ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಶಾಲಾ ಕಾಲೇಜುಗಳ ತರಗತಿಯಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ರಾಜ್ಯ ಹೈಕೋರ್ಟ್ ಇಂದು ನೀಡಿರುವ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದೆ.
ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ವಿದ್ಯಾರ್ಥಿನಿ ನಿಭಾ ನಾಜ್ ಪರವಾಗಿ ವಕೀಲ ಅನಾಸ್ ತನ್ವೀರ್ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಆವಸ್ಥಿ ನೇತೃತ್ವದ ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಮತ್ತು ಜೆ.ಎಂ ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ತೀರ್ಪು ಪ್ರಕಟಿಸಿದೆ.
ಕಲಂ 19(1) (ಎ) (ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಕಲಂ 21 (ಗೌಪ್ಯತೆ) ಅಡಿಯಲ್ಲಿ ಅರ್ಜಿದಾರರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ. ಶಾಲಾ ಸಮವಸ್ತ್ರವನ್ನು ಕಾನೂನು ಬದ್ಧವಾಗಿ ಸರ್ಕಾರ ಆದೇಶ ಜಾರಿಗೆ ತಂದಿಲ್ಲ ಎಂದು ಆಕ್ಷೇಪಿಸಿ ಸಲ್ಲಿಸಿರುವ ಅರ್ಜಿಗೆ ಉತ್ತರಿಸಿರುವ ನ್ಯಾಯಾಲಯ, ಸರ್ಕಾರ ಸೂಚಿಸುವ ಸಮವಸ್ತ್ರವು ಸಮಂಜಸವಾದ ನಿರ್ಬಂಧವಾಗಿದೆ. ಸಾಂವಿಧಾನಿಕವಾಗಿ ಅನುಮತಿಸಲಾಗಿದೆ ಇದನ್ನು ವಿದ್ಯಾರ್ಥಿಗಳು ಆಕ್ಷೇಪಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.
ಹೈಕೋರ್ಟ್ ತೀರ್ಪಿನ ಮುಖ್ಯಾಂಶಗಳು:
- ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ
- ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನಿಸುವ ಹಾಗಿಲ್ಲ
- ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ
- ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವಂತಿಲ್ಲ
- ಹಿಜಾಬ್’ಗೆ ಅವಕಾಶ ಕೊಡುವುದು ಬಿಡುವುದು ಆಯಾ ಸಂಸ್ಥೆಗೆ ಬಿಟ್ಟದ್ದು
- ಹಿಜಾಬ್’ಗೆ ಅವಕಾಶ ಇಲ್ಲ ಎಂದರೆ ಮುಸ್ಲಿಂ ವಿದ್ಯಾರ್ಥಿನಿಯರ ಧಾರ್ಮಿಕ ಹಕ್ಕಿನ ಉಲ್ಲಂಘನೆ ಅಲ್ಲ
- ಶಾಲಾ-ಕಾಲೇಜಿನ ಸಮವಸ್ತ್ರ ನೀತಿ ಪಾಲಿಸುವುದು ವಿದ್ಯಾರ್ಥಿನಿಯರ ಕರ್ತವ್ಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post