No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಶ್ರೀಲಂಕಾದ ಒಟ್ಟು ರೈಲ್ವೆ ಜಾಲ 2014ರಿಂದ ಕರ್ನಾಟಕದಲ್ಲಿ ನಿರ್ಮಾಣವಾದ ಹೊಸ ರೈಲು ಮಾರ್ಗಕ್ಕೆ ಸಮ

kalpa News by kalpa News
February 3, 2026
in Rail Dairy (ರೈಲ್ವೆ ಸುದ್ದಿಗಳು)
0
ಶ್ರೀಲಂಕಾದ ಒಟ್ಟು ರೈಲ್ವೆ ಜಾಲ 2014ರಿಂದ ಕರ್ನಾಟಕದಲ್ಲಿ ನಿರ್ಮಾಣವಾದ ಹೊಸ ರೈಲು ಮಾರ್ಗಕ್ಕೆ ಸಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಕರ್ನಾಟಕದಲ್ಲಿ ರೈಲು ಮಾರ್ಗದ ವಿಸ್ತರಣೆಗೆ ರೈಲ್ವೆ ಇಲಾಖೆ ನಿರಂತರವಾಗಿ ಶ್ರಮಿಸುತ್ತಿದ್ದು, ಶ್ರೀಲಂಕಾದ ಸಂಪೂರ್ಣ ರೈಲು ಜಾಲದಷ್ಟು ಉದ್ದವನ್ನು ಕರ್ನಾಟಕದಲ್ಲಿ ಒಂದರಲ್ಲೇ 2014ರಿಂದ ನಿರ್ಮಿಸಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ #AshwiniVaishnaw ತಿಳಿಸಿದ್ದಾರೆ.

2026-27 ರ ರೈಲ್ವೆ ಬಜೆಟ್ ಮುಖ್ಯಾಂಶಗಳಿಗೆ ಸಂಬಂಧಿಸಿದಂತೆ #SWR ನೈಋತ್ಯ ರೈಲ್ವೆ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರು ಪತ್ರಿಕಾಗೋಷ್ಠಿ ನಡೆಸಿದರು. ಈ ಗೋಷ್ಠಿಯಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡು ಸಚಿವ ಅಶ್ವಿನಿ ವೈಷ್ಣವ್ ಅವರು ಮಾತನಾಡಿದರು.

ಜಾಲ ವಿಸ್ತರಣೆ ಮತ್ತು ವಿದ್ಯುದೀಕರಣ ಕಾರ್ಯಗಳು ವೇಗವಾಗಿ ಮುನ್ನಡೆಯುತ್ತಿವೆ. 2014ರಿಂದ ರಾಜ್ಯದಲ್ಲಿ ಸುಮಾರು 1,750 ಕಿಮೀ ಹೊಸ ರೈಲು ಹಳಿಗಳನ್ನು ನಿರ್ಮಿಸಲಾಗಿದೆ. ಇದು ಶ್ರೀಲಂಕಾದ ಸಂಪೂರ್ಣ ರೈಲು ಜಾಲದ ಉದ್ದಕ್ಕಿಂತ ಹೆಚ್ಚಾಗಿದೆ ಎಂದರು.

ರಾಜ್ಯದಲ್ಲಿ ಶೇ.97ರಷ್ಟು ವಿದ್ಯುದೀಕರಣ ಸಾಧಿಸಲಾಗಿದ್ದು, 3,368 ಕಿಮೀ ರೈಲು ಮಾರ್ಗಗಳನ್ನು ವಿದ್ಯುದೀಕರಣಗೊಳಿಸಲಾಗಿದೆ. ಜೊತೆಗೆ, ಸುರಕ್ಷತೆ ಮತ್ತು ಸುಗಮ ರಸ್ತೆ-ರೈಲು ಸಂಪರ್ಕಕ್ಕಾಗಿ 707 ಫ್ಲೈಓವರ್’ಗಳು #Flyover ಮತ್ತು ಅಂಡರ್ ಪಾಸ್’ಗಳನ್ನು ನಿರ್ಮಿಸಲಾಗಿದೆ ಎಂದರು.
ಕಳೆದ ದಶಕದಲ್ಲಿ ಬಜೆಟ್ ಹಂಚಿಕೆ ಮತ್ತು ನಿರಂತರ ಹೂಡಿಕೆಯಲ್ಲಿ ನಡೆದ ಐತಿಹಾಸಿಕ ಹೆಚ್ಚಳದಿಂದ ಕರ್ನಾಟಕವು ರೈಲ್ವೆ ಮೂಲಸೌಕರ್ಯದಲ್ಲಿ ಅಭೂತಪೂರ್ವ ಪರಿವರ್ತನೆಗೆ ಸಾಕ್ಷಿಯಾಗಿದೆ ಎಂದರು.

2009-14ರ ಅವಧಿಯಲ್ಲಿ 835 ಕೋಟಿಯಾಗಿದ್ದ ರಾಜ್ಯಕ್ಕೆ ಸರಾಸರಿ ವಾರ್ಷಿಕ ರೈಲ್ವೆ ಬಜೆಟ್ ಹಂಚಿಕೆ, 2026-27ರಲ್ಲಿ 7,748 ಕೋಟಿಗೆ ಏರಿಕೆಯಾಗಿದ್ದು, ಸುಮಾರು ಒಂಬತ್ತು ಪಟ್ಟು ಹೆಚ್ಚಳವಾಗಿದ್ದು ರಾಜ್ಯದಲ್ಲಿ ರೈಲು ಸಾರಿಗೆಯ ವೇಗವಾದ ಆಧುನೀಕರಣಕ್ಕೆ ಕಾರಣವಾಗಿದೆ. ಈ ಹೆಚ್ಚಿದ ಹೂಡಿಕೆಯ ಪರಿಣಾಮವಾಗಿ ಕರ್ನಾಟಕದಾದ್ಯಂತ ಸುಮಾರು 52,950 ಕೋಟಿ ಮೌಲ್ಯದ ರೈಲ್ವೆ ಮೂಲಸೌಕರ್ಯ ಕಾಮಗಾರಿಗಳು ಪ್ರಸ್ತುತ ಪ್ರಗತಿಯಲ್ಲಿವೆ. ಇವು ಹೊಸ ರೈಲು ಹಳಿ ನಿರ್ಮಾಣ, ನಿಲ್ದಾಣಗಳ ಸಮಗ್ರ ಪುನರಾಭಿವೃದ್ಧಿ ಮತ್ತು ಪ್ರಮುಖ ಸುರಕ್ಷತಾ ಸುಧಾರಣೆಗಳನ್ನು ಒಳಗೊಂಡಿದ್ದು, ರಾಜ್ಯದ ಎಲ್ಲ ಭಾಗಗಳಲ್ಲಿ ಸಮತೋಲಿತ ಅಭಿವೃದ್ಧಿಯನ್ನು ಖಚಿತಪಡಿಸುತ್ತಿವೆ ಎಂದರು.ಅಮೃತ್ ನಿಲ್ದಾಣ #AmrithRailwayStation ಯೋಜನೆಯಡಿಯಲ್ಲಿ ಪ್ರಯಾಣಿಕರ ಅನುಭವವನ್ನು ಆಧುನಿಕ ಹಾಗೂ ವಿಶ್ವಮಟ್ಟದ ಸೌಲಭ್ಯಗಳ ಮೂಲಕ ಮರುರೂಪಿಸಲಾಗುತ್ತಿದೆ. 2,110 ಕೋಟಿ ವೆಚ್ಚದಲ್ಲಿ ಕರ್ನಾಟಕದ 61 ನಿಲ್ದಾಣಗಳನ್ನು ಸಂಪೂರ್ಣ ಪುನರಾಭಿವೃದ್ಧಿಗೆ ಗುರುತಿಸಲಾಗಿದೆ. ಬಾಗಲಕೋಟೆ, ಧಾರವಾಡ, ಗದಗ, ಗೋಕಾಕ್ ರೋಡ್ ಮತ್ತು ಮುನಿರಾಬಾದ್ ನಿಲ್ದಾಣಗಳಲ್ಲಿ ಕಾಮಗಾರಿಗಳು ಪೂರ್ಣಗೊಂಡಿದ್ದು, ಬಾದಾಮಿ, ಆಳ್ನಾವರ್, ಕೊಪ್ಪಳ ಮತ್ತು ಬಂಟವಾಳ ನಿಲ್ದಾಣಗಳು ಉದ್ಘಾಟನೆಗೆ ಸಿದ್ಧವಾಗಿವೆ. ಈ ನಿಲ್ದಾಣಗಳು ಪ್ರಯಾಣಿಕರಿಗೆ ಸುಧಾರಿತ ಸೌಲಭ್ಯಗಳು, ಉತ್ತಮ ವ್ಯವಸ್ಥೆ ಮತ್ತು ಆಧುನಿಕ ಪ್ರಯಾಣ ವಾತಾವರಣವನ್ನು ಒದಗಿಸುತ್ತವೆ ಎಂದು ತಿಳಿಸಿದರು.
ಪ್ರೀಮಿಯಂ ರೈಲು ಸೇವೆಗಳ ವಿಸ್ತರಣೆಯಿಂದ ರಾಜ್ಯದ ಒಳಗೂ ಹೊರಗೂ ಸಂಪರ್ಕದಲ್ಲಿ ಗಮನಾರ್ಹ ಸುಧಾರಣೆ ಕಂಡುಬಂದಿದೆ. ಪ್ರಸ್ತುತ ಕರ್ನಾಟಕದಲ್ಲಿ 12 ಜೋಡಿ ವಂದೇ ಭಾರತ್ ಎಕ್ಸ್’ಪ್ರೆಸ್ ಮತ್ತು 3 ಜೋಡಿ #AmrithBharatTrains ಅಮೃತ್ ಭಾರತ್ ಎಕ್ಸ್’ಪ್ರೆಸ್ ರೈಲುಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರಯಾಣದ ವೇಗ, ಆರಾಮ ಮತ್ತು ದಕ್ಷತೆಯನ್ನು ಹೆಚ್ಚಿಸಿವೆ ಎಂದರು.

ರೈಲು ಸುರಕ್ಷತೆಯ ಕ್ಷೇತ್ರದಲ್ಲಿ ಕವಚ್’ ಎಂಬ ಅತ್ಯಾಧುನಿಕ ರೈಲು ಘರ್ಷಣೆ ತಪ್ಪಿಸುವ ವ್ಯವಸ್ಥೆಯನ್ನು ಹಂತ ಹಂತವಾಗಿ ಅಳವಡಿಸಲಾಗುತ್ತಿದೆ. ಈಗಾಗಲೇ 132 ಮಾರ್ಗ ಕಿಲೋಮೀಟರ್’ಗಳಲ್ಲಿ ಕವಚ್ ಕಾರ್ಯಾರಂಭಗೊಂಡಿದ್ದು, ಸುಮಾರು 1,500 ಮಾರ್ಗ ಕಿಲೋಮೀಟರ್’ಗಳಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿವೆ ಮತ್ತು ಟೆಂಡರ್ ಹಂತದಲ್ಲಿವೆ. ಒಟ್ಟು 3,610 ಮಾರ್ಗ ಕಿಲೋಮೀಟರ್’ಗಳಿಗೆ ಕವಚ್ ಅಳವಡಿಕೆಗೆ ಮಂಜೂರಾಗಿದೆ ಎಂದು ಮಾಹಿತಿ ನೀಡಿದರು.

ನೈಋತ್ಯ ರೈಲ್ವೆಯ ಅಧೀನದಲ್ಲಿರುವ ಗೋವಾದಲ್ಲಿಯೂ ರೈಲ್ವೆ ಮೂಲಸೌಕರ್ಯದಲ್ಲಿ ಸ್ಥಿರವಾದ ಬೆಳವಣಿಗೆ ಕಂಡುಬರುತ್ತಿದೆ. 2026-27ರಲ್ಲಿ ಗೋವಾಕ್ಕೆ ಸರಾಸರಿ ವಾರ್ಷಿಕ 515 ಕೋಟಿ ಬಜೆಟ್ ಹಂಚಿಕೆ ಮಾಡಲಾಗಿದೆ ಎಂದರು.
ಪ್ರಸ್ತುತ 4,344 ಕೋಟಿ ಮೌಲ್ಯದ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಸಾಮರ್ಥ್ಯ ವೃದ್ಧಿ, ನಿಲ್ದಾಣ ಪುನರಾಭಿವೃದ್ಧಿ ಮತ್ತು ಸುರಕ್ಷತಾ ಸುಧಾರಣೆಗಳ ಮೇಲೆ ಒತ್ತು ನೀಡಲಾಗಿದೆ. ಅಮೃತ್ ನಿಲ್ದಾಣ ಯೋಜನೆಯಡಿಯಲ್ಲಿ ಗೋವಾದ ಮೂರು ನಿಲ್ದಾಣಗಳನ್ನು 65 ಕೋಟಿ ವೆಚ್ಚದಲ್ಲಿ ಪುನರಾಭಿವೃದ್ಧಿ ಮಾಡಲಾಗುತ್ತಿದೆ. ಎರಡು ಜೋಡಿ ವಂದೇ ಭಾರತ್ ಎಕ್ಸ್’ಪ್ರೆಸ್ ರೈಲುಗಳು ಕಾರ್ಯನಿರ್ವಹಿಸುತ್ತಿವೆ ಎಂದರು.

2014ರಿಂದ 24 ಕಿಮೀ ಹೊಸ ರೈಲು ಹಳಿ ನಿರ್ಮಾಣವಾಗಿದ್ದು, 171 ಕಿಮೀ ವಿದ್ಯುದೀಕರಣದೊಂದಿಗೆ 91% ವಿದ್ಯುದೀಕರಣ ಸಾಧಿಸಲಾಗಿದೆ. ಜೊತೆಗೆ 11 ಫ್ಲೈಓವರ್’ಗಳು ಮತ್ತು ಅಂಡರ್’ಪಾಸ್’ಗಳನ್ನು ನಿರ್ಮಿಸಲಾಗಿದೆ. 4,730 ಕೋಟಿ ಅಂದಾಜು ವೆಚ್ಚದಲ್ಲಿ 312 ಕಿಮೀ ಉದ್ದದ ಹೊಸಪೇಟೆ-ವಾಸ್ಕೋ ಡಿ ಗಾಮಾ ಜೋಡಿಮಾರ್ಗ ಯೋಜನೆ ಮಂಜೂರಾಗಿದ್ದು, ಇದು ಸಾಮರ್ಥ್ಯ ವೃದ್ಧಿಗೆ ಮಹತ್ವದ ಉತ್ತೇಜನ ನೀಡಲಿದೆ ಎಂದರು.

ಈ ವಿಡಿಯೋ ಕಾನ್ಫರೆನ್ಸ್’ನಲ್ಲಿ ನೈಋತ್ಯ ರೈಲ್ವೆಯ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾದ ಪಿ. ಅನಂತ್ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಅಶುತೋಷ್ ಕುಮಾರ್ ಸಿಂಗ್, ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಬೇಲಾ ಮೀನಾ, ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಹಾಗೂ ವಿವಿಧ ವಿಭಾಗಗಳ ಪ್ರಧಾನ ಮುಖ್ಯಸ್ಥರು ವರ್ಚುವಲ್ ಮೂಲಕ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

 

Tags: Ashwini VaishnawElectrificationFlyoverIndian RailwayIRCTCKannada News WebsiteLatest News KannadaSouth Western Railwayಅಂಡರ್ ಪಾಸ್’ಅಶ್ವಿನಿ ವೈಷ್ಣವ್ಕರ್ನಾಟಕನವದೆಹಲಿಫ್ಲೈಓವರ್ರೈಲು ಮಾರ್ಗರೈಲ್ವೆ ಇಲಾಖೆರೈಲ್ವೆ ಸಚಿವವಿದ್ಯುದೀಕರಣಶ್ರೀಲಂಕಾ
Share203Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

ಜ್ಯೋತಿಷಿ ಕಮಲಾಕರ ಭಟ್ ಸೇರಿ ಏಳು ಮಂದಿ ಅರೆಸ್ಟ್ | ಕಾರಣವೇನು?

Next Post

SSLC ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ | ಯಾವತ್ತು ಯಾವ ವಿಷಯ? ಇಲ್ಲಿದೆ ಡೀಟೇಲ್ಸ್

kalpa News

kalpa News

Next Post
SSLC ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ | ಯಾವತ್ತು ಯಾವ ವಿಷಯ? ಇಲ್ಲಿದೆ ಡೀಟೇಲ್ಸ್

SSLC ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ | ಯಾವತ್ತು ಯಾವ ವಿಷಯ? ಇಲ್ಲಿದೆ ಡೀಟೇಲ್ಸ್

Leave a Reply Cancel reply

Your email address will not be published. Required fields are marked *

No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL