ಕಲ್ಪ ಮೀಡಿಯಾ ಹೌಸ್ | ಮೈಸೂರು |
ಕುಂಭಮೇಳದಲ್ಲಿ ಭಾಗವಹಿಸುವ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು ನೈಋತ್ಯ ರೈಲ್ವೆ ಏಕಮುಖ ವಿಶೇಷ ರೈಲನ್ನು ಓಡಿಸಲಿದೆ.
ರೈಲು ಸೇವೆಯ ವಿವರಗಳು ಈ ಕೆಳಗಿನಂತಿವೆ:
ರೈಲು ಸಂಖ್ಯೆ 06216 ಮೈಸೂರು-ಲಕ್ನೋ ಜಂಕ್ಷನ್ ಏಕ ಮುಖ ಸ್ಪೆಷಲ್ ಎಕ್ಸ್’ಪ್ರೆಸ್ ಡಿಸೆಂಬರ್ 29, 2024 ರ ಭಾನುವಾರ 00:30 ಗಂಟೆಗೆ ಮೈಸೂರಿನಿಂದ ಹೊರಟು ಡಿಸೆಂಬರ್ 31, 2024 ರ ಮಂಗಳವಾರ 04:00 ಗಂಟೆಗೆ ಲಕ್ನೋ ಜಂಕ್ಷನ್ ತಲುಪಲಿದೆ.
Also Read>> Special Train from Mysuru to Lucknow Jn for Kumbh Mela
ಈ ರೈಲು ಮಂಡ್ಯ, ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ ಜಂಕ್ಷನ್, ಕಡೂರು, ಚಿಕ್ಕಜಾಜೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ ಜಂಕ್ಷನ್, ಧಾರವಾಡ, ಬೆಳಗಾವಿ, ಘಟಪ್ರಭಾ, ಮಿರಜ್ ಜಂಕ್ಷನ್, ಸಾಂಗ್ಲಿ, ಕರಡ್, ಪುಣೆ ಜಂಕ್ಷನ್, ದೌಂಡ್ ಕಾರ್ಡ್ ಲೈನ್, ಅಹ್ಮದ್ ನಗರ, ಮನ್ಮಾಡ್ ಜಂಕ್ಷನ್, ಭೂಸಾವಲ್ ಜಂಕ್ಷನ್, ಖಾಂಡ್ವಾ, ತಲ್ವಾಡಿಯಾ, ಭೋಪಾಲ್, ಖಾಂಡ್ವಾ, ತಲ್ವಾಡಿಯಾ, ಚನೇರಾ, ಖಾಂಡ್ವಾ, ತಲ್ವಾಡ್ಯ, ಚನೇರಾ, ಖಾಂಡ್ವಾ ನಿಲ್ದಾಣಗಳಲ್ಲಿ ನಿಲ್ಲಲಿದೆ.
ಈ ರೈಲು 11 ಸೆಕೆಂಡ್ ಜನರಲ್ ಕ್ಲಾಸ್ ಬೋಗಿಗಳು, 07 ಸ್ಲೀಪರ್ ಕ್ಲಾಸ್ ಬೋಗಿಗಳು ಮತ್ತು 2 ಎಸ್’ಎಲ್’ಆರ್/ಡಿ ಸೇರಿದಂತೆ 20 ಬೋಗಿಗಳನ್ನು ಒಳಗೊಂಡಿರುತ್ತದೆ.
ಈ ರೈಲಿನ ಪ್ರತಿ ನಿಲ್ದಾಣದ ಆಗಮನ/ನಿರ್ಗಮನ ಸಮಯ ತಿಳಿಯಲು ಪ್ರಯಾಣಿಕರು ಭಾರತೀಯ ರೈಲ್ವೆಯ ವೆಬ್’ಸೈಟ್ www.enquiry.indianrail.gov.in ನಲ್ಲಿ ಲಭ್ಯವಿದೆ ಅಥವಾ 139 ನಂಬರ್’ಗೆ ಡಯಲ್ ಮಾಡಿ ಮಾಡಿ ಮಾಹಿತಿ ಪಡೆಯಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post