ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ವಂದಿತಾ ಶರ್ಮಾ ಅವರನ್ನು ನೇಮಿಸಲಾಗಿದೆ.
Also Read: ರೋಸ್ಟರ್ ಪದ್ಧತಿ ಅನುಸರಿಸದ ಕಾಲೇಜುಗಳ ವಿರುದ್ದ ಕ್ರಮಕ್ಕೆ ಆಗ್ರಹ: ಎನ್’ಎಸ್’ಯುಐ ಪ್ರತಿಭಟನೆ
ಈ ಕುರಿತಂತೆ ರಾಜ್ಯಪಾಲರ ಸೂಚನೆಯಂತೆ ಡಿಪಿಎಆರ್ ಡೆಪ್ಯೂಟಿ ಸೆಕ್ರಟರಿ ಅವರು ಆದೇಶ ಹೊರಡಿಸಿದ್ದಾರೆ.
ಹಾಲಿ ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್ ಅವರು ಇದೇ ಮೇ 31 ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಇವರ ಸ್ಥಾನಕ್ಕೆ ವಂದಿತಾ ಶರ್ಮಾ ಅವರನ್ನು ನಿಯೋಜಿಸಲಾಗಿದೆ.
Also Read: ವಿನೋಬನಗರ ಮಾರುಕಟ್ಟೆ ಜಾಗದಲ್ಲಿ ಸಂಚಾರ ದಟ್ಟಣೆ: ಪರಿಹರಿಸುವಂತೆ ಮನವಿ
1986ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ವಂದಿತಾ ಶರ್ಮಾ ಹಾಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತಾಗಿದ್ದಾರೆ. ಮುಂದಿನ ವರ್ಷ ನವೆಂಬರ್’ವರೆಗೆ ಅಧಿಕಾರವಧಿ ಇರಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post