No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Friday, October 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಕಾರ್ಗಿಲ್ ವೀರನಾರಿಯಿಂದ ಕರ್ನಾಟಕದ ರಾಜ್ಯಪಾಲ ಹುದ್ದೆವರೆಗೆ: ಯಾರು ಈ ಡಾ. ಸುಧಾ ಯಾದವ್?

kalpa News by kalpa News
October 16, 2026
in Special Articles
0
Sudha Yadav Kargil Veeranari To Karnataka Governor Journey copy
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಕರ್ನಾಟಕದ ನೂತನ ರಾಜ್ಯಪಾಲರಾಗಿ (Karnataka Governor) ಹಿರಿಯ ಬಿಜೆಪಿ ನಾಯಕಿ ಡಾ. ಸುಧಾ ಯಾದವ್ (Sudha Yadav) ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದು, ಇಂದು ಅಧಿಕೃತವಾಗಿ ಪದಗ್ರಹಣ ಮಾಡಿದ್ದಾರೆ.

ಹಾಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರ ಉತ್ತರಾಧಿಕಾರಿಯಾಗಿ ಸುಧಾ ಯಾದವ್ ಅಧಿಕಾರ ವಹಿಸಿಕೊಂಡಿರುವ ಡಾ.ಸುಧಾ ಯಾದವ್ ಅವರ ಜೀವನವೋ ಒಂದು ಯಶೋಗಾಧೆ.

ಹೌದು… ಕಾರ್ಗಿಲ್ ಯುದ್ಧದಲ್ಲಿ ಪತಿಯನ್ನು ಕಳೆದುಕೊಂಡರೂ ಎದೆಗುಂದದೆ ಇಬ್ಬರು ಮಕ್ಕಳನ್ನು ಬೆಳೆಸುವುದರ ಜೊತೆಗೆ ಸಾರ್ವಜನಿಕ ಜೀವನದಲ್ಲಿ ಗುರುತಿಸಿಕೊಂಡಿರುವ ಅವರು, ಇದೀಗ ರಾಜ್ಯದ ಸಾಂವಿಧಾನಿಕ ಮುಖ್ಯಸ್ಥೆಯಾಗಿ ಮಹತ್ವದ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ಸುಧಾ ಯಾದವ್ ಅವರ ನೇಮಕ ಹಲವು ದೃಷ್ಟಿಗಳಿಂದ ಮಹತ್ವ ಪಡೆದಿದೆ. ಕರ್ನಾಟಕದ ಇತಿಹಾಸದಲ್ಲಿ ರಾಜ್ಯಪಾಲರ ಹುದ್ದೆಯನ್ನು ಅಲಂಕರಿಸಲಿರುವ ಎರಡನೇ ಮಹಿಳೆ ಎಂಬ ಹೆಗ್ಗಳಿಕೆ ಅವರಿಗೆ ಸಲ್ಲಲಿದೆ. ಇದಕ್ಕೂ ಮೊದಲು ವಿ.ಎಸ್. ರಮಾದೇವಿ ಅವರು 1999ರಿಂದ 2002ರವರೆಗೆ ಕರ್ನಾಟಕದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಅವರ ಬಳಿಕ ಮಹಿಳೆಯೊಬ್ಬರು ಈ ಹುದ್ದೆಗೆ ನೇಮಕವಾಗಿರುವುದು ವಿಶೇಷವಾಗಿದೆ.

ರಾಜಕೀಯ ಅನುಭವ, ಶೈಕ್ಷಣಿಕ ಸಾಧನೆ, ರಾಷ್ಟ್ರಸೇವೆಯ ಹಿನ್ನೆಲೆ ಹಾಗೂ ವೈಯಕ್ತಿಕ ಬದುಕಿನ ಸವಾಲುಗಳನ್ನು ಧೈರ್ಯದಿಂದ ಎದುರಿಸಿದ ಛಲ-ಈ ಎಲ್ಲ ಅಂಶಗಳು ಡಾ. ಸುಧಾ ಯಾದವ್ ಅವರ ವ್ಯಕ್ತಿತ್ವವನ್ನು ರೂಪಿಸಿವೆ. ಕಾರ್ಗಿಲ್ ಯುದ್ಧದಲ್ಲಿ ಪತಿಯನ್ನು ಕಳೆದುಕೊಂಡ ವೀರನಾರಿಯಾಗಿ ಆರಂಭವಾದ ಅವರ ಸಾರ್ವಜನಿಕ ಬದುಕು, ಸಂಸದೆಯಾಗಿ, ಪಕ್ಷದ ಪ್ರಮುಖ ನಾಯಕಿಯಾಗಿ ಬೆಳೆದು ಈಗ ರಾಜ್ಯಪಾಲರ ಹುದ್ದೆಯವರೆಗೆ ತಲುಪಿದೆ.Shivamogga Dasara 2026 Page 17

ಕಾರ್ಗಿಲ್ ಯುದ್ಧದಲ್ಲಿ ಪತಿಯನ್ನು ಕಳೆದುಕೊಂಡ ವೀರನಾರಿ

ಸುಧಾ ಯಾದವ್ ಅವರ ಜೀವನದಲ್ಲಿ 1999ರ ಕಾರ್ಗಿಲ್ ಯುದ್ಧ ಮಹತ್ವದ ತಿರುವು ತಂದಿತು. ಅವರ ಪತಿ ಸುಖ್ಬೀರ್ ಸಿಂಗ್ ಯಾದವ್ ಅವರು ಗಡಿ ಭದ್ರತಾ ಪಡೆಯ (ಬಿಎಸ್’ಎಫ್) 171ನೇ ಬೆಟಾಲಿಯನ್ನಲ್ಲಿ ಡೆಪ್ಯುಟಿ ಕಮಾಂಡೆಂಟ್ ಆಗಿ ಸೇವೆ ಸಲ್ಲಿಸುತ್ತಿದ್ದರು. ದೇಶದ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಅವರು ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದರು. ಅವರಿಗೆ ಮರಣೋತ್ತರವಾಗಿ ಸೇನಾ ಪದಕ (ಸೇನಾ ಮೆಡಲ್) ನೀಡಿ ಗೌರವಿಸಲಾಯಿತು ಎಂದು ನೀಡಿರುವ ಮಾಹಿತಿಯಲ್ಲಿ ತಿಳಿಸಲಾಗಿದೆ.

ಪತಿಯ ಅಗಲಿಕೆ ಸುಧಾ ಯಾದವ್ ಅವರ ಬದುಕಿನಲ್ಲಿ ತುಂಬಲಾರದ ನಷ್ಟವನ್ನುಂಟುಮಾಡಿತು. ಇಬ್ಬರು ಚಿಕ್ಕ ಮಕ್ಕಳ ಜವಾಬ್ದಾರಿ ಅವರ ಹೆಗಲೇರಿತು. ಇಂತಹ ಕಠಿಣ ಪರಿಸ್ಥಿತಿಯಲ್ಲಿಯೂ ಅವರು ಧೈರ್ಯ ಕಳೆದುಕೊಳ್ಳದೆ ಮಕ್ಕಳನ್ನು ಬೆಳೆಸಿದರು. ವೈಯಕ್ತಿಕ ದುಃಖವನ್ನು ಮೀರಿ ಸಮಾಜ ಮತ್ತು ದೇಶದ ಸೇವೆಗೆ ತಮ್ಮನ್ನು ಸಮರ್ಪಿಸಿಕೊಳ್ಳುವ ನಿರ್ಧಾರ ಕೈಗೊಂಡರು.

Also Read>> ಬೆಂಗಳೂರು ವಿಭಾಗದಲ್ಲಿ 10 ರೈಲುಗಳ ಮಾರ್ಗ ಬದಲಾವಣೆ

ಸೈನಿಕರ ತ್ಯಾಗ ಮತ್ತು ಅವರ ಕುಟುಂಬಗಳು ಎದುರಿಸುವ ಸಂಕಷ್ಟಗಳ ಪ್ರತೀಕವಾಗಿ ಗುರುತಿಸಲ್ಪಡುವ `ವೀರನಾರಿ’ಯಾಗಿ ಸುಧಾ ಯಾದವ್ ಅವರು ಗೌರವ ಪಡೆದರು. ಪತಿಯ ದೇಶಸೇವೆಯ ಪರಂಪರೆಯನ್ನು ತಮ್ಮದೇ ರೀತಿಯಲ್ಲಿ ಮುಂದುವರಿಸುವ ಮೂಲಕ ಸಾರ್ವಜನಿಕ ಜೀವನದಲ್ಲಿ ತೊಡಗಿಸಿಕೊಂಡರು. ಅವರ ಬದುಕಿನ ಈ ಅಧ್ಯಾಯ ಅನೇಕ ಮಹಿಳೆಯರಿಗೆ ಧೈರ್ಯ, ಆತ್ಮವಿಶ್ವಾಸ ಮತ್ತು ಸಂಕಷ್ಟಗಳನ್ನು ಎದುರಿಸುವ ಮನೋಬಲದ ಸಂದೇಶ ನೀಡುತ್ತದೆ.

Sudha Yadav : ಶೈಕ್ಷಣಿಕ ಕ್ಷೇತ್ರದಲ್ಲೂ ವಿಶಿಷ್ಟ ಸಾಧನೆ

ರಾಜಕೀಯ ಮತ್ತು ಸಾರ್ವಜನಿಕ ಸೇವೆಯಲ್ಲಿ ಗುರುತಿಸಿಕೊಂಡಿರುವ ಸುಧಾ ಯಾದವ್ ಅವರು ಶೈಕ್ಷಣಿಕವಾಗಿಯೂ ಉತ್ತಮ ಸಾಧನೆ ಮಾಡಿದ್ದಾರೆ. ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಡಾಕ್ಟರೇಟ್ ಪಡೆದಿರುವ ಅವರು ಉನ್ನತ ಶಿಕ್ಷಣದ ಕ್ಷೇತ್ರದಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. 1987ರಲ್ಲಿ ರೂರ್ಕಿ ವಿಶ್ವವಿದ್ಯಾಲಯದಿಂದ (ಈಗಿನ ಭಾರತೀಯ ತಂತ್ರಜ್ಞಾನ ಸಂಸ್ಥೆ-ಐಐಟಿ ರೂರ್ಕಿ) ರಸಾಯನಶಾಸ್ತ್ರದಲ್ಲಿ ಎಂ.ಎಸ್ಸಿ ಪದವಿ ಪಡೆದರು. ಈ ಸಂದರ್ಭದಲ್ಲಿ ಚಿನ್ನದ ಪದಕವನ್ನೂ ಗಳಿಸಿದ್ದರು ಎಂದು ನೀಡಿರುವ ವಿವರಗಳು ತಿಳಿಸುತ್ತವೆ. ಬಳಿಕ ಇದೇ ಸಂಸ್ಥೆಯಲ್ಲಿ ಸಂಶೋಧನೆ ಮುಂದುವರಿಸಿ 1992ರಲ್ಲಿ ರಸಾಯನಶಾಸ್ತ್ರದಲ್ಲಿ ಪಿಎಚ್’ಡಿ ಪದವಿ ಪಡೆದರು.

ವಿಜ್ಞಾನ ಕ್ಷೇತ್ರದಲ್ಲಿ ಉನ್ನತ ಶಿಕ್ಷಣ ಪಡೆದಿರುವುದು ಅವರ ವ್ಯಕ್ತಿತ್ವದ ಪ್ರಮುಖ ಭಾಗವಾಗಿದೆ. ಸಾರ್ವಜನಿಕ ಬದುಕಿನಲ್ಲಿ ರಾಜಕೀಯ ಅನುಭವದ ಜೊತೆಗೆ ಶೈಕ್ಷಣಿಕ ಹಿನ್ನೆಲೆಯನ್ನೂ ಹೊಂದಿರುವ ಸುಧಾ ಯಾದವ್ ಅವರ ನೇಮಕ, ಆಡಳಿತಾತ್ಮಕ ಜವಾಬ್ದಾರಿಗಳ ನಿರ್ವಹಣೆಯ ದೃಷ್ಟಿಯಿಂದಲೂ ಗಮನ ಸೆಳೆದಿದೆ.

ಕಾರ್ಗಿಲ್ ಯುದ್ಧದ ಬಳಿಕ ರಾಜಕೀಯ ಪ್ರವೇಶ

1999ರ ಕಾರ್ಗಿಲ್ ಯುದ್ಧದ ಬಳಿಕ ಸುಧಾ ಯಾದವ್ ಅವರ ಜೀವನ ಹೊಸ ದಿಕ್ಕಿನತ್ತ ಸಾಗಿತು. ಪತಿಯ ತ್ಯಾಗದ ಬಳಿಕ ಅವರು ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳಲು ಮುಂದಾದರು. ಭಾರತೀಯ ಜನತಾ ಪಕ್ಷವು ಅವರನ್ನು ಚುನಾವಣಾ ರಾಜಕೀಯಕ್ಕೆ ಆಹ್ವಾನಿಸಿತು. ಈ ಮೂಲಕ ಅವರ ರಾಜಕೀಯ ಪಯಣ ಆರಂಭವಾಯಿತು.

1999ರ ಲೋಕಸಭೆ ಚುನಾವಣೆಯಲ್ಲಿ ಹರಿಯಾಣದ ಮಹೇಂದ್ರಗಢ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಅವರು ಗೆಲುವು ಸಾಧಿಸಿ ಸಂಸತ್ ಪ್ರವೇಶಿಸಿದರು. ಹಿರಿಯ ರಾಜಕೀಯ ಪ್ರತಿಸ್ಪರ್ಧಿಗಳನ್ನು ಎದುರಿಸಿ ಜಯಗಳಿಸಿದ ಅವರು, 1999ರಿಂದ 2004ರವರೆಗೆ ಸಂಸದೆಯಾಗಿ ಸೇವೆ ಸಲ್ಲಿಸಿದರು.

ಸಂಸದೆಯಾಗಿದ್ದ ಅವಧಿಯಲ್ಲಿ ಜನರ ಸಮಸ್ಯೆಗಳು, ಅಭಿವೃದ್ಧಿ ಕಾರ್ಯಗಳು ಹಾಗೂ ಸಾರ್ವಜನಿಕ ಹಿತಾಸಕ್ತಿಯ ವಿಚಾರಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿಕೊಂಡರು. ವೈಯಕ್ತಿಕ ಸಂಕಷ್ಟದ ನಡುವೆಯೂ ರಾಜಕೀಯವಾಗಿ ಮುನ್ನಡೆಯುವ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು.Christ King

ಬಿಜೆಪಿಯ ಉನ್ನತ ನಿರ್ಧಾರ ಕೈಗೊಳ್ಳುವ ಸಮಿತಿಯಲ್ಲಿ ಸ್ಥಾನ

ಸಂಸದೆಯಾಗಿ ಸೇವೆ ಸಲ್ಲಿಸಿದ ಬಳಿಕವೂ ಸುಧಾ ಯಾದವ್ ಅವರು ಬಿಜೆಪಿ ಸಂಘಟನೆಯಲ್ಲಿ ಸಕ್ರಿಯವಾಗಿ ಮುಂದುವರಿದರು. ಪಕ್ಷದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತಾ ಸಂಘಟನಾತ್ಮಕವಾಗಿ ಪ್ರಗತಿ ಸಾಧಿಸಿದರು.

ಬಿಜೆಪಿಯ ಅತ್ಯುನ್ನತ ನಿರ್ಧಾರ ಕೈಗೊಳ್ಳುವ ವೇದಿಕೆಗಳಲ್ಲಿ ಒಂದಾದ ಸಂಸದೀಯ ಮಂಡಳಿಯ ಸದಸ್ಯೆಯಾಗಿ ಅವರು ಗುರುತಿಸಿಕೊಂಡರು. ಈ ಮಂಡಳಿಯಲ್ಲಿ ಸ್ಥಾನ ಪಡೆದ ಮಹಿಳಾ ನಾಯಕರಲ್ಲಿ ಅವರ ಪಾತ್ರ ವಿಶೇಷವಾಗಿತ್ತು. ಪಕ್ಷದ ಪ್ರಮುಖ ರಾಜಕೀಯ ನಿರ್ಧಾರಗಳು, ನಾಯಕತ್ವಕ್ಕೆ ಸಂಬಂಧಿಸಿದ ವಿಚಾರಗಳು ಮತ್ತು ಸಂಘಟನೆಯ ಕಾರ್ಯತಂತ್ರ ರೂಪಿಸುವ ಪ್ರಕ್ರಿಯೆಯಲ್ಲಿ ಈ ಮಂಡಳಿ ಮಹತ್ವದ ಸ್ಥಾನ ಹೊಂದಿದೆ.

ಸಂಸದೀಯ ಮಂಡಳಿಯಂತಹ ಪ್ರಮುಖ ವೇದಿಕೆಯಲ್ಲಿ ಅವಕಾಶ ಪಡೆದಿರುವುದು, ಪಕ್ಷದೊಳಗೆ ಸುಧಾ ಯಾದವ್ ಅವರು ಗಳಿಸಿರುವ ವಿಶ್ವಾಸ ಮತ್ತು ಸಂಘಟನಾತ್ಮಕ ಅನುಭವಕ್ಕೆ ಸಾಕ್ಷಿಯಾಗಿದೆ. ವೀರನಾರಿಯಾಗಿ ಸಾರ್ವಜನಿಕ ಬದುಕಿಗೆ ಕಾಲಿಟ್ಟ ಅವರು, ಕ್ರಮೇಣ ರಾಷ್ಟ್ರೀಯ ಮಟ್ಟದ ರಾಜಕೀಯ ನಾಯಕಿಯಾಗಿ ಬೆಳೆದಿರುವುದು ಅವರ ಪಯಣದ ಪ್ರಮುಖ ಅಂಶವಾಗಿದೆ.

ಹಿಂದುಳಿದ ವರ್ಗಗಳ ಆಯೋಗದಲ್ಲೂ ಸೇವೆ

ಡಾ. ಸುಧಾ ಯಾದವ್ ಅವರು ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದಲ್ಲಿಯೂ ಸೇವೆ ಸಲ್ಲಿಸಿದ್ದಾರೆ. 2019ರಿಂದ 2022ರವರೆಗೆ ಆಯೋಗದ ಸದಸ್ಯೆಯಾಗಿ ಕಾರ್ಯನಿರ್ವಹಿಸಿದ ಅವರು, ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಪ್ರಾತಿನಿಧ್ಯ ಮತ್ತು ಸಂಬಂಧಿತ ವಿಚಾರಗಳಲ್ಲಿ ಕೆಲಸ ಮಾಡಿದ್ದಾರೆ.

ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಹಿತಾಸಕ್ತಿಗಳನ್ನು ರಕ್ಷಿಸುವುದು, ಅವರ ಸಮಸ್ಯೆಗಳನ್ನು ಪರಿಶೀಲಿಸುವುದು ಹಾಗೂ ಸಂಬಂಧಿತ ನೀತಿಗಳ ಅನುಷ್ಠಾನಕ್ಕೆ ಸಲಹೆ ನೀಡುವುದು ಈ ಆಯೋಗದ ಪ್ರಮುಖ ಕಾರ್ಯಗಳಲ್ಲಿ ಸೇರಿವೆ. ಈ ಅನುಭವವು ಸುಧಾ ಯಾದವ್ ಅವರ ಸಾರ್ವಜನಿಕ ಸೇವೆಯ ವ್ಯಾಪ್ತಿಯನ್ನು ರಾಜಕೀಯ ಸಂಘಟನೆಯಿಂದ ಹೊರಗೂ ವಿಸ್ತರಿಸಿದೆ.

ಸಂಸದೀಯ ರಾಜಕೀಯ, ಪಕ್ಷದ ಸಂಘಟನೆ ಮತ್ತು ರಾಷ್ಟ್ರೀಯ ಆಯೋಗದಲ್ಲಿ ಕಾರ್ಯನಿರ್ವಹಿಸಿದ ಅನುಭವವನ್ನು ಹೊಂದಿರುವ ಅವರು, ಇದೀಗ ಕರ್ನಾಟಕದ ರಾಜ್ಯಪಾಲರಾಗಿ ಹೊಸ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.

ಕರ್ನಾಟಕದ ಎರಡನೇ ಮಹಿಳಾ ರಾಜ್ಯಪಾಲೆ

ಕರ್ನಾಟಕದ ರಾಜ್ಯಪಾಲರ ಇತಿಹಾಸದಲ್ಲಿ ಡಾ. ಸುಧಾ ಯಾದವ್ ಅವರ ನೇಮಕ ವಿಶೇಷ ಸ್ಥಾನ ಪಡೆದಿದೆ. ಈ ಹಿಂದೆ ವಿ.ಎಸ್. ರಮಾದೇವಿ ಅವರು 1999ರಿಂದ 2002ರವರೆಗೆ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಇದೀಗ ಸುಧಾ ಯಾದವ್ ಅವರು ಈ ಹುದ್ದೆಗೆ ನೇಮಕವಾಗಿರುವುದರಿಂದ, ಕರ್ನಾಟಕಕ್ಕೆ ಎರಡನೇ ಮಹಿಳಾ ರಾಜ್ಯಪಾಲೆ ದೊರೆತಂತಾಗಿದೆ.

ರಾಜ್ಯಪಾಲರು ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರಾಗಿದ್ದು, ಸಂವಿಧಾನದ ಚೌಕಟ್ಟಿನೊಳಗೆ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸುತ್ತಾರೆ. ರಾಜ್ಯ ಸರ್ಕಾರ ರಚನೆ, ವಿಧಾನಮಂಡಲದ ಅಧಿವೇಶನಗಳಿಗೆ ಸಂಬಂಧಿಸಿದ ಸಾಂವಿಧಾನಿಕ ಪ್ರಕ್ರಿಯೆಗಳು, ಮಸೂದೆಗಳಿಗೆ ಒಪ್ಪಿಗೆ ನೀಡುವುದು ಹಾಗೂ ಸಂವಿಧಾನಬದ್ಧ ಕರ್ತವ್ಯಗಳನ್ನು ಪಾಲಿಸುವುದು ಅವರ ಜವಾಬ್ದಾರಿಗಳಲ್ಲಿ ಸೇರಿವೆ.

ಕರ್ನಾಟಕದ ರಾಜಕೀಯ ಮತ್ತು ಆಡಳಿತಾತ್ಮಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನೂತನ ರಾಜ್ಯಪಾಲರ ಪಾತ್ರ ಮಹತ್ವದ್ದಾಗಿದೆ. ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವಿನ ಸಾಂವಿಧಾನಿಕ ಸಂಬಂಧಗಳು, ಉನ್ನತ ಶಿಕ್ಷಣ ಸಂಸ್ಥೆಗಳ ಕಾರ್ಯಚಟುವಟಿಕೆಗಳು ಹಾಗೂ ಸಾರ್ವಜನಿಕ ಜೀವನಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ರಾಜ್ಯಪಾಲರ ಹುದ್ದೆ ತನ್ನದೇ ಆದ ಮಹತ್ವ ಹೊಂದಿದೆ.

ಸವಾಲುಗಳನ್ನು ಮೆಟ್ಟಿ ನಿಂತ ಬದುಕಿನ ಪಯಣ

ಡಾ. ಸುಧಾ ಯಾದವ್ ಅವರ ಜೀವನವನ್ನು ಗಮನಿಸಿದರೆ, ವೈಯಕ್ತಿಕ ನಷ್ಟದ ಬಳಿಕವೂ ಸಾರ್ವಜನಿಕ ಬದುಕಿನಲ್ಲಿ ಸಾಧನೆ ಮಾಡಬಹುದೆಂಬುದಕ್ಕೆ ಅವರ ಪಯಣ ಉದಾಹರಣೆಯಾಗಿದೆ. ಕಾರ್ಗಿಲ್ ಯುದ್ಧದಲ್ಲಿ ಪತಿಯನ್ನು ಕಳೆದುಕೊಂಡ ನೋವಿನ ನಡುವೆಯೇ ಇಬ್ಬರು ಮಕ್ಕಳನ್ನು ಬೆಳೆಸಿದ ಅವರು, ಶಿಕ್ಷಣ, ರಾಜಕೀಯ ಮತ್ತು ಸಾರ್ವಜನಿಕ ಸೇವೆಯ ಕ್ಷೇತ್ರಗಳಲ್ಲಿ ಮುನ್ನಡೆದಿದ್ದಾರೆ.

ರಸಾಯನಶಾಸ್ತ್ರದಲ್ಲಿ ಪಿಎಚ್’ಡಿ, ಲೋಕಸಭಾ ಸದಸ್ಯತ್ವ, ಬಿಜೆಪಿಯ ಉನ್ನತ ಮಟ್ಟದ ಸಂಘಟನಾತ್ಮಕ ಜವಾಬ್ದಾರಿ ಹಾಗೂ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದಲ್ಲಿ ಸೇವೆ-ಇವೆಲ್ಲವೂ ಅವರ ಸಾರ್ವಜನಿಕ ಜೀವನದ ಪ್ರಮುಖ ಮೈಲಿಗಲ್ಲುಗಳಾಗಿವೆ.

ಇದೀಗ ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಂಡಿರುವುದು ಅವರ ದೀರ್ಘ ಸಾರ್ವಜನಿಕ ಪಯಣದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಅವರ ಅನುಭವ ಮತ್ತು ಹಿನ್ನೆಲೆ ಕರ್ನಾಟಕದ ರಾಜಭವನದ ಕಾರ್ಯಚಟುವಟಿಕೆಗಳಲ್ಲಿ ಹೇಗೆ ಪ್ರತಿಫಲಿಸಲಿದೆ ಎಂಬುದು ಮುಂದಿನ ದಿನಗಳಲ್ಲಿ ಗಮನಾರ್ಹವಾಗಿರಲಿದೆ.

ಕಾರ್ಗಿಲ್ ಯುದ್ಧದಲ್ಲಿ ಪತಿಯನ್ನು ಕಳೆದುಕೊಂಡ ವೀರನಾರಿಯಿಂದ ದೇಶದ ಪ್ರಮುಖ ಸಾಂವಿಧಾನಿಕ ಹುದ್ದೆಯವರೆಗೆ ಡಾ. ಸುಧಾ ಯಾದವ್ ಅವರು ಸಾಗಿರುವ ಪಯಣ, ವೈಯಕ್ತಿಕ ಸಂಕಷ್ಟಗಳನ್ನು ಮೀರಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳುವ ಛಲದ ಕಥೆಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

PES ShivamoggaKalpa News Advertising Disclaimer

Tags: Dr Sudha YadavKargil Warಕರ್ನಾಟಕ ರಾಜ್ಯಪಾಲಕಾರ್ಗಿಲ್ ಯುದ್ಧಡಾ. ಸುಧಾ ಯಾದವ್ದ್ರೌಪದಿ ಮುರ್ಮುರಾಷ್ಟ್ರಪತಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು ವಿಭಾಗದಲ್ಲಿ 10 ರೈಲುಗಳ ಮಾರ್ಗ ಬದಲಾವಣೆ

kalpa News

kalpa News

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL