Read - < 1 minute
ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕೋವಿಡ್19 ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಾಳೆ ರಾತ್ರಿ 9 ಗಂಟೆಯಿಂದ ಮೇ 12ರವರೆಗೂ ರಾಜ್ಯದಾದ್ಯಂತ ಜನತಾ ಕರ್ಫ್ಯೂ ಹೇರಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನೂತನ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.
ನೂತನ ಮಾರ್ಗಸೂಚಿಯ ಪ್ರಮುಖಾಂಶಗಳು:
- ಜನತಾ ಕರ್ಫ್ಯೂ ಎಪ್ರಿಲ್ 27ರ ರಾತ್ರಿ 9 ಗಂಟೆಯಿಂದ ಮೇ 12ರ ಸಂಜೆ 6 ಗಂಟೆಯವರೆಗೂ ರಾಜ್ಯದಾದ್ಯಂತ ಜಾರಿಯಲ್ಲಿರುತ್ತದೆ.
- ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೂ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ
- ನಿಗದಿತ ಅವಧಿಯನ್ನು ಹೊರತುಪಡಿಸಿ ಬೇರೆ ಸಮಯದಲ್ಲಿ ಸಾರ್ವಜನಿಕರು ಹೊರಗಡೆ ಓಡಾಡುವಂತಿಲ್ಲ
- 10 ಗಂಟೆ ನಂತರ ಯಾವುದೇ ರೀತಿಯ ವ್ಯವಹಾರಗಳಿಗೆ ಅವಕಾಶವಿರುವುದಿಲ್ಲ
- ಅಂತರ್ ಜಿಲ್ಲಾ ಹಾಗೂ ಅಂತರ್ ರಾಜ್ಯ ಸಂಚಾರಕ್ಕೆ ತಡೆ
- ತುರ್ತು ಸೇವೆಗೆ ಮಾತ್ರ ಅವಕಾಶ
- ಗಾರ್ಮೆಂಟ್ಸ್’ಗಳು ಕಾರ್ಯ ನಿರ್ವಹಿಸುವಂತಿಲ್ಲ
- ಕಟ್ಟಡ ನಿರ್ಮಾಣ, ಕೃಷಿ ಕ್ಷೇತ್ರಕ್ಕೆ ವಿನಾಯಿತಿ
- ಸರ್ಕಾರಿ, ಖಾಸಗಿ, ಟ್ಯಾಕ್ಸಿ, ಕ್ಯಾಬ್, ಆಟೋ, ಮೆಟ್ರೋ ಸಂಚಾರ ಇರುವುದಿಲ್ಲ
- ಆಸ್ಪತ್ರೆ, ಲ್ಯಾಬ್, ಮೆಡಿಕಲ್ ಶಾಪ್ ಸೇರಿದಂತೆ ತುರ್ತು ಸೇವೆಗಳು ಲಭ್ಯ
- ಕೆಎಸ್’ಆರ್’ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುವುದಿಲ್ಲ
- ಹೊಟೇಲ್’ಗಳಲ್ಲಿ ಪಾರ್ಸಲ್’ಗೆ ಮಾತ್ರ ಅವಕಾಶ, ಸರ್ವಿಸ್ ಇರುವುದಿಲ್ಲ
- ಬಾರ್’ಗಳಿಂದ ಮದ್ಯ ಪಾರ್ಸಲ್ ಕೊಂಡೊಯ್ಯಲು ಅವಕಾಶ
- ಪರೀಕ್ಷೆಗಳು ಎಂದಿನಂತೆ ನಡೆಯಲಿದ್ದು, ವಿದ್ಯಾರ್ಥಿಗಳು ಪ್ರವೇಶಪತ್ರವನ್ನು ಪೊಲೀಸರಿಗೆ ತೋರಿಸಬೇಕು
- ಆಟದ ಮೈದಾನ, ಪಾರ್ಕ್, ಸ್ವಿಮ್ಮಿಂಗ್ ಪೂಲ್, ಯೋಗ, ಮನೋರಂಜನಾ ಕೇಂದ್ರಗಳು ಬಂದ್
- ದೇವಾಲಯ, ಮಸೀದಿ ಹಾಗೂ ಚರ್ಚ್‌ಗಳಿಗೆ ಸಾರ್ವಜನಿಕರ ಪ್ರವೇಶವಿಲ್ಲ. ಆದರೆ, ಅರ್ಚಕರು ದೈನಂದಿನ ಪೂಜೆ ನಡೆಸಬಹುದು
- ಬ್ಯಾಂಕ್’ಗಳು ಎಂದಿನಂತೆ ಕಾರ್ಯ ನಿರ್ವಹಿಸಬಹುದು
- ಸರಕು ಸಾಗಾಣಿಕಾ ವಾಹನಗಳು ಎಂದಿನಂತೆ ಸಂಚರಿಸಬಹುದು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post