ಕಲ್ಪ ಮೀಡಿಯಾ ಹೌಸ್ | ವಿಶೇಷ ಲೇಖನ |
ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರೆಂಟಿಗಳ ಪೈಕಿ ಯುವನಿಧಿ Yuvanidhi ಯೋಜನೆಯೂ ಸಹ ಒಂದಾಗಿದ್ದು, ಇದಕ್ಕೆ ಶಿವಮೊಗ್ಗದ ಫ್ರೀಡಂ ಪಾಕ್’ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಗುತ್ತದೆ.
ಜ.12ರಂದು ಶಿವಮೊಗ್ಗದ ಫ್ರೀಡಂ ಪಾರ್ಕ್’ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.
ಈ ಯೋಜನೆಯ ಪ್ರಕಾರ ನಿರುದ್ಯೋಗಿ ಪದವೀಧರ ಹಾಗೂ ಡಿಪ್ಲೊಮಾ ಪದವೀಧರರಿಗೆ ಪ್ರತಿ ತಿಂಗಳು ಭತ್ಯೆ ಸಿಗಲಿದೆ. ಪದವೀಧರರಿಗೆ ಪ್ರತಿ ತಿಂಗಳು 3000 ರೂಪಾಯಿ ನೀಡಿದರೆ, ಡಿಪ್ಲೊಮಾ ಪದವೀಧರರಿಗೆ 1500 ರೂಪಾಯಿ ನೀಡಲಾಗುತ್ತದೆ. ಪದವೀಧರರಿಗೆ ಉದ್ಯೋಗ ಸಿಗುವರೆಗೆ ಅಥವಾ ಗರಿಷ್ಠ 2 ವರ್ಷದವರೆಗೆ ನೀಡಲಾಗುತ್ತದೆ.
ನೋಂದಣಿ ಮಾಡುವುದು ಹೇಗೆ?
- ಉದ್ಯೋಗ ಸಿಕ್ಕಿದ ಕೂಡಲೇ ಈ ಸೌಲಭ್ಯ ಸ್ಥಗಿತಗೊಳ್ಳಲಿದೆ.
- ಅರ್ಜಿ ಸಲ್ಲಿಸುವವರು ಕರ್ನಾಟಕದ ನಿವಾಸಿಯಾಗಿರಬೇಕು.
- 2023ರಲ್ಲಿ ಪದವಿ/ ಡಿಪ್ಲೊಮಾ ಉತ್ತೀರ್ಣರಾಗಿರಬೇಕು. ಉತ್ತೀರ್ಣರಾಗಿ 180 ದಿನಗಳಾದರೂ ಉದ್ಯೋಗ ಸಿಗದೆ ನಿರುದ್ಯೋಗಿಯಾಗಿರಬೇಕು.
- ಅರ್ಜಿ ಸಲ್ಲಿಸಿದ ದಿನದಿಂದ ಹುದ್ದೆ ಸಿಗುವವರೆಗೂ ಅಥವಾ 2 ವರ್ಷ ಗರಿಷ್ಠ ಅವಧಿವರೆಗೆ ಮಾತ್ರ ನಿರುದ್ಯೋಗ ಭತ್ಯೆ ಸಿಗಲಿದೆ.
- ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್, ಎಸ್‍ಎಸ್‍ಎಲ್’ಸಿ, ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿ ಪ್ರಮಾಣಪತ್ರಗಳು ಹಾಗೂ ರೇಷನ್ ಕಾರ್ಡ್ ಅಗತ್ಯ. ಅರ್ಜಿಯನ್ನು ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಸೇವಾಸಿಂಧು ಪೋರ್ಟಲ್’ನಲ್ಲಿ ಸಲ್ಲಿಸಬಹುದಾಗಿದೆ.
Also read: ಯುವನಿಧಿ: ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಶಿವಮೊಗ್ಗ ಸಜ್ಜು: 1 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳ ಭಾಗಿ
ಅರ್ಹರಾಗದೇ ಇರುವವರು ಯಾರು?
- ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರಿಗೆ ಯೋಜನೆ ಅನ್ವಯಿಸುವುದಿಲ್ಲ
- ಶಿಷ್ಯ ವೇತನವನ್ನು ಪಡೆಯುತ್ತಿರುವವರಿಗೆ ಯುವನಿಧಿ ಅನ್ವಯಿಸುವಿದಿಲ್ಲ
- ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದವರಿಗೆ ಅನ್ವಯ ಆಗುವುದಿಲ್ಲ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post