ಕಲ್ಪ ಮೀಡಿಯಾ ಹೌಸ್ | ತಿರುಪತಿ |
ತಿಮ್ಮಪ್ಪನ ಸನ್ನಿಧಿಯಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಈವರೆಗೂ ಒಟ್ಟು ಆರು ಭಕ್ತರು ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಇಂದು ಮುಂಜಾನೆಯ ವರದಿಯಂತೆ ಕಾಲ್ತುಳಿತದಲ್ಲಿ ಒಟ್ಟು ಆರು ಭಕ್ತರು ಸಾವನ್ನಪ್ಪಿದ್ದಾರೆ. 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಗತ್ಯವಿರುವವರಿಗೆ ಹೆಚ್ಚಿನ ಚಿಕಿತ್ಸೆಗೆ ಎಲ್ಲ ರೀತಿಯ ವ್ಯವಸ್ಥೆ ಮಾಡುವಂತೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸೂಚನೆ ನೀಡಿದ್ದಾರೆ.
Also Read>> Minister George Orders Technical Investigation into Bidadi Waste-to-Energy Power Unit incident
ಪ್ರಧಾನಿ ದುಃಖ
ಇನ್ನು, ಏಕಾಏಕಿ ಸಂಭವಿಸಿದ ಈ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ದುಃಖ ವ್ಯಕ್ತಪಡಿಸಿದ್ದಾರೆ.

ಇನ್ನು ಘಟನೆ ಹಿನ್ನೆಲೆಯಲ್ಲಿ ಸಿಎಂ ಚಂದ್ರಬಾಬು ನಾಯ್ಡು ಅವರು ಇಂದು ತಿರುಪತಿಗೆ ಭೇಟಿ ನೀಡಲಿದ್ದಾರೆ.
ಈ ಕುರಿತಂತೆ ಸಿಎಂ ಕಚೇರಿ ಪ್ರಕಟಿಸಿರುವ ಮಾಹಿತಿಯಂತೆ, ಮುಖ್ಯಮಂತ್ರಿಗಳು ಇಂದು ತಿರುಪತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ನಂತರ ಗಾಯಗಳನ್ನು ಅವರು ಭೇಟಿ ಮಾಡಲಿದ್ದಾರೆ.
ಘಟನೆ ಹೇಗಾಯ್ತು?
ವೈಕುಂಠ ಏಕಾದಶಿಯ ಹಿನ್ನೆಲೆಯಲ್ಲಿ ವೈಕುಂಠ ದ್ವಾರ ದರ್ಶನಕ್ಕಾಗಿ ಟಿಕೇಟ್ ವಿತರಣೆ ವ್ಯವಸ್ಥೆಯಾಗಿತ್ತು. `ದರ್ಶನ’ ಟೋಕನ್ ವಿತರಣೆಯ ಸಮಯದಲ್ಲಿ ತಿರುಮಲ ಶ್ರೀವರಿ ವೈಕುಂಠ ದ್ವಾರ ಟಿಕೆಟ್ ಕೌಂಟರ್’ನಲ್ಲಿರುವ ವಿಷ್ಣು ನಿವಾಸದ ಬಳಿ ಈ ಘಟನೆ ಸಂಭವಿಸಿದೆ.

ಇನ್ನು, ಘಟನೆ ಹಿನ್ನೆಲೆಯಲ್ಲಿ ಟೋಕನ್ ವಿತರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ, ಇಂದು ಮತ್ತೆ ವಿತರಣೆ ಆರಂಭವಾಗಿದ್ದು, ಯಾವುದೇ ರೀತಿಯ ದುರ್ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post