ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಈಗಾಗಲೇ ನಿಗದಿಯಾದಂತೆ ಇದೇ ತಿಂಗಳ 30 ಹಾಗೂ 31ರಂದು ಸಿಇಟಿ ಪರೀಕ್ಷೆಗಳು ನಡೆಯಲಿವೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಸ್ವಷ್ಪಪಡಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಕೆಲವು ದಿನಗಳ ಹಿಂದೆ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸುವ ಕುರಿತು ಯುಜಿಸಿ ಮಾರ್ಗಸೂಚಿಯನ್ನು ಹೊರತಂದಿತ್ತು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಒಳಿತನ್ನು ಗಮನದಲ್ಲಿರಿಸಿಕೊಳ್ಳುವುದರ ಜೊತೆಗೆ, ಉನ್ನತ ಶಿಕ್ಷಣ ಇಲಾಖೆಯು ಈ ಮಾರ್ಗಸೂಚಿಗಳನ್ನು ಗಣನೆಗೆ ತೆಗೆದುಕೊಂಡು ಒಂದು ತೀರ್ಮಾನಕ್ಕೆ ಬಂದಿದೆ ಎಂದಿದ್ದಾರೆ.
ವಿದ್ಯಾರ್ಥಿಗಳಿಗೆ ತಮ್ಮ ಅಂಕಗಳನ್ನು ಉತ್ತಮಗೊಳಿಸಿಕೊಳ್ಳಬೇಕೆಂಬ ಇಚ್ಛೆ ಇದ್ದಲ್ಲಿ, ಅವರುಗಳಿಗೆ ಮುಂದಿನ ಸೆಮಿಸ್ಟರ್’ನಲ್ಲಿ ಪ್ರತ್ಯೇಕ ಪರೀಕ್ಷೆಗಳನ್ನು ನಡೆಸಲಾಗುವುದು. ವಿದ್ಯಾರ್ಥಿಗಳಿಗೆ ಬ್ಯಾಕ್ ಲಾಗ್ ಇದ್ದರೆ ಆ ವಿಷಯಗಳನ್ನು ಕ್ಯಾರಿ ಫಾರ್ವರ್ಡ್ ಮಾಡಲಾಗುವುದು ಮತ್ತು ಮುಂದಿನ ಸೆಮಿಸ್ಟರ್’ನಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು ಎಂದಿದ್ದಾರೆ.
ಬ್ಯಾಕ್ ಲಾಗ್’ಗಳ ಸಹಿತ ಅಂತಿಮ ಸೆಮಿಸ್ಟರ್/ವರ್ಷದ ವಿದ್ಯಾರ್ಥಿಗಳಿಗೆ ಇದೇ ಸೆಪ್ಟೆಂಬರ್ ಅಂತ್ಯದ ಒಳಗಾಗಿ ಪರೀಕ್ಷೆಗಳನ್ನು ನಡೆಸಲಾಗುವುದು. ಸಂಬಂಧಪಟ್ಟ ವಿಶ್ವವಿದ್ಯಾಲಯಗಳು ಪರೀಕ್ಷಾ ವೇಳಾಪಟ್ಟಿಯನ್ನು ಮತ್ತು ಇತರ ಮಾಹಿತಿಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಿವೆ. ಯಾವುದೇ ಅನುಮಾನಗಳಿದ್ದಲ್ಲಿ 080-22341394 ಅನ್ನು ಸಂಪರ್ಕಿಸಬಹುದು ಎಂದಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post