ್ನು ಕಸಿದುಕೊಂಡು, ಗಾಂಧಿ ಟೋಪಿ ಧರಿಸುವಂತೆ ಹೇಳಿದರು. ಅವರು ಧರಿಸದೇ ವಾಪಸ್ಸು ಹೋಗಿ ಶಿಕಾರಿಪುರದ ಅಮಲ್ದಾರ್ ಗೆ ದೂರು ನೀಡಿದರು. ಇದರಿಂದ ಈಸೂರಿನ ಜನತೆ ಊರ ದ್ವಾರ ಬಾಗಿಲಿಗೆ “ಬೇಜವಾಬ್ದಾರಿ ಸರ್ಕಾರಿ ಅಧಿಕಾರಿಗಳಿಗೆ ಈಸೂರಿನಲ್ಲಿ ಪ್ರವೇಶವಿಲ್ಲ” ಎಂದು ನಾಮ ಫಲಕವನ್ನು ಹಾಕಿದರು. ಗ್ರಾಮದ ಮಕ್ಕಳಾದ ಸಾಹುಕಾರ್ ಜಯಣ್ಣರನ್ನು ಅಮಲ್ದಾರ್ ಆಗಿ, ಕೆ.ಜಿ ಮಲ್ಲಯ್ಯ ಅವರನ್ನು ಪೋಲಿಸ್ ಸಬ್ ಇನ್ಸ್ಪೆಕ್ಟರ್ ಆಗಿ ನೇಮಕ ಮಾಡಿಕೊಂಡು ಜವಾಬ್ದಾರಿ ಸರ್ಕಾರವನ್ನು ರಚಿಸಿಕೊಂಡರು.

Also read: ಸರ್ವಾಂಗೀಣ ಶಿಕ್ಷಣದಿಂದ ಮಾತ್ರ ಸಮಾಜಮುಖಿ ಬದಲಾವಣೆ ಸಾಧ್ಯ: ನಾರಾಯಣ ರಾವ್ ಅಭಿಪ್ರಾಯ

ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸುದ್ದಿಯಾದ ಘಟನೆ:
ಸಾಹುಕಾರ್ ಜಯಣ್ಣರನ್ನು ಅಮಲ್ದಾರ್ ಆಗಿ, ಕೆ.ಜಿ ಮಲ್ಲಯ್ಯ ಅವರನ್ನು ಪೋಲಿಸ್ ಸಬ್ ಇನ್ಸ್ ಪೆಕ್ಟರ್ ಆಗಿ ನೇಮಕ ಮಾಡಿಕೊಂಡ ವಿಷಯ ತಿಳಿದ ಶಿಕಾರಿಪುರದ ಅಮಲ್ದಾರ್ ಚೆನ್ನಕೃಷ್ಣಪ್ಪ ಮತ್ತು ಪೋಲೀಸ್ ಸಬ್ ಇನ್ಸ್ಪೆಕ್ಟರ್ ಕೆಂಚೇಗೌಡ ಅವರು 28/09/1942 ರಂದು ಸ್ವತಂತ್ರ ಗ್ರಾಮ ಈಸೂರಿಗೆ ಬಂದು ದ್ವಾರ ಬಾಗಿಲಿಗೆ ಹಾಕಿದ ನಾಮ ಫಲಕ ಮತ್ತು ಹೂವಿನ ತೋರಣಗಳನ್ನು ಕಿತ್ತು ಹಾಕಿದರು. ನಂತರ ದೇವಸ್ಥಾನದ ಹತ್ತಿರ ಬಂದು ಜನರನ್ನು ಹಿಂಸೆ ಮಾಡತೊಡಗಿದರು. ಪೊಲೀಸ್ ಅಧಿಕಾರಿ ಕೆಂಚೇಗೌಡ ಜನರ ಮೇಲೆ ಲಾಠಿ ಚಾರ್ಜ್ ಮಾಡಿದರು. ಆದರೂ ಶಾಂತವಾಗಿದ್ದ ಯುವಕರ ತಂಡ ಅದನ್ನು ಸಹಿಸಿಕೊಂಡು ಸುಮ್ಮನಿದ್ದರು. ಆದರೆ ಇಷ್ಟಕ್ಕೆ ಸುಮ್ಮನಿರದ ಪೊಲೀಸ್ ಕೆಂಚೇಗೌಡ ಜನರ ಮೇಲೆ ಬಂದೂಕಿನಿAದ ಗುಂಡು ಹಾರಿಸಿದರು.

ಗುಂಡು ಊರ ಹಿರಿಯರಿಗೆ ತಗುಲಿ ಸ್ಥಳದಲ್ಲಿಯೇ ಕುಸಿದು ಬಿದ್ದರು. ಇದರಿಂದ ಸಿಟ್ಟಿಗೆದ್ದ ಯುವಕರು ಪೊಲೀಸ್ ಕೆಂಚೇಗೌಡ ಮತ್ತು ಅಮಲ್ದಾರ್ ಚೆನ್ನಕೃಷ್ಣಪ್ಪ ಅವರನ್ನು ಹೊಡೆದು ಹಾಕಿದರು. ಆಗ ಅವರ ಪ್ರಾಣ ಪಕ್ಷಿ ಹಾರಿ ಹೋಯಿತು. ಈ ಘಟನೆ ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿ ಆಯಿತು.

ಸ್ಮಶಾನವಾದ ಈಸೂರು ಗ್ರಾಮ:
ಈ ಘಟನೆಯಿಂದ ಬ್ರಿಟಿಷ್ ಸರ್ಕಾರ ಮಿಲಿಟರಿ ಪಡೆಯೊಂದಿಗೆ ಈಸೂರು ಗ್ರಾಮಕ್ಕೆ ಆಗಮಿಸಿತು. ಈ ಸುದ್ದಿ ತಿಳಿದು ಇಡೀ ಊರಿಗೆ ಊರೇ ತಲೆ ಮರಿಸಿಕೊಂಡಿತು. ಈಸೂರು ಗ್ರಾಮದ ಮನೆ ಮನೆಗೆ ಬೀಗ ಹಾಕಿಕೊಂಡು ಇಡೀ ಊರು ಸ್ಮಶಾನದಂತಾಗಿತ್ತು. ಪೊಲೀಸ್ ಅಧಿಕಾರಿಗಳು ಆರೋಪಿಗಳ ಪಟ್ಟಿ ಸಿದ್ಧ ಮಾಡಿ 11 ಜನರಿಗೆ ಮರಣದಂಡನೆ, 13 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಲು ನಿರ್ಧರಿಸಿದರು.

ವೀರ ಮರಣ ಹೊಂದಿದ ಈಸೂರಿನ ವೀರರು:
ನ್ಯಾಯಲಯದ ಆದೇಶದ ಪ್ರಕಾರ ಕೆ.ಗುರಪ್ಪ ಬಿನ್ ಈಶ್ವರಪ್ಪ ಕುಮಾರ್ ಅವರನ್ನು 8-03-1943 ರಲ್ಲಿ ಗಲ್ಲಿಗೇರಿಸಲಾಯಿತು. ಜಿನಹಳ್ಳಿ ಮಲ್ಲಪ್ಪ ಇವರನ್ನು 8-03-1943 ರಲ್ಲಿ ಗಲ್ಲಿಗೇರಿಸಲಾಯಿತು. ಸೂರ್ಯನಾರಯಣಾಚಾರ್ ಬಿನ್ ಪಂಪಪ್ಪಚಾರ್ ಇವರನ್ನು 09-03-1943 ರಲ್ಲಿ ಗಲ್ಲಿಗೇರಿಸಲಾಯಿತು. ಇವರಲ್ಲಿ ಬಡಕಳ್ಳಿ ಹಾಲಪ್ಪ ಬಿನ್ ಬಸಪ್ಪ ಹಾಗೂ ಅಂಗಡಿ ಹಾಲಪ್ಪ ಎಂಬವರು ತಲೆಮರೆಸಿಕೊಂಡಿದ್ದರು. ಅವರ ಬದಲು ಬಿ.ಹಾಲಪ್ಪ ಅವರನ್ನು 9-03-1943 ರಲ್ಲಿ ಗಲ್ಲಿಗೇರಿಸಲಾಯಿತು. ಗೌಡ್ರ ಶಂಕ್ರಪ್ಪ ಬಿನ್ ಹೊಳಿಯಪ್ಪ 10-03-43 ರಲ್ಲಿ ಇವರನ್ನು ಅಪರಾಧಿಗಳು ಎಂದು ಗಲ್ಲಿಗೇರಿಸಲಾಯಿತು. ಇನ್ನೂ 23 ಜನರಿಗೆ ಜೀವಾವಧಿ ಶಿಕ್ಷೆಯನ್ನು ಘೋಷಿಸಲಾಯಿತು. ಇದರಲ್ಲಿ ಮಹಿಳೆಯರು ಇದ್ದರು. ಇವರಲ್ಲಿ ಜೀವಂತವಾಗಿ ಇರುವವರು ಎಸ್.ಎಸ್ ಹುಚ್ಚರಾಯಪ್ಪನವರು ಮಾತ್ರ. ಅವರು ಇನ್ನೂ ಈಸೂರು ಗ್ರಾಮದ ತಮ್ಮ ಸ್ವಗೃಹದಲ್ಲಿ ಇದ್ದಾರೆ.
Kalahamsa Infotech private limitedಈಸೂರು ಸ್ವಾತಂತ್ರö್ಯ ಹೋರಾಟಗಾರರ ಸ್ಮಾರಕ ಅಭಿವೃದ್ಧಿ:

ಈಸೂರು ಹೋರಾಟದ ಇತಿಹಾಸವನ್ನು ಸಾರುವ ದೃಷ್ಟಿಯಿಂದ ಹುತಾತ್ಮರ ಸ್ಮಾರಕಕ್ಕೆ ರೂ.5 ಕೋಟಿ ಹಣ ಬಿಡುಗಡೆ ಮಾಡಲಾಗಿದ್ದು ಈಸೂರನ್ನು ಐತಿಹಾಸಿಕ ಸ್ಥಳವನ್ನಾಗಿ ಮಾಡಲಾಗುತ್ತಿದೆ. ಸ್ಮಾರಕ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿಯಲ್ಲಿದೆ.

ಭಾರತದಲ್ಲಿ ಎಲ್ಲಿಯೂ ನೋಡ ಸಿಗದ ವಿಶೇಷವಾದ ಆಲಂಕರಿಕ ಶೈಲಿಯಲ್ಲಿ ಸ್ಮಾರಕ ಭವನವನ್ನು ವಿನ್ಯಾಸ ಮಾಡಲಾಗುತ್ತಿದ್ದು ಸುತ್ತಲು ಕಲ್ಲಿನಿಂದ ಆಕರ್ಷಕ ತಡೆಗೊಡೆ ರೀತಿ ವಿನ್ಯಾಸಗೊಳಿಸಿ ಸ್ಮಾರಕದ ಒಳಗೆ ಗಲ್ಲಿಗೇರಿದ ಹೋರಾಟಗಾರರ ಹೆಸರುರ್ಳಳ ಕಲ್ಲುಗಳನ್ನು ನಿರ್ಮಿಲಾಗುತ್ತಿದೆ ಜೊತೆಗೆ ಗ್ರಂಥಾಲಯ, ಅತಿಥಿ ಗೃಹ, ಶೌಚಾಲಯ, ಗಾರ್ಡನ್ ನಿರ್ಮಿಸಲಾಗುತ್ತಿದೆ.

https://kalpa.news/wp-content/uploads/2024/04/VID-20240426-WA0008.mp4

ಕ್ವಿಟ್ ಇಂಡಿಯಾ ದಿನಾಚರಣೆ:
ಶಿಕಾರಿಪುರ ಪಟ್ಟಣದ ತಾಲೂಕು ಕಚೇರಿಯ ಮುಂಭಾಗದಲ್ಲಿ ಇರುವ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಸ್ತಂಭದ ಬಳಿ ಪ್ರತಿ ವರ್ಷ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಗಸ್ಟ್ 9 ರಂದು ಶಾಲಾ ಕಾಲೇಜು ವಿದ್ಯಾರ್ಥಿಗಳು, ಹಿರಿಯ ಸ್ವಾತಂತ್ರö್ಯ ಹೋರಾಟಗಾರರನ್ನು ಕರೆಸಿ ತಹಶೀಲ್ದಾರ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನು ಆಹ್ವಾನಿಸಿ ಈಸೂರು ಸ್ವಾತಂತ್ರö್ಯ ಹೋರಾಟದ ನೆನಪಿಗಾಗಿ ಕ್ವಿಟ್ ಇಂಡಿಯಾ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ರಘು ಆರ್, ಅಪ್ರೆಂಟಿಸ್, ವಾರ್ತಾ ಇಲಾಖೆ, ಶಿವಮೊಗ್ಗ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: BritishEsooruKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMahathma GandhijiNews_in_KannadaNews_KannadaQuit India ChaluvaliSpecial Articleಈಸೂರುಕ್ವಿಟ್ ಇಂಡಿಯಾ ಚಳವಳಿಮಹಾತ್ಮ ಗಾಂಧೀಜಿವಿಶೇಷ ಲೇಖನ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಸರ್ವಾಂಗೀಣ ಶಿಕ್ಷಣದಿಂದ ಮಾತ್ರ ಸಮಾಜಮುಖಿ ಬದಲಾವಣೆ ಸಾಧ್ಯ: ನಾರಾಯಣ ರಾವ್ ಅಭಿಪ್ರಾಯ

Next Post

ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ರಾಜಕಾರಣಿ ಎಸ್.ಕೆ. ಕಾಂತ ಆಯ್ಕೆ

kalpa News

kalpa News

Next Post
ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ರಾಜಕಾರಣಿ ಎಸ್.ಕೆ. ಕಾಂತ ಆಯ್ಕೆ

ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ರಾಜಕಾರಣಿ ಎಸ್.ಕೆ. ಕಾಂತ ಆಯ್ಕೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL