ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕಾಲ್ಗುಣದಿಂದ ರಾಜ್ಯದಲ್ಲಿ ಸಮೃದ್ಧವಾಗಿ ಮಳೆಯಾಗಿ ರಾಜ್ಯದಲ್ಲಿ ಸುಭಿಕ್ಷೆ ನೆಲೆಸಿದೆ ಎಂದು ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ ಹೇಳಿದ್ದಾರೆ.
ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯವನ್ನು ಕುರಿತು ವಿಧಾನಸಭೆಯಲ್ಲಿ ಅವರು ಮಾತನಾಡಿದರು.
ಕಳೆದ 10 ವರ್ಷಗಳಿಂದಲೂ ರಾಜ್ಯದಲ್ಲಿ ಬರ ಪರಿಸ್ಥಿತಿ ಇತ್ತು. ಯಡಿಯೂರಪ್ಪ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಸಮೃದ್ಧಿ ಮಳೆಯಾಯಿತು. ಜನರು ಸುಭಿಕ್ಷರಾಗಿದ್ದಾರೆ ಎಂದರು.
ಯಡಿಯೂರಪ್ಪ ಅವರಿಗೆ ತಾವು ಸಿಎಂ ಆಗಿ ರಾಜ್ಯದ ಅಭಿವೃದ್ಧಿ ಮಾಡಬೇಕು. ಜನರ ಋಣ ತೀರಿಸಬೇಕೆಂಬ ಅಪರಿಮಿತವಾದ ಬಯಕೆಗಳಿದ್ದವು. ಜನರ ನಿರೀಕ್ಷೆಯಂತೆ ಅವರಿಗೆ ಅಧಿಕಾರ ಸಿಕ್ಕಿದ್ದು, ಅಭಿವೃದ್ಧಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯದಾದ್ಯಂತ ಮೂಲಸೌಕರ್ಯ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಸರ್ಕಾರ ಮಹತ್ವದ ಹೆಜ್ಜೆಗಳನ್ನಿಟ್ಟಿದೆ.
ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಕೆಲವೇ ದಿನಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಯಿತು. ಎಲ್ಲ ಪ್ರದೇಶಗಳಿಗೆ ಎರಡೆರಡು ಬಾರಿ ಭೇಟಿ ನೀಡಿ ಜನರ ಸಂಕಷ್ಟಗಳಿಗೆ ಸ್ಪಂದಿಸಿದ್ದರು ಎಂದರು.
2018ರ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟಗೊಂಡಾಗ ತಾತ್ಕಾಲಿಕವಾಗಿ ಸಾಂದರ್ಭಿಕ ಶಿಶುವೊಂದು ಜನಿಸಿತ್ತು. ಆದರೆ ಕಾಲಾನಂತರ ಜನ ಅದನ್ನು ತಿರಸ್ಕರಿಸಿದರು ಪರೋಕ್ಷವಾಗಿ ಜೆಡಿಎಸ್’ಗೆ ಕುಟುಕಿದರು.
Get in Touch With Us info@kalpa.news Whatsapp: 9481252093
Discussion about this post