ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಜನವರಿ 1ರಿಂದಲೇ ಎಸ್’ಎಸ್’ಎಲ್’ಸಿ ಹಾಗೂ ಪಿಯುಸಿ ತರಗತಿಗಳು ಆರಂಭವಾಗಲಿವೆ ಎಂದು ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಮೂಲಕ ಪೋಷಕರ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಈಗಾಗಲೇ ನಿಗದಿಪಡಿಸಿರುವಂತೆ ಜ.1ರಿಂದಲೇ ತರಗತಿಗಳು ಆರಂಭವಾಗಲಿವೆ. ಈ ವಿಚಾರದಲ್ಲಿ ಯಾವುದೇ ರೀತಿಯ ಬದಲಾವಣೆಯಿಲ್ಲ. ಈ ಬಗ್ಗೆ ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡಬಾರದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post