ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಪೊಲೀಸರಿಗೆ #Police ಸರ್ಕಾರ ಸಂಫೂರ್ಣ ಫ್ರೀ ಹ್ಯಾಂಡ್ ಕೊಟ್ಟಿದ್ದು, ಅದರು ದುರುಪಯೋಗ ಆಗಬಾರದು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ #Siddharamaiah ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಅವರು ಮಹತ್ವದ ಘೋಷಣೆಗಳನ್ನು ಮಾಡಿ, ಮಾತನಾಡಿದ್ದಾರೆ.
ಪೊಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಫ್ರೀ ಹ್ಯಾಂಡ್ ಕೊಟ್ಟಿದೆ. ಪೊಲೀಸರ ಕೆಲಸದಲ್ಲಿ ಮೂಗು ತೂರಿಸಬಾರದು ಎನ್ನುವುದು ನನ್ನ ಬದ್ಧತೆ. ಆದರೆ ನಾವು ಫ್ರೀ ಹ್ಯಾಂಡ್ #FreeHand ಕೊಟ್ಟಿದ್ದು ದುರುಪಯೋಗ ಆಗಬಾರದು. ಅದು ಜನರಿಗೆ ಅನುಕೂಲ ಆಗುವಂತಿರಬೇಕು ಎಂದು ಎಚ್ಚರಿಕೆ ನೀಡಿದರು.
ಸಿಇಎನ್ ಠಾಣಾಧಿಕಾರಿಗಳ ಹುದ್ದೆಯನ್ನು ಎಸಿಪಿ ಮತ್ತು ಡಿಸಿಪಿ ಮಟ್ಟಕ್ಕೆ ಉನ್ನತೀಕರಿಸಲಾಗುವುದು. ಬೆಂಗಳೂರು ನಗರದಲ್ಲಿ 8 ಅಡಿಷನಲ್ ಡಿಸಿಪಿ ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಜಿಸಲಾಗುವುದು ಎಂದರು.
ಹೀಗಿದೆ ಮಹತ್ವದ ಘೋಷಣೆಗಳು:
- ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ
- ವೈದ್ಯಕೀಯ ವೆಚ್ಚ 1 ಸಾವಿರದಿಂದ 1,500 ರೂ.ಗೆ ಹೆಚ್ಚಳ
- ರಾಜ್ಯದಲ್ಲಿ ಭವ್ಯವಾದ ಸುಸಜ್ಜಿತ ಸುವರ್ಣ ಪೊಲೀಸ್ ಭವನ ನಿರ್ಮಾಣ
- ಭವನ ನಿರ್ಮಾಣಕ್ಕಾಗಿ ಬಜೆಟ್’ನಲ್ಲಿ ಹಣ ನಿಗದಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post