ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ಪತ್ರಕರ್ತ, ಬರಹಗಾರ, ಹಾಯ್ ಬೆಂಗಳೂರು ಪತ್ರಿಕೆಯ ಸಂಸ್ಥಾಪಕ ರವಿ ಬೆಳಗೆರೆ ನಿನ್ನೆ ರಾತ್ರಿ ವಿಧಿವಶರಾಗಿದ್ದಾರೆ.
ನಿನ್ನೆ ರಾತ್ರಿ ತೀವ್ರ ಹೃದಯಾಘಾತಕ್ಕೆ ಒಳಗಾದ ಬೆಳಗೆರೆ ಕೊನೆಯುಸಿರೆಳೆದಿದ್ದಾರೆ.

ನಂತರ ಪತ್ರಿಕೋದ್ಯಮ ವೃತ್ತಿ ಪ್ರಾರಂಭಿಸಿದ್ದ ಅವರು, ಕನ್ನಡಪ್ರಭ, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದರು.
1995 ರಲ್ಲಿ ಇವರು ಆರಂಭಿಸಿದ್ದ ಹಾಯ್ ಬೆಂಗಳೂರು ಪತ್ರಿಕೆ ರಾಜ್ಯಮಟ್ಟದಲ್ಲಿ ಭಾರೀ ಸಂಚಲನ ಸೃಷ್ಠಿಸಿತ್ತು.

ಪತ್ರಿಕೋದ್ಯಮದಲ್ಲಿ ಸಾಧನೆ ಮಾಡಿದ್ದ ರವಿ ಬೆಳೆಗೆರೆ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಜೀವಮಾನದ ಸಾಧನೆ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಸಂದಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post