No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Saturday, August 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಸತ್ತ ಎಮ್ಮೆಯಿಂದ ಹಾಲು ಕರೆದ ಮಹಾಮಹಿಮ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರ ಸ್ವಾಮಿ

kalpa News by kalpa News
March 11, 2020
in ಚಿತ್ರದುರ್ಗ
0
ಸತ್ತ ಎಮ್ಮೆಯಿಂದ ಹಾಲು ಕರೆದ ಮಹಾಮಹಿಮ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರ ಸ್ವಾಮಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ಜಾನಪದ ಬುಡಕಟ್ಟು ಸಂಸ್ಕೃತಿಯ ತವರು ಚಿತ್ರದುರ್ಗ ಜಿಲ್ಲೆ. ಕರ್ನಾಟಕ ರಾಜ್ಯದಲ್ಲಿಯೇ ಅತಿ ದೊಡ್ಡ ಜಾತ್ರೆ ಎಂದು ಕರೆಯಲ್ಪಡುವ ಶ್ರೀ ಕ್ಷೇತ್ರ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರ ಸ್ವಾಮಿ ಜಾತ್ರೆ ಇಂದಿನಿಂದ ಪ್ರಾರಂಭವಾಗಿದ್ದು 16 ನೆಯ ತಾರೀಖಿನವರೆಗೂ ಬಹಳ ವಿಜೃಂಭಣೆಯಿಂದ ನಡೆಯಲಿದೆ.

ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯ ಪ್ರಧಾನ ಐತಿಹಾಸಿಕ ಜಾತ್ರೆ ಫಾಲ್ಗುಣ ಮಾಸದ ಚಿತ್ತ ನಕ್ಷತ್ರದಂದು ರಥೋತ್ಸವವು ವಿಜೃಂಭಣೆಯಿಂದ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆಯಲಿದ್ದು, ದೊಡ್ಡ ತೇರು 12ರಂದು 3.30 ಕ್ಕೆ ನಡೆಯುತ್ತದೆ.

ಸ್ವಾಮಿಯ ಹಿನ್ನೆಲೆ
16 ಮತ್ತು17 ನೆಯ ಶತಮಾನದ ಬಳಿ ಬದುಕಿದ ಕರ್ಮ ಜೀವಿಕಾಯಕ ಯೋಗಿ ತಿಪ್ಪೇರುದ್ರಸ್ವಾಮಿ ಸಮಾಜ ಸುಧಾರಕನಾಗಿ ಜನರ ಕಲ್ಯಾಣಕ್ಕಾಗಿ ತನ್ನನ್ನು ಅರ್ಪಿಸಿಕೊಂಡ ಅವಧೂತ. ಸುಮಾರು 400 ವಷಗಳ ಹಿಂದೆ ತಿಪ್ಪೇರುದ್ರಸ್ವಾಮಿಯವರು ನಾಯಕನಹಟ್ಟಿಗೆ ಬಂದು ಅನೇಕ ಪವಾಡಗಳನ್ನು ಮಾಡುವ ಮೂಲಕ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಯೂರಿ ದೈವೀಕ ಪುರುಷರಾಗಿ ಹೆಸರುವಾಸಿಯಾದರು.

ಪಂಚಗಣಾಧೀಶ್ವರರಲ್ಲೊಬ್ಬರಾದ ಶ್ರೀ ತಿಪ್ಪೇರುದ್ರ ಸ್ವಾಮಿ ಕರ್ನಾಟಕದ ಹಲವು ಭಾಗಗಳಲ್ಲಿ ಸಂಚರಿಸಿ ಫಣಿಯಪ್ಪ ಶಿವಭಕ್ತನ ಇಚ್ಚೆಯಂತೆ ನಾಯಕನಹಟ್ಟಿಯಲ್ಲಿ ನೆಲೆಸಿ ಈ ಸ್ಥಳವನ್ನು ತಮ್ಮ ಕರ್ಮಭೂಮಿಯಾಗಿ ಆರಿಸಿಕೊಂಡರು.


ವಿಜಯನಗರ ಸಾಮ್ರಾಜ್ಯ ಪಥನವಾದ ನಂತರ ನಾಯಕನಹಟ್ಟಿ ಪಾಳೇಗಾರ ಬೋಡಿ ಮಲ್ಲಪ್ಪನಾಯಕ ತನ್ನ ಸಂಸ್ಥಾನದಲ್ಲಿ ತಿಪ್ಪೇರುದ್ರಸ್ವಾಮಿಯವರಿಗೆ ಆಶ್ರಯ ನೀಡುತ್ತಾರೆ. ಬೋಡಿಮಲ್ಲಪ್ಪ ನಾಯಕ ತಿಪ್ಪೇರುದ್ರಸ್ವಾಮಿಯವರ ಮಾರ್ಗದರ್ಶನದಲ್ಲಿ ಏಳು ಪುರ, ಏಳು ಕೆರೆಗಳನ್ನು ಕಟ್ಟಿಸಿದರು. ರೈತ ಸಮುದಾಯಕ್ಕೆ ಕೆರೆ, ಕಟ್ಟಡಗಳ ನಿರ್ಮಾಣ ಮಾಡುವ ಮೂಲಕವೇ ಜಲಕ್ರಾಂತಿಗೆ ನಾಂದಿ ಹಾಡಿದ ಜಲ ಸಂಸ್ಕೃತಿಯ ಹರಿಕಾರನಾಗಿ ಕೃಷಿಕರ ಸಮುದಾಯಕ್ಕೆ ಬೆನ್ನೆಲುಬಾಗಿ ನಿಂತ ಕ್ರಾಂತಿ ಪುರುಷ, ದೀನ ದಲಿತರ ಉದ್ದಾರಕ್ಕಾಗಿ ಶ್ರಮಿಸಿದ ಮಹಾನ್ ಚೇತನ ತಿಪ್ಪೇರುದ್ರಸ್ವಾಮಿ.

ತಿಪ್ಪೇರುದ್ರಸ್ವಾಮಿ ಸಾಕಷ್ಟು ಪವಾಡಗಳನ್ನು ಮಾಡುತ್ತಾರೆ. ಸುತ್ತಮುತ್ತಲಿನ ಗ್ರಾಮಗಳಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುತ್ತದೆ. ಇದನ್ನು ಮನಗಂಡು ಎರಡು ಕೆರೆಗಳನ್ನು ನಿರ್ಮಾಣ ಮಾಡಿಸುತ್ತಾರೆ. ಒಮ್ಮೆ ಭಕ್ತರೊಬ್ಬರ ಬಳಿ ಹಾಲು ಕೇಳಿದಾಗ ಹಾಲು ಇಲ್ಲ, ಎಮ್ಮೆ ಸತ್ತು ಹೋಗಿದೆ ಎನ್ನುತ್ತಾರೆ. ಆದರೆ ಅದರಂತೆ ಎಮ್ಮೆ ಸತ್ತು ಹೋಗುತ್ತದೆ. ಇದನ್ನ ಮನಗಂಡು ನಾವು ಸುಳ್ಳು ಹೇಳಿ ತಪ್ಪು ಮಾಡಿದೆವು. ನಮ್ಮನ್ನು ಕ್ಷಮಿಸಿ ಎಂದಾಗ ಸತ್ತ ಎಮ್ಮೆಯಿಂದ ಹಾಲು ಕರೆಯುವುದು ಮಾತ್ರವಲ್ಲಿ ಆ ಜೀವವನ್ನು ಬದುಕಿಸುತ್ತಾರೆ. ಹೀಗೆ ಅನೇಕ ಪವಾಡಗಳನ್ನು ಮಾಡುತ್ತಾ ಪವಾಡ ಪುರುಷರಾಗುತ್ತಾರೆ.

ಜಾತಿ ಬೇಧವಿಲ್ಲದೇ ಇಲ್ಲಿನ ವಿಶೇಷತೆ ಎಂದರೆ ಮುಸ್ಲಿಮರು ಸಹ ಜಾತ್ರೆಯಲ್ಲಿ ಪಾಲ್ಗೊಂಡು ಜಾತ್ರೆಯನ್ನು ಅದ್ದೂರಿಯಾಗಿ ನಡೆಸುತ್ತಾರೆ. ಈ ಜಾತ್ರೆಗೆ ಆಂಧ್ರಪ್ರದೇಶ, ಸೀಮಾಂಧ್ರ, ತಮಿಳುನಾಡು, ಮಹಾರಾಷ್ಟ್ರ ಮಾತ್ರವಲ್ಲ ವಿದೇಶಿಗರೂ ಸಹ ಜಾತ್ರೆಗೆ ಆಗಮಿಸುತ್ತಾರೆ.

ನಾಯಕನಹಟ್ಟಿ ಜಾತ್ರೆಗೆ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಎಲ್ಲಾ ಸಿದ್ದತೆಗಳನ್ನು ಮಾಡಿದ್ದು, ಜಾತ್ರೆಗೆ ಬರುವ ಭಕ್ತರಿಗೆ ಕುಡಿಯುವ ನೀರಿನ ವ್ಯವಸ್ಥೆ
ಮಾಡಿದೆ.

ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾವಹಿಸಲು ಹಲವೆಡೆ ಸಿಸಿ ಕ್ಯಾಮೆರಾ, ವಿದ್ಯುತ್ ದೀಪಗಳ ವ್ಯವಸ್ಥೆ, ಪೋಲೀಸ್ ಬಂದೋಬಸ್ತ್‌ ಮಾಡಲಾಗಿದೆ.

ಪ್ರಾಣಿ ಬಳಿ ನಿಷೇಧ ಇರುವುದರಿಂದ ದೇವಸ್ಥಾನದ ಸುತ್ತಮುತ್ತ ಪ್ರಾಣಿ ಬಲಿಯನ್ನು ಕೊಡುವಂತಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ. ಭಕ್ತರು ಕೊಬ್ಬರಿಯನ್ನು ಸುಡದೇ ದೇವಸ್ಥಾನಕ್ಕೆ ನೀಡಲು ಮನವಿ ಮಾಡಿದೆ.

(ಲೇಖನ: ಎಸ್. ಸುರೇಶ್ ಬೆಳಗೆರೆ, ಚಳ್ಳಕೆರೆ)

Get in Touch With Us info@kalpa.news Whatsapp: 9481252093

Tags: Bayalu Seeme NewsChallakereChitradurgaFairKannada News WebsiteLatestNewsKannadaMiracleNayakana HattiSri Guru Tipperudra swamyಚಳ್ಳಕೆರೆಚಿತ್ರದುರ್ಗಜಾತ್ರೆನಾಯಕನಹಟ್ಟಿಪಾಳೇಗಾರಬಯಲುಸೀಮೆಶ್ರೀ ಗುರುತಿಪ್ಪೇರುದ್ರ ಸ್ವಾಮಿ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದೇಶಗಳಿಂದ ಆಗಮಿಸುವವರ ಮಾಹಿತಿ ಪಡೆದು ಆರೋಗ್ಯ ತಪಾಸಣೆ ನಡೆಸಿ: ಕ್ಯಾ.ಮಣಿವಣ್ಣನ್

Next Post

ಶಿವಮೊಗ್ಗ: ಸಾಹಸ ಕ್ರೀಡೆ, ಪ್ರವಾಸಿತಾಣವಾಗಿ ಕಲ್ಲೂರು ಮಂಡಳಿ ಪ್ರದೇಶ ಅಭಿವೃದ್ಧಿ

kalpa News

kalpa News

Next Post
ಶಿವಮೊಗ್ಗ: ಸಾಹಸ ಕ್ರೀಡೆ, ಪ್ರವಾಸಿತಾಣವಾಗಿ ಕಲ್ಲೂರು ಮಂಡಳಿ ಪ್ರದೇಶ ಅಭಿವೃದ್ಧಿ

ಶಿವಮೊಗ್ಗ: ಸಾಹಸ ಕ್ರೀಡೆ, ಪ್ರವಾಸಿತಾಣವಾಗಿ ಕಲ್ಲೂರು ಮಂಡಳಿ ಪ್ರದೇಶ ಅಭಿವೃದ್ಧಿ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL