ಕಲ್ಪ ಮೀಡಿಯಾ ಹೌಸ್ | ಮೈಸೂರು |
ಪದವಿಪೂರ್ವ ಶಿಕ್ಷಣ ಇಲಾಖೆ ತುಮಕೂರಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಭಾವಗೀತೆ ಸ್ಪರ್ಧೆಯಲ್ಲಿ ನಗರದ ನಾರಾಯಣ ಶಾಸ್ತ್ರಿ ರಸ್ತೆಯ ಸದ್ವಿದ್ಯಾ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಎ.ಆರ್. ಅಪ್ರಮೇಯ ರಘುರಾಂ ಪ್ರಥಮ ಬಹುಮಾನ ಗಳಿಸಿದ್ದಾರೆ.
ರಸಪ್ರಶ್ನೆ ವಿಭಾಗದಲ್ಲಿ ಇದೇ ಕಾಲೇಜಿನ ಕಾರ್ತಿಕ್ ಮತ್ತು ಜೀವನ್ ತೃತೀಯ ಬಹುಮಾನ ಪಡೆದಿದ್ದಾರೆ.
ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ಜ್ಞಾನೋದಯ ಪದವಿ ಪೂರ್ವ ಕಾಲೇಜಿನ ಪ್ರದ್ಯುಮ್ನ ದ್ವಿತೀಯ ಬಹುಮಾನ, ಏಕಪಾತ್ರ ಅಭಿನಯ ಸ್ಪರ್ಧೆಯಲ್ಲಿ ಹುಣಸೂರು ಆರಾಧನಾ ಪದವಿಪೂರ್ವ ಕಾಲೇಜಿನ ಭೂಮಿಕಾಗೆ ತೃತೀಯ ಬಹುಮಾನ ದೊರೆತಿದೆ.
ರಾಜ್ಯಮಟ್ಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿ ಬಹುಮಾನಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ವಿಭಾಗದ) ಉಪ ನಿರ್ದೇಶಕಿ ಎಂ.ಪಿ. ನಾಗಮ್ಮ ಅಭಿನಂದಿಸಿದ್ದಾರೆ.
ಪದವಿಪೂರ್ವ ಶಿಕ್ಷಣ ಇಲಾಖೆ ತುಮಕೂರಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪಾರಮ್ಯ ಮೆರೆದು ಮೈಸೂರು ಜಿಲ್ಲೆಗೆ ಬಹುಮಾನಗಳನ್ನು ದೊರಕಿಸಿಕೊಟ್ಟ ಎ.ಆರ್. ಅಪ್ರಮೇಯ (ಭಾವಗೀತೆ- ಪ್ರಥಮ), ಕಾರ್ತಿಕ್ ಮತ್ತು ಜೀವನ್ (ಕ್ವಿಜ್ ತೃತೀಯ) ಪ್ರದ್ಯುಮ್ನ (ಆಂಗ್ಲ ಚರ್ಚಾ ಸ್ಪರ್ಧೆ ದ್ವಿತೀಯ) ಮತ್ತು ಭೂಮಿಕಾ (ಏಕಪಾತ್ರ ಅಭಿನಯ-ತೃತೀಯ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















