ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ದಕ್ಷಿಣ ಕನ್ನಡ: ಕೊರೋನಾ ತಡೆಯುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ತೌಫಿಕ್ ಆಗ್ರಹಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಕೋವಿಡ್19 ನಂತಹ ಮಹಾಮಾರಿ ಇರುವ ಈ ಸಂದರ್ಭದಲ್ಲಿ ಬಡವರ ಕಷ್ಟಕ್ಕೆ ರಾಜ್ಯ ಬಿಜೆಪಿ ಸರ್ಕಾರ ಸ್ಪಂದಿಸುತ್ತಿಲ್ಲ. ಇಂತಹ ಸಂದರ್ಭದಲ್ಲಿ ಕಾನೂನು ಕಟ್ಟಳೆಗಿಂತಲೂ ಮಾನವೀಯತೆ ಮುಖ್ಯವಾಗುತ್ತದೆ. ಜನರ ಜೀವಕ್ಕಿಂತ ದೇಶದ ಆರ್ಥಿಕತೆ ಮುಖ್ಯ ಎಂದು ಮಾಸ್ಕ್, ಟೆಸ್ಟಿಂಗ್, ಕೋವಿಡ್’ನ ಸ್ಕ್ಯಾಂನಲ್ಲಿ ಮೈಮರೆತ ರಾಜ್ಯದ ಬಿಜೆಪಿ ಸರ್ಕಾರವು ಕೋವಿಡ್19 ನಿಯಂತ್ರಿಸುವಲ್ಲಿ ಪೂರ್ತಿಯಾಗಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
Get In Touch With Us info@kalpa.news Whatsapp: 9481252093
















