ಶಿವಮೊಗ್ಗ: ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ಅಪವಿತ್ರ ಮೈತ್ರಿ ಸರ್ಕಾರ ಶೀಘ್ರದಲ್ಲೇ ಪತನಗೊಳ್ಳಲಿದೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಭವಿಷ್ಯ ನುಡಿದಿದ್ದಾರೆ.
ಈ ಕುರಿತಂತೆ ಇಂದು ಮಾತನಾಡಿರುವ ಅವರು, ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿಯಲ್ಲಿ ವಿಶ್ವಾಸವನ್ನು ಇಟ್ಟು ಸರ್ಕಾರವನ್ನು ರಚಿಸಲು ಆಶೀರ್ವಾದವನ್ನು ನೀಡಿದ್ದರು. ಆದರೆ ಕಾಂಗ್ರೆಸ್ ಹಾಗೂ ಜೆಡಿಎಸ್ ಅಪವಿತ್ರ ಮೈತ್ರಿಯಿಂದ ಬಿಜೆಪಿ ಅಧಿಕಾರದಿಂದ ದೂರ ಇರಬೇಕಾಗಿ ಬಂತು ಎಂದರು.
ಕಾಂಗ್ರೆಸ್ ಹಾಗೂ ಜೆಡಿಎಸ್ ಅಪವಿತ್ರ ಸಮ್ಮಿಶ್ರ ಸರ್ಕಾರ ಬಹಳ ದಿನ ಉಳಿಯಲ್ಲ ಎಂದು ಕಾಂಗ್ರೆಸ್ಸಿನವರೇ ಹೇಳುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ನೇತೃತ್ವದ ಎಚ್.ಡಿ. ಕುಮಾರಸ್ವಾಮಿ ಅವರ ಆಡಳಿತ ದಿಕ್ಕು ತಪ್ಪಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ ಎಂದು ಟೀಕಿಸಿದರು.
Discussion about this post