ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಬಿಸಿ ಊಟ ನೌಕರರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಧನವನ್ನು 1000 ರೂ.ಗಳ ಏರಿಕೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
Also Read>> ಚಿಕ್ಕಮಗಳೂರು | ಅರೆಸ್ಟ್ ಆಗಿದ್ದು ಒಬ್ಬ, ಹೊರ ಬಿದ್ದಿದ್ದು 8 ಕೇಸ್ | ಕೃತ್ಯ ನಡೆದ 24 ಗಂಟೆಯಲ್ಲಿ ಆರೋಪಿ ಅರೆಸ್ಟ್
ರಾಜ್ಯ ಬಜೆಟ್ ಭಾಷಣದಲ್ಲಿ ಈ ಕುರಿತಂತೆ ಉಲ್ಲೇಖಿಸಿರುವ ಅವರು, ಶಾಲೆಗಳಲ್ಲಿ ಬಿಸಿ ಊಟ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ನೌಕರರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಧನವನ್ನು 1000 ಸಾವಿರ ರೂ.ಗಳ ಏರಿಕೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಇನ್ನು, ರಾಜ್ಯದ 53 ಲಕ್ಷ ವಿದ್ಯಾರ್ಥಿಗಳ ಅಪೌಷ್ಠಿಕತೆಯನ್ನು ಹೋಗಲಾಡಿಸಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.
53 ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನಗಳ ಕಾಲ ಮೊಟ್ಟೆ/ಬಾಳೆಹಣ್ಣನ್ನು ನೀಡಲು ಮುಂದಾಗಿದೆ.
ಅಲ್ಲದೇ, ಅಜೀಂ ಪ್ರೇಂಜಿ ಫೌಂಡೇಶನ್ ಸಹಕಾರದಲ್ಲಿ ಸುಮಾರು 1500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ 5 ದಿನಗಳ ಕಾಲ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post