ಕಲ್ಪ ಮೀಡಿಯಾ ಹೌಸ್ | ಸುಬ್ರಹ್ಮಣ್ಯ |
ಆಟೋ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ್ದು, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಾಣಿಲ ಎಂಬಲ್ಲಿ ನಡೆದಿದೆ.
ಇಲ್ಲಿನ ವಿಟ್ಲ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತ ಆಟೋ ಚಾಲಕನನ್ನು ಸುಬ್ರಹ್ಮಣ್ಯದ ಪಂಜ ನಿವಾಸಿ ಸುದರ್ಶನ್(35) ಎಂದು ಗುರುತಿಸಲಾಗಿದೆ.
ಮಾಣಿಲ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹಿಂಬದಿಯಲ್ಲಿ ಕುಳಿತು ಪ್ರಯಾಣ ಮಾಡುತ್ತಿದ್ದ ವ್ಯಕ್ತಿಗೆ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post