ಬೆಂಗಳೂರು: ರಾಜ್ಯದ 15ನೆಯ ವಿಧಾನಸಭೆಗೆ ಜುಲೈ 2ರಿಂದ ಮೊದಲ ಪೂರ್ಣ ಪ್ರಮಾಣದ ಅಧಿವೇಶನ ಆರಂಭವಾಗಲಿದ್ದು, ಜುಲೈ 5ರಂದು ಬಜೆಟ್ ಮಂಡನೆಯಾಗಲಿದೆ.
ಈ ಕುರಿತಂತೆ ಮಾತನಾಡಿರುವ ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಭೈರೇಗೌಡ, ರಾಜ್ಯ ಸಚಿವರ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಜುಲೈ 2ರಂದು ರಾಜ್ಯಪಾಲ ವಿ.ಆರ್. ವಾಲಾ ಅವರು ವಿಧಾನಮಂಟಲ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದರು.
ಜೆಡಿಎಸ್-ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಬಹುಮತ ಸಾಬೀತು ಪಡಿಸಲು ಜುಲೈ 25ರಂದು ಅಧಿವೇಶನ ನಡೆಸಲಾಗಿತ್ತು.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೇ ಹಣಕಾಸು ಖಾತೆಯನ್ನೂ ಸಹ ಹೊಂದಿದ್ದು, ಜುಲೈ 5ರಂದು ಅವರೇ ಆಯವ್ಯಯ ಮಂಡನೆ ಮಾಡಲಿದ್ದಾರೆ.
Discussion about this post