ಬೆಂಗಳೂರು: ಪಿಯು ಕಾಲೇಜುಗಳಲ್ಲಿ ಮೊಬೈಲ್ ಹಾಗೂ ಲ್ಯಾಪ್ ಟಾಪ್ ಬಳಕೆ ನಿಷೇಧ ಗೊಂದಲಕ್ಕೆ ತೆರೆ ಎಳೆದಿರುವ ಪಿಯು ಬೋರ್ಡ್, ರಾಜ್ಯದ ಕಾಲೇಜುಗಳಲ್ಲಿ ಇನ್ನು ಮುಂದೆ ಮೊಬೈಲ್ ಬಳಕೆಯನ್ನು ನಿಷೇಧಿಸಿ ಆದೇಶಿಸಿದೆ.
ಈ ಹಿಂದೆ ಕಾಲೇಜುಗಳಲ್ಲಿ ಮೊಬೈಲ್ ಹಾಗೂ ಲ್ಯಾಪ್ ಟಾಪ್‌ಗಳನ್ನು ವಿದ್ಯಾರ್ಥಿಗಳು ಬಳಸುವಂತಿಲ್ಲ ಎಂದು ಸುತ್ತೋಲೆ ಹೊರಡಿಸಲಾಗಿತ್ತು. ಆದರೆ, ಲ್ಯಾಪ್ ಟಾಪ್ ನಿಷೇಧಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದರಿಂದಾಗಿ ಎಚ್ಚೆತ್ತ ಸರ್ಕಾರ ಇಂದು ಸ್ಪಷ್ಟೀಕರಣ ನೀಡಿ ಕ್ಲರಿಕಲ್ ತಪ್ಪಿನಿಂದಾಗಿ ಹೀಗಾಗಿತ್ತು ಎಂದು ಮರು ಆದೇಶ ಹೊರಡಿಸಿದೆ.
ಇದರಂತೆ ಇನ್ನು ಮುಂದೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪಿಯು ಕಾಲೇಜಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಫೋನ್ ಬಳಸುವಂತಿಲ್ಲ ಎಂದು ಆದೇಶಿಸಿದೆ.







Discussion about this post