ಕಲ್ಪ ಮೀಡಿಯಾ ಹೌಸ್ | ಸುಳ್ಯ |
ಹಲ್ಲೆ ಪ್ರಕರಣವೊಂದರಲ್ಲಿ 35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸುಳ್ಯದ ಆರೋಪಿ ಬಾಲನ್(73) ಎಂಬಾತನನ್ನು ಕೇರಳದಲ್ಲಿ ಬಂಧಿಸಲಾಗಿದೆ.
ಏನಿದು ಘಟನೆ?
1990ರಲ್ಲಿ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ನಾಗಪಟ್ಟಣ ಎಂಬಲ್ಲಿ ಅಕ್ರಮ ಕೂಟ ಸೇರಿ ಶಾಂತಪ್ಪ ಮತ್ತು ಸುಬ್ಬಯ್ಯ ಅವರಿಗೆ ತಲ್ವಾರ್’ನಿಂದ ಕಡಿದು ತೀವ್ರ ಸ್ವರೂಪದ ಗಾಯವಾಗಿತ್ತು.
ಆರೋಪಿ ಬಾಲನ್ ಕೇರಳದ ತ್ರಿಶೂರ್ ಜಿಲ್ಲೆಯ ನಾಟಿ ಮನೆ ಎಂಬಲ್ಲಿ 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಛಲ ಬಿಡದ ಪೊಲೀಸರು ಆತನನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post