ನವದೆಹಲಿ: ವಿಶ್ವದ ಪ್ರತಿಷ್ಠಿತ ಬಿಸಿಸಿಐನ 39ನೆಯ ಅಧ್ಯಕ್ಷರಾಗಿ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಗಂಗೂಲಿಯವರ ಈ ಅಧಿಕಾರವಧಿಯಲ್ಲಿ ಮಾಜಿ ಅಧ್ಯಕ್ಷ ಎನ್. ಶ್ರೀನಿವಾಸನ್ ಹಾಗೂ ಮಾಜಿ ಕಾರ್ಯದರ್ಶಿ ನಿರಂಜನ್ ಶಾ ಅವರ ಸಹಾಯ ಪಡೆದುಕೊಂಡು ಆಡಳಿತ ನಡೆಸಲಿದ್ದಾರೆ.
It's official – @SGanguly99 formally elected as the President of BCCI pic.twitter.com/Ln1VkCTyIW
— BCCI (@BCCI) October 23, 2019
ಮುಂದಿನ 9 ತಿಂಗಳ ಕಾಲ ಬಂಗಾಳದ ಹುಲಿ ಎಂದೇ ಖ್ಯಾತರಾಗಿರುವ ಗಂಗೂಲಿ ಕಾರ್ಯನಿರ್ವಹಿಸಲಿದ್ದಾರೆ. ಇದರೊಂದಿಗೆ ಸುಪ್ರೀಂಕೋರ್ಟ್ ನೇಮಕ ಮಾಡಿದ್ದ ಆಡಳಿತಾಧಿಕಾರಿ ಸಮಿತಿಯ 33 ತಿಂಗಳ ಆಡಳಿತ ಕೊನೆಗೊಂಡಂತಾಗಿದೆ.
ಇನ್ನು, ಬಿಸಿಸಿಐ ಮಾಜಿ ಅಧ್ಯಕ್ಷ ಮತ್ತು ಇಂದಿನ ಕಿರಿಯ ಹಣಕಾಸು ಸಚಿವ ಅನುರಾಗ್ ಠಾಕೂರ್ ಅವರ ಕಿರಿಯ ಸೋದರ ಅರುಣ್ ಧುಮಾಲ್ ಖಜಾಂಚಿ ಮತ್ತು ಕೇರಳದ ಜಯೇಶ್ ಜಾರ್ಜ್ ಜಂಟಿ ಕಾರ್ಯದರ್ಶಿಯಾಗಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಕಾರ್ಯದರ್ಶಿಯಾಗಿದ್ದಾರೆ.
Discussion about this post