ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಹಾಟ್ ಕ್ಷೇತ್ರ ಎಂದೇ ಸೆನ್ಸೇಷನ್ ಕ್ರಿಯೇಟ್ ಮಾಡಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಕಾಂಗ್ರೆಸ್ ನಾಯಕರ ಜೊತೆಯಲ್ಲಿ ರಹಸ್ಯ ಸಭೆ ನಡೆಸಿದ್ದಾರೆ ಎನ್ನಲಾಗಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದು ಹರಿದಾಡುತ್ತಿದ್ದು, ಇದರ ಸತ್ಯಾಸತ್ಯತೆ ತಿಳಿದುಬರಬೇಕಿದೆ.
ಬೆಂಗಳೂರಿನ ಖಾಸಗೀ ಹೊಟೇಲ್’ವೊಂದರಲ್ಲಿ ಸಭೆ ನಡೆದಿದೆ ಎನ್ನಲಾಗಿದ್ದು, ಚುನಾವಣೆಯಲ್ಲಿ ತಮ್ಮ ಪರ ಕೆಲಸ ಮಾಡಿದ ಕೆಲವು ಕಾಂಗ್ರೆಸ್ ನಾಯಕರಿಗೆ ಕೃತಜ್ಞತೆ ಹೇಳಲು ಪಾರ್ಟಿ ಏರ್ಪಡಿಸಲಾಗಿತ್ತು ಎಂದು ಹೇಳಲಾಗಿದೆ.
ಸುಮಲತಾ ಜೊತೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಚೆಲುವರಾಯಸ್ವಾಮಿ, ನರೇಂದ್ರಸ್ವಾಮಿ, ಚಂದ್ರಶೇಖರ್, ರಘುವೀರ್ ಗೌಡ, ರಮೇಶ್ ಬಂಡಿಸಿದ್ದೇಗೌಡ, ಗಣಿಗ ರವಿಕುಮಾರ್ ಮಳವಳ್ಳಿ ಶಿವರಾಮ್ , ರಾಕ್ ಲೈನ್ ವೆಂಕಟೇಶ್ ಸಭೆ ನಡೆಸಿದ್ದರು ಎನ್ನಲಾಗಿದೆ.

















