ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯ ಉದಯೋನ್ಮುಖ ಕವಯಿತ್ರಿ, ಅಂಕಣಗಾರ್ತಿ, ಲೇಖಕಿ ಕು.ನಿತ್ಯಶ್ರೀ ಅವರಿಗೆ ಬೆಂಗಳೂರಿನ ಉತ್ತಿಷ್ಠ ಚಾರಿಟೆಬಲ್ ಸೇವಾ ಟ್ರಸ್ಟ್ ವತಿಯಿಂದ ಸಾಹಿತ್ಯ ಕ್ಷೇತ್ರದಲ್ಲಿ ಕೊಡಮಾಡುವ ಉತ್ತಿಷ್ಠ ಸಾಧಕರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಾಹಿತ್ಯ ಕ್ಷೇತ್ರದಲ್ಲಿ ಈ ಯುವ ಕವಯಿತ್ರಿಯ ಸಾಧನೆಯನ್ನು ಗುರುತಿಸಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಸುಜಾತಾ, ಗೌರಧ್ಯಕ್ಷರಾದ ನರಸಿಂಹ ಮೂರ್ತಿ ಮತ್ತು ಮುಖ್ಯ ಅತಿಥಿಗಳಾದ ಡಿವೈಎಸ್’ಪಿ ರಮೇಶ್ ಮತ್ತು ಇನ್ನಿತರ ಅತಿಥಿ ಗಣ್ಯರ ಸಮ್ಮುಖದಲ್ಲಿ ಕಿರಿಯ ವಯಸ್ಸಿನಲ್ಲೇ ಸಾಹಿತ್ಯದಲ್ಲಿ ನಿರತರಾದ ಇವರಿಗೆ ಉತ್ತಿಷ್ಠ ಸಾಧಕ ರತ್ನ ರಾಜ್ಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post