ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕೊರೋನಾ ಪಾಸಿಟಿವಿಟಿ ಹೆಚ್ಚಾಗಿರುವ ರಾಜ್ಯದ 11 ಜಿಲ್ಲೆಗಳಲ್ಲಿ ಜೂನ್ 14ರಿಂದ ಮತ್ತೆ ಕಠಿಣ ಲಾಕ್ ಡೌನ್ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ಈ ಕುರಿತಂತೆ ಸುದ್ಧಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೊರೋನಾ ಪಾಸಿಟಿವಿಟಿ ಹೆಚ್ಚಾಗಿರುವ 11 ಜಿಲ್ಲೆಗಳಲ್ಲಿ ಕಠಿಣ ಲಾಕ್ ಡೌನ್ ವಿಸ್ತರಣೆಯಾಗಲಿದ್ದು, ಈಗಿರುವ ಮಾರ್ಗಸೂಚಿಯೇ ಮುಂದುವರೆಯಲಿದೆ ಎಂದರು.
ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ, ಹಾಸನ, ಬೆಳಗಾವಿ, ಮೈಸೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ ಜಿಲ್ಲೆಗಳಲ್ಲಿ ಈಗಿರುವ ಮಾರ್ಗಸೂಚಿಯನ್ವಯ ಲಾಕ್ ಡೌನ್ ಮುಂದುವೆರಯಲಿದೆ ಎಂದರು.
ಇನ್ನು, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಅನ್ ಲಾಕ್ ಘೋಷಣೆ ಮಾಡಲಾಗಿದ್ದು, ಎಲ್ಲ ರೀತಿಯ ಕೈಗಾರಿಕೆಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಇನ್ನುಳಿದಂತೆ ರಾಜ್ಯದಾದ್ಯಂತ ವಾರಾತ್ಯಂದ ಲಾಕ್ ಡೌನ್ ಮುಂದುವರೆಯಲಿದೆ. ಜೂನ್ 14ರಿಂದ 21ರವರೆಗೂ ನೈಟ್ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ ಎಂದರು.
ಇನ್ನು, ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಕೆಎಸ್’ಆರ್’ಟಿಸಿ, ಬಿಎಂಟಿಸಿ ಹಾಗೂ ಮೆಟ್ರೋ ಸಂಚಾರ ಆರಂಭವಾಗುವುದಿಲ್ಲ ಎಂದಿದ್ದಾರೆ.
ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಈ ಕೆಳಕಂಡ ಸಡಿಲಿಕೆಗಳೊಂದಿಗೆ ದಿನಾಂಕ: 14-06-2021 ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ: 21-06-2021 ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
• ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ.
• ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
• ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿಮಾಣ ಚಟುವಟಿಕೆ ಸಂಬAದಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ ನಿಡಲಾಗಿದೆ.
• ಪಾರ್ಕ್ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
• ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ.
• ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.
• ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಿಗ್ಗ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
• ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post