ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮಂತ್ರಾಲಯ: ರಾಜ್ಯ ಸೇರಿದಂತೆ ದೇಶವನ್ನು ಕಾಡುತ್ತಿರುವ ಕೊರೋನಾ ವೈರಸ್ ಮಹಾಮಾರಿಯಿಂದ ರಾಷ್ಟ್ರ ಮುಕ್ತವಾಗಲಿ ಎಂದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರಾರ್ಥಿಸಿದ್ದಾರೆ.
ಕುಟುಂಬ ಸಹಿತ ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ಮೂಲ ಬೃಂದಾವನ ದರ್ಶನ ಪಡೆದು, ವಿಶೇಷ ಪ್ರಾರ್ಥನೆ ಸಲ್ಲಿಸಿದ ಅವರು, ದೇಶ ಕೊರೋನಾದಿಂದ ಮುಕ್ತವಾಗಿ ನಾಡಿನ ಜನತೆ ಸುರಕ್ಷಿತವಾಗಿಲಿ ಎಂದು ಪ್ರಾರ್ಥಿಸಿದರು.
ನಂತರ ಪೀಠಾಧೀಶರಾದ ಶ್ರೀ ಸುಬುಧೇಂದ್ರ ತೀರ್ಥರನ್ನು ಭೇಟಿಯಾಗಿ ಪ್ರಸಕ್ತ ವಿದ್ಯಮಾನಗಳ ಕುರಿತಾಗಿ ಚರ್ಚೆ ನಡೆಸಿ, ಆರ್ಶೀವಾದ ಪಡೆದರು.
ಸಚಿವ ಈಶ್ವರಪ್ಪ, ಪತ್ನಿ ಜಯಲಕ್ಷ್ಮೀ, ಪುತ್ರ ಕೆ.ಇ. ಕಾಂತೇಶ್ ಸಹಿತ ಬಳ್ಳಾರಿಯಲ್ಲಿರುವ ತಮ್ಮ ಮನೆ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















