ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ದಾವಣಗೆರೆ ವಿಶ್ವವಿದ್ಯಾನಿಲಯದ ಮೂವರು ಪ್ರಾಧ್ಯಾಪಕರುಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹ, ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾದ ಶ್ರೇಷ್ಠ ಸಂಶೋಧನಾ ಪ್ರಕಟಣೆಗಳಿಗೆ ಪ್ರಶಸ್ತಿಯು ಲಭಿಸಿದೆ.
Also Read: ಮೇ 2ರಂದು ರಂಜಾನ್ ಸಾರ್ವತ್ರಿಕ ರಜೆ ಘೋಷಣೆ
ದಾವಣಗೆರೆ ವಿಶ್ವವಿದ್ಯಾನಿಲಯದ ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಮತ್ತು ಕುಲಸಚಿವರಾದ ಪ್ರೊ. ಗಾಯತ್ರಿ ದೇವರಾಜ, ಗಣಿತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರುಗಳಾದ ಡಾ. ಪ್ರಕಾಶ ಡಿ.ಜಿ. ಮತ್ತು ಡಾ. ಪ್ರಸನ್ನ ಕುಮಾರ್ ಬಿ.ಸಿ. ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.


ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಯಾದ ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸ್ಟಡೀಸ್’ನಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಶಿಕ್ಷಣ ಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್ ಇವರು ಪ್ರಶಸ್ತಿಗಳನ್ನು ಪ್ರಧಾನ ಮಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post