ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿದ್ದ ಎಸ್’ಎಸ್’ಎಲ್’ಸಿ ಪರೀಕ್ಷೆ ನಡೆಸಲು ಸಿದ್ದತೆ ನಡೆಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಫೇಸ್’ಬುಕ್ ಮೂಲಕ ವಿದ್ಯಾರ್ಥಿಗಳು ಹಾಗೂ ಫೋಷಕರಿಗೆ ಸಂದೇಶ ನೀಡಿರುವ ಅವರು, ಲಾಕ್ ಡೌನ್ ಈಗಾಗಲೇ ಒಂದಷ್ಟು ಸಡಿಲಗೊಂಡಿದ್ದು, ಪರಿಸ್ಥಿತಿ ಇನ್ನಷ್ಟು ತಿಳಿಯಾದ ನಂತರ ಅಂದರೆ ಬಹುತೇಕ ಜೂನ್ ತಿಂಗಳಿನ ಎರಡು ಅಥವಾ ಮೂರನೆಯ ವಾರದಲ್ಲಿ ಪರೀಕ್ಷೆ ನಡೆಸಲು ನಾವು ಚಿಂತನೆ ನಡೆಸುತ್ತಿದ್ದೇವೆ ಎಂದಿದ್ದಾರೆ.
ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಿದ ನಂತರ ವಿದ್ಯಾರ್ಥಿಗಳಿಗೆ ಕನಿಷ್ಠ 15ರಿಂದ 20 ದಿನಗಳ ಕಾಲ ಅವಕಾಶವನ್ನು ನೀಡಲಾಗುತ್ತದೆ. ಒಂದು ಪರೀಕ್ಷಾ ಹಾಲ್’ನಲ್ಲಿ ಮೊದಲಿಗಿಂತಲೂ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳು ಅಂತರದಲ್ಲಿ ಕುಳಿತು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗುತ್ತದೆ. ಪರೀಕ್ಷಾ ಕೇಂದ್ರದಲ್ಲಿ ಸ್ಯಾನಿಟೈಸರ್ ಪೂರೈಕೆ ಮಾಡಲಾಗುವುದು. ಪ್ರಮುಖವಾಗಿ ಪರೀಕ್ಷೆ ಬರೆಯುವ ಪ್ರತಿ ವಿದ್ಯಾರ್ಥಿಯೂ ಮಾಸ್ಕ್ ಧರಿಸುವುದು ಕಡ್ಡಾಯವಾಗುತ್ತದೆ ಎಂದರು.
ಇನ್ನು, ತಮ್ಮ ಶಾಲೆಯಿಂದ ದೂರದ ತಮ್ಮ ಊರುಗಳಿಗೆ ತೆರೆಗಳಿರುವ ವಿದ್ಯಾರ್ಥಿಗಳು ತಮ್ಮ ಊರಿನಲ್ಲಿರುವ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಂಡು ಬರೆಯಬಹುದಾಗಿದೆ ಎಂದಿದ್ದಾರೆ.
Get in Touch With Us info@kalpa.news Whatsapp: 9481252093

















