No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇನ್ನು ಮುಂದೆ ಭಕ್ತರಿಗೆ ವಿಶೇಷ ಬೋಜನ ಪ್ರಸಾದ

kalpa News by kalpa News
October 9, 2024
in ದಕ್ಷಿಣ ಕನ್ನಡ
0
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇನ್ನು ಮುಂದೆ ಭಕ್ತರಿಗೆ ವಿಶೇಷ ಬೋಜನ ಪ್ರಸಾದ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸುಬ್ರಹ್ಮಣ್ಯ  |

ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ #Kukke Shri Subramanya Temple ಬೋಜನ ಪ್ರಸಾದವು ಪರಮ ಪಾವನವಾದುದು. ಇಲ್ಲಿಗೆ ದಿನಂಪ್ರತಿ ಸಹಸ್ರಾರು ಭಕ್ತರು ಆಗಮಿಸಿ ಶ್ರೀ ದೇವರ ದರುಶನ ಪಡೆದು ಕೃತಾರ್ಥರಾಗುತ್ತಾರೆ. ಅನ್ನದಾತ ಸುಬ್ಬಪ್ಪ ಎಂಬ ಪ್ರತೀತಿ ಪಡೆದ ಶ್ರೀ ದೇವಳದಲ್ಲಿ ಇತರ ಸೇವೆಗಳಂತೆ ಬೋಜನ ಪ್ರಸಾದ ಸ್ವೀಕಾರವು ಪವಿತ್ರವಾಗಿದೆ. ಇಲ್ಲಿ ವಾರ್ಷಿಕವಾಗಿ ಸುಮಾರು 55ಲಕ್ಷಕ್ಕೂ ಮಿಕ್ಕಿ ಭಕ್ತರು ಬೋಜನ ಪ್ರಸಾದ ಸ್ವೀಕರಿಸುತ್ತಾರೆ. ಇದೀಗ ಶ್ರೀ ದೇವಳದ ಆಡಳಿತಾಧಿಕಾರಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಅವರ ವಿಶೇಷ ಕಾಳಜಿ ಮತ್ತು ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರ ಚಿಂತನಾತ್ಮಕ ಯೋಜನೆ ಮೇರೆಗೆ ಪ್ರಸಾದ ಬೋಜನ ವ್ಯವಸ್ಥೆಯಲ್ಲಿ ವಿತರಿಸುವ ಖಾದ್ಯಗಳಲ್ಲಿ ವಿನೂತನ ಬದಲಾವಣೆಗಳನ್ನು ತರಲಾಗಿದೆ. ಇದರಿಂದಾಗಿ ಭಕ್ತರಿಗೆ ವಿಶೇಷ ಬೋಜನ ಪ್ರಸಾದ ಪ್ರತಿದಿನ ದೊರಕುವಂತಾಗಿದೆ.

ಈ ಹಿಂದೆ ವಿಶೇಷ ದಿನಗಳನ್ನು ಹೊರತು ಪಡಿಸಿ ಪ್ರತಿದಿನ ಒಂದೇ ರೀತಿಯ ಪಾಯಸವನ್ನು ಭಕ್ತರಿಗೆ ವಿತರಿಸಲಾಗುತ್ತಿತ್ತು. ಆದರೆ ಇದೀಗ ನೂತನ ಯೋಜನೆ ಮೂಲಕ ಪ್ರತಿದಿನ ಬೇರೆ ಬೇರೆ ತೆರನಾದ ಪಾಯಸಗಳನ್ನು ಭಕ್ತರಿಗೆ ಉಣಬಡಿಸುವ ವ್ಯವಸ್ಥೆಯನ್ನು ಅಧಿಕಾರಿಗಳು ಮಾಡಿದ್ದಾರೆ. ಕಡ್ಲೆ ಬೇಳೆ, ಹೆಸರು ಬೇಳೆ, ಕಡ್ಳೆ ಬೇಳೆ ಸಾಬಕ್ಕಿ, ಗೋದಿ ಕಡಿ, ಹಾಲು ಪಾಯಸ, ಅಕ್ಕಿ ಪಾಯಸ, ಶ್ಯಾವಿಗೆ ಪಾಯಸ, ರವೆ ಪಾಯಸ ಮತ್ತು ಸಿರಿಧಾನ್ಯ ಸೇರಿದಂತೆ 10 ಬಗೆಯ ಪಾಯಸವನ್ನು ದಿನವಾಹಿ ತಯಾರಿಸಿ ಭಕ್ತರಿಗೆ ವಿತರಿಸಲಾಗುತ್ತದೆ.ಪ್ರಸಾದ ಬೋಜನವು ಅತ್ಯಂತ ಸ್ವಾಧಿಷ್ಠ ಮತ್ತು ಪೌಷ್ಠಿಕಾಂಶಗಳಿಂದ ಕೂಡಿರಬೇಕೆಂದು ಅತ್ಯುತ್ತಮವಾದ 15 ಬಗೆಯ ತರಕಾರಿಗಳನ್ನು ಪ್ರತಿದಿನ ಸಾಂಬಾರಿಗೆ ಉಪಯೋಗಿಸಲು ಯೋಜನೆ ಮಾಡಿದ್ದಾರೆ.

Also read: ರೇಡಿಯೋ ಶಿವಮೊಗ್ಗದಲ್ಲಿ ಅ.10ರಂದು ಮಕ್ಕಳ ಸ್ನೇಹಿ ಪಂಚಾಯ್ತಿ ಕಾರ್ಯಕ್ರಮ

ಶ್ರೀ ದೇವಳದಲ್ಲಿ ಬೋಜನವು ಕೂಡಾ ಒಂದು ಅಮೂಲ್ಯವಾದ ಪ್ರಸಾದ.ಹಿಂದಿನಿಂದಲೂ ಶ್ರೀ ದೇವರ ಅನ್ನಪ್ರಸಾದಕ್ಕೆ ಹೆಚ್ಚಿನ ಮಹತ್ವವಿದೆ. ಈಗಾಗಲೇ ಅತ್ಯಾಧುನಿಕ ತಂತ್ರಜ್ಞಾನದ ಹೈಟೆಕ್ ಪಾಕಶಾಲೆ ನಿರ್ಮಾಣವಾಗಿದೆ. ಮುಂದೆ ಭಕ್ತರಿಗೆ ಶ್ರೀ ದೇವರ ಬೋಜನ ಪ್ರಸಾದ ಸ್ವೀಕರಿಸಲು ಹೆಚ್ಚಿನ ವ್ಯವಸ್ಥೆಯನ್ನು ಮಾಡಲಾಗುವುದು.ಅಲ್ಲದೆ ಭಕ್ತರಿಗೆ ಬೋಜನ ಪ್ರಸಾದ ಸ್ವೀಕಾರ ಸುಲಲಿತಗೊಳಿಸಲು ಬೇಕಾದ ಉತ್ತಮ ಯೋಜನೆ ನಡೆಸಲಾಗುವುದು. ಇದರೊಂದಿಗೆ ಭಕ್ತರಿಗೆ ಸೂಕ್ತವಾದ ಅನುಕೂಲತೆ ಒದಗಿಸುವ ಮೂಲಕ ದೇವರ ಸೇವೆಯನ್ನು ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ.

ಜುಬಿನ್ ಮಹಪಾತ್ರ, ಆಡಳಿತಾಧಿಕಾರಿಗಳು ಮತ್ತು ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರು

ಭಕ್ತರಿಗೆ ಪೌಷ್ಟಿಕಾಂಶ ಭರಿತವಾದ ವಿಶೇಷ ಬೋಜನ ಪ್ರಸಾದ ವಿತರಿಸುವ ದೃಷ್ಠಿಯಿಂದ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ.ಇದರಿಂದಾಗಿ ಭಕ್ತರು ಸ್ವಾದಿಷ್ಠವಾದ ಪ್ರಸಾದ ಸ್ವೀಕರಿಸಲು ಅನುಕೂಲತೆಯಾಗಿದೆ.ವಿವಿಧ ಬಗೆಯ ಪಾಯಸ, ವಿವಿಧ ತರಕಾರಿಗಳ ಸಾಂಬಾರನ್ನು ಇದೀಗ ತಯಾರಿಸಲಾಗುತ್ತಿದೆ.ಬೋಜನ ಪ್ರಸಾದ ವಿತರಣೆ ಮತ್ತು ತಯಾರಿಕೆಯ ವ್ಯವಸ್ಥೆಯಲ್ಲಿ ಶುಚಿತ್ವ ಮತ್ತು ನೈರ್ಮಲ್ಯತೆಗೆ ಹೆಚ್ಚಿನ ಗಮನ ನೀಡಲಾಗುತ್ತಿದೆ.

ಅರವಿಂದ ಅಯ್ಯಪ್ಪ ಸುತಗುಂಡಿ, ಕಾರ್ಯನಿರ್ವಹಣಾಧಿಕಾರಿಗಳು

ಪ್ರತಿದಿನ ಕಾಲೇಜಿಗೆ ಊಟ ಬರುತ್ತಿರುವುದರಿಂದ ವಿದ್ಯಾರ್ಥಿಗಳ ಹಾಗೂ ಕಾಲೇಜಿನ ಬೆಳವಣಿಗೆಗೆ ಪೂರಕವಾಗಿದೆ. ಹಳ್ಳಿಗಳಿಂದ ಮತ್ತು ದೂರದೂರುಗಳಿಂದ ಬರುವಂತಹ ವಿದ್ಯಾರ್ಥಿಗಳು ಬೆಳಗ್ಗೆ ಬೇಗನೆ ಬಿಟ್ಟು ಆಹಾರ ಸೇವಿಸದೆ ಬರುತ್ತಾರೆ. ಆದುದರಿಂದ ಮಧ್ಯಾಹ್ನ ಉತ್ತಮವಾದ ಭೋಜನ ಸಿಗುವ ಕಾರಣ ಮಕ್ಕಳ ಆರೋಗ್ಯ ವೃದ್ಧಿಯಾಗುತ್ತಿದೆ. ಅಷ್ಟೇ ಅಲ್ಲದೆ ಪೌಷ್ಟಿಕ ಹಾಗೂ ಆರೋಗ್ಯಕರ ಆಹಾರ ದೊರಕುವುದರಿಂದ ವಿದ್ಯಾರ್ಥಿಗಳ ಬುದ್ದಿಶಕ್ತಿ ಚುರುಕುಗೊಳ್ಳುತ್ತದೆ. ಕಾಲೇಜಿಗೆ 100ಕ್ಕೆ 100 ಫಲಿತಾಂಶ ಬರುವುದರಲ್ಲಿ ಆಡಳಿತ ಮಂಡಳಿಯ ಅತ್ಯುತ್ತಮ ಸಹಾಯ, ಉಪನ್ಯಾಸಕರ ಸಂಯೋಜನೆ ಹಾಗೂ ಶ್ರೀ ದೇವಳದ ಭೋಜನ ವ್ಯವಸ್ಥೆಯು ಕಾರಣೀಭೂತವಾಗಿದೆ.

ಸೋಮಶೇಖರ ನಾಯಕ್, ಪ್ರಾಚಾರ್ಯರು, ಎಸ್‌ಎಸ್‌ಪಿಯು ಕಾಲೇಜ್

ಕುಕ್ಕೆ ದೇವಳದಲ್ಲಿ ಸಂಪ್ರದಾಯ ಪ್ರಕಾರ ಬಾಳೆ ಎಲೆಯಲ್ಲಿ ಬೋಜನ ಪ್ರಸಾದ ವಿತರಣೆಯಾಗುತ್ತದೆ.ಪ್ರತಿನಿತ್ಯ ಭಕ್ತರಿಗೆ ಅನಾದಿ ಕಾಲದಿಂದ ಪ್ರಸಾದದಲ್ಲಿ ವಿತರಿಸಲಾಗುತ್ತಿರುವ ಸಾಂಪ್ರದಾಯಿಕ ಚಟ್ನಿ, ಪಲ್ಯ, ಅನ್ನ, ಸಾರು, ಸಾಂಬಾರು, ಪಾಯಸ, ಮಜ್ಜಿಗೆ ವಿತರಣೆಯಾಗುತ್ತದೆ. ಜಾತ್ರೆ ಮತ್ತು ಹೊಸ್ತಾರೋಗಣೆಯ ದಿನಗಳಲ್ಲಿ ಭಕ್ಷö್ಯಗಳ ಸಂಖ್ಯೆ ಅಧಿಕವಿರುತ್ತದೆ. ಅಲ್ಲದೆ ಏಕಾದಶಿ ದಿನ ಅವಲಕ್ಕಿ, ಉಪ್ಪಿಟ್ಟು ಮತ್ತು ಮಜ್ಜಿಗೆ ವಿತರಿಸಲಾಗುತ್ತದೆ.
ಶಿಕ್ಷಣಕ್ಕಾಗಿ ಅನ್ನದಾನ:

ಶ್ರೀ ದೇವಳವು ಭಕ್ತರಿಗೆ ಸೂಕ್ತವಾದ ಅನುಕೂಲತೆಯನ್ನು ಒದಗಿಸುವುದರ ಜೊತೆಗೆ ತನ್ನ ಆಡಳಿತದಲ್ಲಿ ಎರಡು ಶಿಕ್ಷಣ ಸಂಸ್ಥೆಗಳನ್ನು ಅನೇಕ ವರ್ಷಗಳಿಂದ ನಡೆಸಿಕೊಂಡು ಬರುತ್ತಿದೆ.ಈ ವಿದ್ಯಾ ಸಂಸ್ಥೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ದಿನ ನಿತ್ಯ ಶ್ರೀ ದೇವಳದಿಂದ ಪ್ರಸಾದ ಬೋಜನ ವಿತರಣೆಯಾಗುತ್ತಿದೆ.ಅದೇ ರೀತಿ ಕ್ಷೇತ್ರದಲ್ಲಿನ ಇತರ ಶಾಲೆಗಳಿಗೆ ಕೂಡಾ ಶ್ರೀ ದೇವಳದಿಂದ ಬೋಜನ ವ್ಯವಸ್ಥೆ ಮಾಡಲಾಗುತ್ತದೆ.ಕ್ಷೇತ್ರದಲ್ಲಿ ವ್ಯಾಸಂಗ ಮಾಡುವ ಸುಮಾರು 3,300 ಮಂದಿಗೆ ಬೋಜನ ಪ್ರಸಾದ ನೀಡುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಜ್ಞಾನ ಪ್ರಗತಿಗೆ ದೇವಳ ತನ್ನದೇ ಆದ ಕೊಡುಗೆ ನೀಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

 

Tags: Kannada News WebsiteKannada_NewsKannada_News_LiveKannada_News_OnlineKannada_WebsiteKukke Shri Subramanya TempleLatest News KannadaNews_in_KannadaNews_KannadaSubramanyaಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಸುಬ್ರಹ್ಮಣ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರೇಡಿಯೋ ಶಿವಮೊಗ್ಗದಲ್ಲಿ ಅ.10ರಂದು ಮಕ್ಕಳ ಸ್ನೇಹಿ ಪಂಚಾಯ್ತಿ ಕಾರ್ಯಕ್ರಮ

Next Post

ಶಿವಮೊಗ್ಗ | ರಾತ್ರಿ ಮಳೆಯ ಅಬ್ಬರ | ಕೊಚ್ಚಿ ಹೋದ ರೈಲು ಹಳಿ ಜಲ್ಲಿಗಳು | ಸಂಚಾರ ವಿಳಂಬ

kalpa News

kalpa News

Next Post
ಶಿವಮೊಗ್ಗ | ರಾತ್ರಿ ಮಳೆಯ ಅಬ್ಬರ | ಕೊಚ್ಚಿ ಹೋದ ರೈಲು ಹಳಿ ಜಲ್ಲಿಗಳು | ಸಂಚಾರ ವಿಳಂಬ

ಶಿವಮೊಗ್ಗ | ರಾತ್ರಿ ಮಳೆಯ ಅಬ್ಬರ | ಕೊಚ್ಚಿ ಹೋದ ರೈಲು ಹಳಿ ಜಲ್ಲಿಗಳು | ಸಂಚಾರ ವಿಳಂಬ

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL