No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Wednesday, September 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರ ಸಂಪೂರ್ಣ ಸ್ಯಾನಿಟೈಸ್: ಮಾಸ್ಕ್‌ ಕಡ್ಡಾಯ, ವಿದ್ಯಾರ್ಥಿಗಳಿಗೆ ನೀರು, ಬಿಸ್ಕಟ್

kalpa News by kalpa News
June 17, 2020
in ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂದರ್ಭದಲ್ಲಿ ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ನಡೆಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರೀಕ್ಷೆ ಸಿದ್ಧತೆ ಕುರಿತು ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಪಿಯುಸಿ ಪರೀಕ್ಷೆ ನಡೆಯಲಿರುವ ಎಲ್ಲಾ 33 ಕೇಂದ್ರಗಳನ್ನು ಈಗಾಗಲೆ ಎರಡು ಬಾರಿ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಪರೀಕ್ಷೆಗೆ ಕೊಠಡಿಯನ್ನು ಹಸ್ತಾಂತರಿಸುವ ಪೂರ್ವದಲ್ಲಿ ಇನ್ನೊಮ್ಮೆ ಸ್ಯಾನಿಟೈಸ್ ಮಾಡಲು ಸೂಚಿಸಲಾಗಿದೆ. ಪ್ರತಿ ವಿದ್ಯಾರ್ಥಿ ಮಾಸ್ಕ್‌ ಧರಿಸಿಕೊಂಡು ಬರಲು ಸೂಚಿಸಲಾಗಿದೆ. ಆದರೂ ಪ್ರತಿಯೊಬ್ಬ ವಿದ್ಯಾರ್ಥಿಗೂ ಒಂದು ಮಾಸ್ಕ್ ಒದಗಿಸಬೇಕು. ಇದೇ ರೀತಿ ದೂರದಿಂದ ಬರುವ ವಿದ್ಯಾರ್ಥಿಗಳಿಗೆ ನೀರು ಹಾಗೂ ಬಿಸ್ಕಿಟ್ ಪ್ಯಾಕೇಟ್ ನೀಡಲು ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಪಿಯು ವಿದ್ಯಾರ್ಥಿಗಳಿಗಾಗಿ ಒಟ್ಟು 129 ರೂಟ್‌ಗಳಿಗೆ 133 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಬಸ್‌ನಲ್ಲಿ ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಏನಾದರೂ ಅನಾನುಕೂಲತೆ ಉಂಟಾದರೆ ನೋಡಲ್ ಅಧಿಕಾರಿ ಜವಾಬ್ದಾರಿ ಮಾಡಲಾಗುವುದು ಎಂದು ಅವರು ಹೇಳಿದರು.

ಇದೇ ರೀತಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸಲು ಕ್ರಮ ಕೈಗೊಳ್ಳಬೇಕು. ಯಾವುದೇ ಲೋಪ ಉಂಟಾಗದಂತೆ ಮುನ್ನಚ್ಚರಿಕೆ ವಹಿಸಬೇಕು. ಒಟ್ಟು 84 ಕೇಂದ್ರಗಳಿದ್ದು, ಗ್ರಾಮೀಣ ಭಾಗದಲ್ಲಿ 40 ಹಾಗೂ ನಗರ ಪ್ರದೇಶದಲ್ಲಿ 44 ಕೇಂದ್ರಗಳಿವೆ. ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆ ತರಲು 239 ಬಸ್ ವ್ಯವಸ್ಥೆ ಮಾಡಲಾಗಿದೆ. 189 ರೂಟ್‌ಗಳಲ್ಲಿ ಒಟ್ಟು 336 ಪಾಯಿಂಟ್ ಗುರುತಿಸಲಾಗಿದೆ. ವಿದ್ಯಾರ್ಥಿಗಳನ್ನು ಕರೆ ತರಲು ರೂಟ್ ಬಸ್‌ಗಳನ್ನು ಹೊರತುಪಡಿಸಿ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಬೇಕು. ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದಿಂದ ಸ್ವಲ್ಪ ದೂರದಲ್ಲಿ ಬಿಸಿಯೂಟ ವ್ಯವಸ್ಥೆ ಮಾಡಬೇಕು.

ವಿದ್ಯಾರ್ಥಿಗಳು ಹಾಲ್ ಟಿಕೆಟ್ ಪಡೆಯಲು ಬರುವ ಸಂದರ್ಭದಲ್ಲಿ 3 ಮಾಸ್ಕ್‌ ಒದಗಿಸಲು ಸೂಚಿಸಲಾಗಿದೆ. ಸುಗಮವಾಗಿ ಪರೀಕ್ಷೆ ನಡೆಸಲು ಸರ್ಕಾರದ ವತಿಯಿಂದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪಾಲಕರು ಸಹ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂದು ಸಚಿವರು ತಿಳಿಸಿದರು.

ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ, ಡಿಡಿಪಿಯು ನಾಗರಾಜ ಕಾಗಲರ್ಕ, ಡಿಡಿಪಿಐ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

Get In Touch With Us info@kalpa.news Whatsapp: 9481252093

Tags: CoronavirusCovid19KannadaNewsWebsiteLatestNewsKannadaShivamoggaSSLC Exam 2020ಎಸ್‌ಎಸ್‌ಎಲ್‌ಸಿ ಪರೀಕ್ಷೆಶಿವಮೊಗ್ಗಸಚಿವ ಕೆ.ಎಸ್.ಈಶ್ವರಪ್ಪಸ್ಯಾನಿಟೈಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದಾವಣಗೆರೆ ಜಿಲ್ಲೆಯ ಮಹಿಳೆ ಶಿವಮೊಗ್ಗದಲ್ಲಿ ಕೊರೋನಾಗೆ ಬಲಿ

Next Post

ಗಣೇಶೋತ್ಸವ ಗಲಭೆಗೆ ಸಂಬಂಧಿಸಿದ 110 ಜನರ ಮೊಕದ್ದಮೆ ಹಿಂತೆಗೆದ ರಾಜ್ಯ ಸರ್ಕಾರ

kalpa News

kalpa News

Next Post

ಗಣೇಶೋತ್ಸವ ಗಲಭೆಗೆ ಸಂಬಂಧಿಸಿದ 110 ಜನರ ಮೊಕದ್ದಮೆ ಹಿಂತೆಗೆದ ರಾಜ್ಯ ಸರ್ಕಾರ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL