ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023ರ ಏಪ್ರಿಲ್’ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ #Mysore ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ #PMNarendraModi ಅವರ ಆತಿಥ್ಯದ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಪ್ರಧಾನಿ, ರಾಷ್ಟ್ರಪತಿ ಮೊದಲಾದ ಗಣ್ಯರು ಆಗಮಿಸಿದಾಗ ಆತಿಥ್ಯ ನೀಡುವುದು ರಾಜ್ಯ ಸರ್ಕಾರದ ಸಂಪ್ರದಾಯವಾಗುತ್ತದೆ. ಆದರೆ ಕಳೆದ ವರ್ಷ ಏಪ್ರಿಲ್ ನಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿತ್ತು. ಮಾದರಿ ನೀತಿ ಸಂಹಿತೆ #ModelCodeOfConduct ಜಾರಿಯಲ್ಲಿದ್ದ ಕಾರಣ ರಾಜ್ಯ ಸರ್ಕಾರ ಈ ಕಾರ್ಯಕ್ರಮದ ಆಯೋಜನೆಯಲ್ಲಿ ಯಾವುದೇ ಪಾತ್ರ ವಹಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಉಂಟಾಗಿರುವ ಗೊಂದಲ ನಿವಾರಿಸಲು ರಾಜ್ಯ ಸರ್ಕಾರವೇ ಮೈಸೂರಿನ ರಾಡಿಸನ್ ಬ್ಲೂ ಹೊಟೆಲ್ ಬಿಲ್ ಬಾಕಿ ಪಾವತಿಸಲು ನಿರ್ಧರಿಸಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರವೇ ಆತಿಥ್ಯದ 80 ಲಕ್ಷ ರೂ. ಹಣ ಪಾವತಿಸುವ ಮೂಲಕ ವಿವಾದಕ್ಕೆ ತೆರೆ ಎಳೆಯಲಿದೆ ಎಂದು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















Discussion about this post