ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಸಚಿವ ಸಿ.ಟಿ. ರವಿ ಅವರಿಗೆ ಮೂರನೆಯ ಪರೀಕ್ಷೆಯಲ್ಲಿಯೂ ಸಹ ಕೊರೋನಾ ಪಾಸಿಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತಂತೆ ಅವರೇ ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಿನ್ನೆ ನಾನು, ಮಡದಿ ಪಲ್ಲವಿ, ನನ್ನ ಸಿಬ್ಬಂದಿ ವರ್ಗ ಕೋವಿಡ್19 ಪರೀಕ್ಷೆಗೆ ಒಳಪಟ್ಟಿದ್ದೆವು. ಪಲ್ಲವಿ ಹಾಗೂ ನನ್ನ ಗನ್’ಮ್ಯಾನ್, ಚಾಲಕ ಸೇರಿ ಆಫೀಸ್ ಸಿಬ್ಬಂದಿ ಎಲ್ಲರದು ನೆಗೆಟಿವ್ ಬಂದಿದೆ ಎಂದಿದ್ದಾರೆ.
ಥರ್ಡ್ ಅಂಪೈರ್ ಫಲಿತಾಂಶದಲ್ಲಿ ನನಗೆ ಕೋವಿಡ್ ಪಾಸಿಟಿವ್ ಇದೆ ಎಂಬುದು ದೃಢವಾಗಿದೆ. ಆದರೆ ಯಾವುದೇ ತೊಂದರೆಗಳ ಲಕ್ಷಣಗಳಿಲ್ಲದೆ ನಾನು ಸಹಜವಾಗಿದ್ದೇನೆ. ಸೂಕ್ತ ಚಿಕಿತ್ಸೆಗಳನ್ನು ಪಡೆಯುತ್ತಾ ನಾನು ಇಲ್ಲಿಂದಲೇ ಕೆಲಸ ಮುಂದುವರಿಸುಲಿದ್ದು ಆದಷ್ಟು ಬೇಗ ಗುಣಮುಖನಾಗಿ ನಿಮ್ಮೆಲ್ಲರೊಂದಿಗೆ ಕೆಲಸ ಮಾಡುತ್ತೇನೆ ಎಂದಿದ್ದಾರೆ.
Get In Touch With Us info@kalpa.news Whatsapp: 9481252093
















