ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ಸಿಬ್ಬಂದಿ, ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎನ್ನಲಾದ ಘಟನೆಗೆ ಶಿವಮೊಗ್ಗ ಮಾನವ ಹಕ್ಕುಗಳ ಕಮಿಟಿಯ ಜಿಲ್ಲಾ ಮಹಿಳಾ ಘಟಕ ತೀವ್ರ ಖಂಡನೆ ವ್ಯಕ್ತಪಡಿಸಿದೆ.
ಈ ಕುರಿತಂತೆ ಮಹಿಳಾ ಘಟಕದ ಸದಸ್ಯರು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಈ ವೇಳೆ ಅವರು ಮಾತನಾಡಿದರು.
ಕೋವಿಡ್ ಸೆಂಟರ್’ನಲ್ಲಿ ತಾಯಿಯ ಆರೋಗ್ಯ ನೋಡಿಕೊಳ್ಳುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಅವರನ್ನು ನ್ಯಾಯಾಲಯವು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂಬುದು ನಮ್ಮ ಆತ್ಮೀಯ ಆಗ್ರಹಿಸಿದೆ.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ರಾಜ್ಯದಲ್ಲೇ ಅತ್ಯಂತ ಮಾದರಿ ಆಸ್ಪತ್ರೆ ಎಂದು ಹೆಸರುವಾಸಿಯಾಗಿದೆ. ಇಲ್ಲಿನ ವೈದ್ಯರು ಹಾಗೂ ಇತರ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಅತ್ಯಂತ ದಕ್ಷ ಸೇವೆ ಸಲ್ಲಿಸುತ್ತಾ ಎಲ್ಲ ರೋಗಿಗಳಿಗೆ ಜೀವ ನೀಡುವ ಆತ್ಮವಿಶ್ವಾಸ ತುಂಬುವ ಕೆಲಸ ಮಾಡುತ್ತಿದ್ದಾರೆ ಎಂಬುದರಲ್ಲಿ ಎರಡು ಮಾತಿಲ್ಲ. ಇಂತಹ ಪ್ರಮುಖ ಆಸ್ಪತ್ರೆಯಲ್ಲಿ ಕಿಡಿಗೇಡಿ ಮನಸ್ಸಿನ ಯುವಕನೋರ್ವ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವುದು ಖಂಡನೀಯ ಎಂದಿದೆ.
ಹ್ಯಾಪಿ ಹೆಚ್ಚು ಜನ ಮಳೆ ಬಡವರ ಅತಿ ಹೆಚ್ಚು ಜನ ಬಂದು ಚಿಕಿತ್ಸೆ ಪಡೆಯುವ ಮೆಗ್ಗಾನ್ ಆಸ್ಪತ್ರೆ ಇತ್ತೀಚಿನ ದಿನಗಳಲ್ಲಿ ಸ್ವಚ್ಛತೆ ಹಾಗೂ ಚಿಕಿತ್ಸೆ ವಿಷಯದಲ್ಲಿ ಗಮನಿಯ ಹಾಗೂ ಗಣನೀಯ ಸೇವೆ ಸಲ್ಲಿಸುತ್ತಿದೆ. ಇಂತಹ ಹೊತ್ತಿನಲ್ಲಿ ಮನಸ್ಸು ಕಿಡಿಗೇಡಿ ವ್ಯಕ್ತಿತ್ವ ತೋರಿದ ವಾರ್ಡ್ ಬಾಯ್ ಕಲ್ಲಾದ ಎನ್ನಲಾದ ಯುವಕ ಹಾಗೂ ಆತನ ಜೊತೆಗೆ ಸಹಕರಿಸಿದ ಯುವಕರನ್ನು ಶಿಸ್ತುಕ್ರಮಕ್ಕೆ ಒಳಪಡಿಸಬೇಕೆಂದು ಸಮಿತಿ ಒತ್ತಾಯಿಸಿದೆ. ಆಸ್ಪತ್ರೆ ಸರಹದ್ದಿನಲ್ಲಿ ಹಾಗೂ ಎಲ್ಲಿಯೇ ಆಗಲಿ ಇಂತಹ ಘಟನೆಗಳು ಮರುಕಳಿಸಬಾರದು. ಈ ಬಗ್ಗೆ ಉಗ್ರ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂದು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post