ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರ ಬಡ್ತಿ ಮೀಸಲಾತಿಗೆ ಸಂಬಂಧಪಟ್ಟ ಕಾಯ್ದೆ ಅನುಷ್ಠಾನಕ್ಕೆ ಬುಧವಾರ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ, ಎಸ್’ಸಿ, ಎಸ್’ಟಿ ಬಡ್ತಿ ಮೀಸಲಾತಿ ವಿಧೇಯಕ ಜಾರಿಗೆ ಸಂಪುಟ ಸಮ್ಮತಿ ನೀಡಿದೆ ಎಂದರು.
ಈಗಾಗಲೇ ಎಸ್’ಸಿ, ಎಸ್’ಟಿ ಬಡ್ತಿ ಮೀಸಲಾತಿ ಮಸೂದೆಗೆ ರಾಷ್ಟಪತಿಗಳ ಅಂಕಿತ ಹಾಕಿದ್ದಾರೆ. ಹೀಗಾಗಿ ಕಾಯ್ದೆ ಜಾರಿಗೊಳಿಸಲಾಗುತ್ತಿದೆ ಮತ್ತು ಸುಪ್ರೀಂ ಕೋರ್ಟ್ ನ ಅಂತಿಮ ತೀರ್ಪಿಗೆ ಒಳಪಡುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆಯಾಗುವುದಿಲ್ಲ ಎಂದು ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿಯವರೇ ಲಿಖಿತವಾಗಿ ನಮಗೆ ತಿಳಿಸಿದ್ದಾರೆ ಎಂದಿದ್ದಾರೆ.
Discussion about this post