ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಮೊದಲ ಸ್ಥಾನ ಪಡೆದಿದ್ದು, ವಿಜಯಪುರ ಕೊನೆಯ ಸ್ಥಾನ ಪಡೆದುಕೊಂಡಿದೆ.
ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಬೆಂಗಳೂರಿನಲ್ಲಿಂದು ಫಲಿತಾಂಶ ಪ್ರಕಟಿಸಿದರು.
ಉಡುಪಿ ಪ್ರಥಮ ಸ್ಥಾನದಲ್ಲಿದ್ದು, ದಕ್ಷಿಣ ಕನ್ನಡ ದ್ವಿತೀಯ ಮತ್ತು ಕೊಡಗು ತೃತೀಯ ಸ್ಥಾನದಲ್ಲಿವೆ. ಚಿತ್ರದುರ್ಗ, ರಾಯಚೂರು ಮತ್ತು ವಿಜಯಪುರಗಳು ಕೊನೆಯ ಸ್ಥಾನದಲ್ಲಿವೆ. ಬೆಂಗಳೂರು ನಗರ ಮತ್ತು ಬೆಂಗಳೂರು ಉತ್ತರ 6 ಮತ್ತು ಏಳನೆಯ ಸ್ಥಾನದಲ್ಲಿವೆ ಎಂದು ಅವರು ಮಾಹಿತಿ ನೀಡಿದರು.
ಈ ವರ್ಷ ಒಟ್ಟಾರೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ಪ್ರಮಾಣ ಶೇಕಡಾ 61.80 ಆಗಿದೆ. ಕಳೆದ ವರ್ಷಕ್ಕಿಂತ ಶೇಕಡಾ 0.7ರಷ್ಟು ಫಲಿತಾಂಶ ಹೆಚ್ಚಾಗಿದ್ದು ಕಳೆದ ವರ್ಷ ಶೇಕಡಾ 61.73 ಫಲಿತಾಂಶ ಬಂದಿತ್ತು.ಶೇಕಡಾ 55.29ರಷ್ಟು ಫಲಿತಾಂಶ ಗಳಿಸಿ ಹುಡುಗಿಯರೇ ಮೇಲಗೈ ಸಾಧಿಸಿದ್ದಾರೆ. ರಾಜ್ಯದಲ್ಲಿ ತೇರ್ಗಡೆ ಹೊಂದಿದ ಒಟ್ಟಾರೆ ಹುಡುಗರ ಸಂಖ್ಯೆ ಶೇಕಡಾ 54.77 ಆಗಿದೆ.
ಫಲಿತಾಂಶದಲ್ಲಿ ಉಡುಪಿ ಪ್ರಥಮ ಸ್ಥಾನದಲ್ಲಿದ್ದರೆ ದಕ್ಷಿಣ ಕನ್ನಡ ದ್ವಿತೀಯ ಮತ್ತು ಕೊಡಗು ತೃತೀಯ ಸ್ಥಾನದಲ್ಲಿವೆ. ಚಿತ್ರದುರ್ಗ, ರಾಯಚೂರು ಮತ್ತು ವಿಜಯಪುರಗಳು ಕೊನೆಯ ಸ್ಥಾನದಲ್ಲಿವೆ. ಬೆಂಗಳೂರು ನಗರ ಮತ್ತು ಬೆಂಗಳೂರು ಉತ್ತರ 6 ಮತ್ತು ಏಳನೇ ಸ್ಥಾನದಲ್ಲಿವೆ ಎಂದು ಅವರು ಮಾಹಿತಿ ನೀಡಿದರು.
Get In Touch With Us info@kalpa.news Whatsapp: 9481252093















