ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರಾಜ್ಯದ ಜನರ ನೆರವಿಗೆ ಧಾವಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಇದಕ್ಕಾಗಿ 1610 ಕೋಟಿ ರೂ. ಮೊತ್ತದ ಬೃಹತ್ ಪ್ಯಾಕೇಜ್ ಘೋಷಿಸಿದೆ.
ಈ ಕುರಿತಂತೆ ಘೋಷಣೆ ಮಾಡಿ ಮಾತನಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಹೂವು ಬೆಳೆಗಾರರಿಗೆ ಹೆಕ್ಟೇರ್’ಗೆ ಸೀಮಿತವಾಗಿ 25 ಸಾವಿರ ರೂ ಪರಿಹಾರ. 11,687 ಹೆಕ್ಟೇರ್ ಪ್ರದೇಶದಲ್ಲಿ ಹೂವು ಬೆಳೆಯಲಾಗಿದೆ. ಅಗಸರು ಹಾಗೂ ಕ್ಷೌರಿಕರಿಗೆ ತಲಾ 5 ಸಾವಿರ ರೂ ಪರಿಹಾರ ನೀಡಲಾಗುವುದು. ಇದರಿಂದ ಸುಮಾರು 60 ಸಾವಿರ ಅಗಸರು ಹಾಗೂ 2 ಲಕ್ಷದ 30 ಸಾವಿರ ಕ್ಷೌರಿಕ ಸಮುದಾಯದವರಿಗೆ ಈ ನೆರವು ದೊರೆಯಲಿದೆ. ರಾಜ್ಯದಲ್ಲಿರುವ 7 ಲಕ್ಷದ 75 ಸಾವಿರ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ 5 ಸಾವಿರ ರೂ ಪರಿಹಾರ ನೀಡಲಾಗುವುದು ಎಂದರು.
ತರಕಾರಿ ಹಾಗೂ ಹಣ್ಣು ಬೆಳೆಗಾರರು ಸಂಕಷ್ಟದಲ್ಲಿದ್ದು ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಪ್ರತ್ಯೇಕ ಪ್ಯಾಕೇಜ್ ಘೋಷಿಸಲಾಗುವುದು. ನೇಕಾರರ ಸಂಕಷ್ಟಕ್ಕೆ ನೆರವಾಗುವ ನಿಟ್ಟಿನಲ್ಲಿ ನೇಕಾರ ಸಮ್ಮಾನ್ ಯೋಜನೆಯಡಿ 54 ಸಾವಿರ ನೇಕಾರರಿಗೆ ವರ್ಷಕ್ಕೆ 2 ಸಾವಿರ ರೂ ನೆರವು ನೀಡಲಾಗುವುದು ಎಂದರು.
ರಾಜ್ಯದಲ್ಲಿ 15.80 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರಿದ್ದಾರೆ. ಈ ಪೈಕಿ 11.80 ಲಕ್ಷ ಕಾರ್ಮಿಕರಿಗೆ 2 ಸಾವಿರ ರೂ ಪರಿಹಾರ ನೀಡಲಾಗಿದೆ. ಇದೀಗ ಹೆಚ್ಚುವರಿಯಾಗಿ 3 ಸಾವಿರ ರೂ ಪರಿಹಾರ ನೀಡಲಾಗುವುದು ಎಂದರು.
ಕೋವಿಡ್19 ಪರಿಹಾರ ಘೋಷಣೆಗಳು ಇಂತಿವೆ:
- ಕಳೆದ ಒಂದೂವರೆ ತಿಂಗಳಿನಿಂದ ಲಾಕ್ ಡೌನ್ ನ ಪರಿಣಾಮವಾಗಿ ವಿವಿಧ ನಿರ್ಬಂಧಗಳನ್ನು ಹೇರಿರುವುದರಿಂದ ಎಲ್ಲ ವರ್ಗದ ಜನರು ಆರ್ಥಿಕವಾಗಿ ಸಂಕಷ್ಟವನ್ನು ಅನುಭವಿಸುತ್ತಾರೆ.
- ಲಾಕ್ ಡೌನ್’ನಿಂದಾಗಿ ಎಲ್ಲ ದೇವಾಲಯಗಳು ಮುಚ್ಚಿರುವುದರಿಂದ ಹಬ್ಬ ಮದುವೆ, ಸಭೆ-ಸಮಾರಂಭಗಳು ಹಾಗೂ ಮತ್ತಿತರ ಯಾವುದೇ ಕಾರ್ಯಕ್ರಮಗಳು ನಡೆಯದಿರುವುದರಿಂದ ಹೂವುಗಳ ಬೇಡಿಕೆ ಇಲ್ಲದೇ ಹೂವು ಬೆಳೆಗಾರರು ತಾವು ಬೆಳೆದಿರುವ ಎಲ್ಲ ಹೂವುಗಳನ್ನು ತಮ್ಮ ಹೊಲದಲ್ಲೇ ನಾಶ ಮಾಡುವ ಪರಿಸ್ಥಿತಿ ಉದ್ಭವಿಸಿದೆ. ಒಟ್ಟಾರೆ 11687 ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆದಿರುವ ಹೂವುಗಳು ಮಾರಾಟವಾಗದೆ ರೈತರಿಗೆ ನಷ್ಟವಾಗಿದೆ. ಇದರಿಂದ ಎಲ್ಲ ರೀತಿಯ ಹೂವುಗಳು ಬೆಳೆದಿರುವ ರೈತರಿಗೆ ನೆರವಾಗಲು ನಮ್ಮ ಸರ್ಕಾರವು ಹೆಕ್ಟೇರ್ ಗೆ ಗರಿಷ್ಠ 25,000/- ರೂ.ಗಳಂತೆ ಪರಿಹಾರವನ್ನು ಘೋಷಿಸಿದೆ.
- ಈ ವರ್ಷ ರಾಜ್ಯದಲ್ಲಿ ತರಕಾರಿ ಮತ್ತು ಹಣ್ಣುಗಳು ಇಳುವರಿಯು ಉತ್ತಮವಾಗಿದೆ. ಆದರೆ ಕೋವಿಡ್ 19 ರಿಂದ ಆಗಿರುವ ರಾಷ್ಟ್ರದಾದ್ಯಂತ ಲಾಕ್ ಡೌನ್ ನಿಂದಾಗಿ ರೈತರು ತಮ್ಮ ಬೆಳೆಗಳಿಗೆ ಸೂಕ್ತ ದರಗಳನ್ನು ಪಡೆಯಲು ಸಾಧ್ಯವಾಗಿರುವುದಿಲ್ಲ. ನಷ್ಟಕ್ಕೆ ಒಳಗಾಗಿರುವ ತರಕಾರಿ ಹಾಗೂ ಹಣ್ಣು ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡುವ ಬಗ್ಗೆ ಪ್ಯಾಕೇಜ್ ಅನ್ನು ಘೋಷಣೆ ಮಾಡಲಾಗುವುದು.
- ಕೋವಿಡ್ 19 ರಿಂದಾಗಿ ರೈತರಷ್ಟೇ ಅಲ್ಲದೆ ಅಲ್ಲದೆ ಪಟ್ಟಣದ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಗಸರ ಹಾಗೂ ಕ್ಷೌರಿಕರ ವೃತ್ತಿಯಲ್ಲಿ ತೊಡಗಿರುವವರು ಒಂದೂವರೆ ತಿಂಗಳಿಗೆ ಮೇಲ್ಪಟ್ಟು ತಮ್ಮ ಕಸುಬನ್ನು ನಡೆಸಲಾಗಿದೇ ತಮ್ಮ ದೈನಂದಿನ ಆದಾಯವನ್ನು ಕಳೆದುಕೊಂಡಿರುತ್ತಾರೆ. ಇವರಿಗೆ ನೆರವಾಗಲು ನಮ್ಮ ರಾಜ್ಯದಲ್ಲಿರುವ ಅಂದಾಜು 60,000 ಅಗಸರ ವೃತ್ತಿಯಲ್ಲಿ ಇರುವ ಹಾಗೂ 230000 ಕ್ಷೌರಿಕ ವೃತ್ತಿಯಲ್ಲಿ ಇರುವವರಿಗೆ 5000 ರೂ.ಗಳನ್ನು ಒಂದು ಬಾರಿ ಪರಿಹಾರವಾಗಿ ನೀಡಲಾಗುವುದು.
- ಹಾಗೆಯೇ ಆಟೋರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರು ತಮ್ಮ ದೈನಂದಿನ ಉದ್ಯೋಗವನ್ನು ನಡೆಸಲಾಗಿದೇ ತಮ್ಮ ಆದಾಯವನ್ನು ಕಳೆದುಕೊಂಡಿರುತ್ತಾರೆ. ನಮ್ಮ ರಾಜ್ಯದಲ್ಲಿ ಇರುವ ಇಂತಹ 7,75,000 ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ 5000 ರೂ.ಗಳನ್ನು ನೀಡಲಾಗಿದೆ.
- ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳನ್ನು ನಡೆಸುವ ಉದ್ದಿಮೆದಾರರು ತಮ್ಮ ಉದ್ದಿಮೆಗಳನ್ನು ತೆರೆಯಲಾಗಿದೆ ಹಾಗೂ ತಮ್ಮ ಉತ್ಪನ್ನಗಳನ್ನು ಸಾಗಿಸಿ ಮಾರಾಟ ಮಾಡಲಾಗದೆ ನಷ್ಟವನ್ನು ಅನುಭವಿಸಿದ್ದಾರೆ. ಹಾಗೆಯೇ ಮುಂದಿನ ದಿನಗಳಲ್ಲಿ ವಹಿವಾಟು ಚೇತರಿಕೆಯಾಗಲು ಕೆಲವು ತಿಂಗಳ ಸಮಯ ಬೇಕಾಗಿರುವುದರಿಂದ ಇವರಿಗೆ ಸರಕಾರ ನೆರವು ನೀಡುವುದು ಅನಿವಾರ್ಯವಾಗಿದೆ. ಆದ್ದರಿಂದ ಅತಿಸಣ್ಣ, ಸಣ್ಣ ಹಾಗೂ ಉದ್ಯಮ ಉದ್ದಿಮೆಗಳ ವಿದ್ಯುತ್ ಬಿಲ್ಲಿನ ಫಿಕ್ಸ್‌್ಡ ಚಾರ್ಜನ್ನು ಎರಡು ತಿಂಗಳ ಅವಧಿಗೆ ಪೂರ್ತಿಯಾಗಿ ಮನ್ನಾ ಮಾಡಲಾಗುವುದು.
- ಹಾಗೆಯೇ ಬೃಹತ್ ಕೈಗಾರಿಕೆಗಳಿಗೆ ಅವರು ವಿದ್ಯುತ್ ಇಲ್ಲಿನ ಫಿಕ್ಸ್‌್ಡ ಚಾರ್ಜ್‌ನ ಪಾವತಿಯನ್ನು ಎರಡು ತಿಂಗಳ ಅವಧಿಗೆ ಯಾವುದೇ ಬಡ್ಡಿ ಅಥವಾ ದಂಡ ಇಲ್ಲದೇ ಬಡ್ಡಿ ರಹಿತವಾಗಿ ಮುಂದೂಡಲಾಗುವುದು.
- ಎಲ್ಲ ಪ್ರವರ್ಗದ ಗ್ರಾಹಕರುಗಳಿಗೆ ವಿದ್ಯುಚ್ಚಕ್ತಿ ಮೊತ್ತವನ್ನು ಪಾವತಿಸಲು ಈ ಕೆಳಕಂಡ ಸವಲತ್ತು/ಪರಿಹಾರಗಳನ್ನು ಒದಗಿಸುವುದು.
- ನಿಗದಿತ ಸಮಯದೊಳಗೆ ವಿದ್ಯುತ್ ಬಿಲ್ಲಿನ ಮೊತ್ತವನ್ನು ಪಾವತಿಸುವ ಗ್ರಾಹಕರಿಗೆ ಪ್ರೋತ್ಸಾಹ ರಿಯಾಯಿತಿಯನ್ನು ನೀಡುವುದು.
- ವಿಳಂಬ ಪಾವತಿಗಾಗಿ ವಿದ್ಯುತ್ ಬಿಲ್ಲಿನ ಮೊತ್ತದ ಮೇಲೆ ವಿಧಿಸುವ ಬಡ್ಡಿಯನ್ನು ಕಡಿಮೆಗೊಳಿಸಲಾಗುವುದು.
- ವಿದ್ಯುತ್ ಬಿಲ್ಲಿನ ಮೊತ್ತವನ್ನು ಪಾವತಿಸುವ ಗ್ರಾಹಕರಿಗೆ ಪ್ರೋತ್ಸಾಹಧನ ನೀಡಲಾಗುವುದು.
- ಕಂದಾಯ ಬಾಕಿ ಮೊತ್ತವನ್ನು ಕಂತುಗಳಲ್ಲಿ/ಭಾಗವಾಗಿ ಪಾವತಿಸಲು ಅವಕಾಶ ಕಲ್ಪಿಸಲಾಗುವುದು.
- ಕಂದಾಯ ಬಾಕಿ ಮೊತ್ತವನ್ನು ಪಾವತಿಸದಿರುವ ಗ್ರಾಹಕರಿಗೆ 30.06.2020 ರವರೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸದೇ ಇರುವುದು.
- ಈಗಾಗಲೇ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದು ನೇಕಾರರಿಗೆ ಈ ಲಾಕ್ ಡೌನ್ ನಿಂದಾಗಿ ಮತ್ತಷ್ಟು ನಷ್ಟ ಉಂಟಾಗಿದೆ ನನ್ನ ಸರ್ಕಾರವು
- ಈಗಾಗಲೇ ನೇಕಾರರಿಗೆ ನೆರವಾಗಲು 109 ಕೋಟಿ ರೂ.ಗಳ ವೆಚ್ಚದಲ್ಲಿ ನೇಕಾರರ ಸಾಲ ಮನ್ನಾ ಯೋಜನೆಯನ್ನು ಘೋಷಿಸಿದೆ. ಈ ಯೋಜನೆಗೆ ಈಗಾಗಲೇ ಹಿಂದಿನ ವರ್ಷ 29 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಉಳಿದಿರುವ 80 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಿ ನೇಕಾರರಿಗೆ ಹೊಸ ಸಾಲಗಳು ದೊರಕಿಸಿಕೊಡಲು ನಾನು ಮಾಡಿಕೊಡಲಾಗುತ್ತದೆ. ಮುಂದುವರೆದು ಜನವರಿ 01 2019 ರಿಂದ ಮಾರ್ಚ್ 31, 2019 ರ ಅವಧಿಯೊಳಗೆ 1 ಲಕ್ಷ ರೂ. ಒಳಗಿನ ತಮ್ಮ ಸಾಲವನ್ನು ಮರುಪಾವತಿಸಿರುವ ನೇಕಾರರಿಗೂ ಸಹ ಅವರು ಪಾವತಿಸಿರುವ ಮೊತ್ತವನ್ನು ಮರುಪಾವತಿ ಮಾಡುವ ಮೂಲಕ ಯೋಜನೆಯ ಸೌಲಭ್ಯವನ್ನು ಒದಗಿಸಲಾಗುವುದು.
- ನೇಕಾರರ ಸಮ್ಮಾನ್ ಯೋಜನೆ ಎಂಬ ಹೊಸ ಯೋಜನೆಯನ್ನು ಘೋಷಿಸಲು ಇಚ್ಛಿಸುತ್ತೇನೆ. ಈ ಯೋಜನೆಯಡಿಯಲ್ಲಿ ನಮ್ಮ ರಾಜ್ಯದಲ್ಲಿರುವ ಅಂದಾಜು 54,000 ಕೈಮಗ್ಗ ನೇಕಾರರಿಗೆ ಪ್ರತಿ ವರ್ಷ 2000 ರೂ.ಗಳಂತೆ ಅವರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು.
ರಾಜ್ಯದಲ್ಲಿರುವ 15.80 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರ ಪೈಕಿ ಈಗಾಗಲೇ 11.80 ಲಕ್ಷ ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ 2000 ರೂ.ಗಳನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗಿದೆ. - ಇನ್ನುಳಿದ 4 ಲಕ್ಷ ಕಟ್ಟಡ ಕಾರ್ಮಿಕರಿಗೆ ಅವರವರ ಬ್ಯಾಂಕ್ ಖಾತೆಯ ವಿವರಗಳು ದೊರೆತ ನಂತರ 2,000 ರೂ.ಗಳನ್ನು ವರ್ಗಾಯಿಸಲು ಕ್ರಮ ಕ್ರಮವಹಿಸಲಾಗುವುದು. ಮುಂದುವರೆದು ಈ ಎಲ್ಲ ಕಟ್ಟಡ ಕಾರ್ಮಿಕರಿಗೆ ಈಗಾಗಲೇ ನೀಡಿರುವ 2,000 ರೂ.ಗಳ ಜೊತೆಗೆ ಹೆಚ್ಚುವರಿಯಾಗಿ 3,000 ರೂ.ಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಈ ಹಣವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು.
- ಎಲ್ಲ ಪರಿಹಾರ ಸೌಲಭ್ಯಗಳನ್ನು ಅಂದಾಜು ರೂ. 1610 ಕೋಟಿಗಳ ವೆಚ್ಚದಲ್ಲಿ ಮಾಡಲಾಗುವುದು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
Get in Touch With Us info@kalpa.news Whatsapp: 9481252093
Discussion about this post