ತುಮಕೂರು: ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಸ್ ಪ್ರಯಾಣದರ ಏರಿಕೆ ಮಾಡುವುದು ಅನಿವಾರ್ಯ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದು, ರಾಜ್ಯದ ಜನರಿಗೆ ಬಸ್ ಪ್ರಯಾಣ ಮತ್ತಷ್ಟು ತ್ರಾಸವಾಗಲಿದೆ.
ಈ ಕುರಿತಂತೆ ಇಂದು ಮಾತನಾಡಿರುವ ಅವರು, ಡೀಸೆಲ್ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಪ್ರಯಾಣ ದರ ಏರಿಕೆ ಮಾಡದೇ ಇದ್ದಲ್ಲಿ, ಸಂಸ್ಥೆ ನಷ್ಟಕ್ಕೆ ಗುರಿಯಾಗಲಿದೆ. ಹೀಗಾಗಿ, ದರ ಏರಿಕೆ ಅನಿವಾರ್ಯ ಎಂದಿದ್ದಾರೆ.
ಡೀಸೆಲ್ ದರ ಏರಿಕೆ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ಪ್ರಯಾಣ ದರ ಏರಿಕೆಗೆ ಸಂಬಂಧಿಸಿದಂತೆ ಸಾರಿಗೆ ಸಚಿವರು ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದು, ಪರಿಶೀಲಿಸಲಾಗುತ್ತಿದೆ ಎಂದರು.
ಇದೇ ವೇಳೆ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಅನ್ನು ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಸ್ಪಷ್ಟಪಡಿಸಿದರು.
Discussion about this post